ಚಂದ್ರನು ಕುಂಭ ರಾಶಿಯಿಂದ ಬುಧವಾರ ರಾತ್ರಿ 11:05ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕಟಕ ರಾಶಿಯವರು ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ ಇದು ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ಹೀಗಾಗಿ ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಕುಂಭ ರಾಶಿಯವರಿಗೆ ಒಂಟಿತನ ನಿಮ್ಮನ್ನು ಕಾಡಬಹುದು. ತುಲಾ ರಾಶಿಯವರು ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಮಿಥುನ ರಾಶಿಯವರು ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (2-08-2023)
ಮೇಷ: ಆರೋಗ್ಯ ಸಂಬಂಧಿ ಖರ್ಚು ಸಾಧ್ಯತೆ. ಕುಟುಂಬ ಸದಸ್ಯರ ಸಂಪೂರ್ಣ ಬೆಂಬಲ ಸಿಗಲಿದೆ. ಅಪರೂಪದ ವ್ಯಕ್ತಿಗಳ ಪರಿಚಯದಿಂದಾಗಿ ಅನೇಕ ವಿಚಾರಗಳು ಮನಸ್ಸಿನ ಆಳಕ್ಕೆ ಇಳಿಯುವುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7
ವೃಷಭ: ಆರ್ಥಿಕವಾಗಿ ಸದೃಢತೆ. ಅನೇಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಉತ್ತಮ ಕಾಲ. ಹೂಡಿಕೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಯಾರನ್ನೂ ನಂಬಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಸಂತೃಪ್ತ ಜೀವನ, ಕಾರ್ಯದಲ್ಲಿ ಯಶಸ್ಸು ಸಿಗುವುದು. ಆಪ್ತ ಸ್ನೇಹಿತರೊಂದಿಗೆ ಮಾತು. ದಿನದ ಕೊನೆಯ ಭಾಗದಲ್ಲಿ ಮಾನಸಿಕವಾಗಿ ದುರ್ಬಲವಾಗುವ ಸಾಧ್ಯತೆ. ಮಕ್ಕಳೊಂದಿಗೆ ಕಠಿಣತೆ ಸಿಟ್ಟು ತರಿಸಬಹುದು.
ಆರ್ಥಿಕವಾಗಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಆಪ್ತರೊಂದಿಗೆ ಅತಿಯಾದ ಸಲುಗೆ ಒಳ್ಳೆಯದಲ್ಲ. ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ.
ಬೇರೆಯವರನ್ನು ಟೀಕೆ ಮಾಡುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ.
ಆರ್ಥಿಕವಾಗಿ ಸಾಧಾರಣ ಪ್ರಗತಿ. ಆತುರದ ಮಾತುಗಳಿಗೆ ನಿಯಂತ್ರಣ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಅತಿಥಿಗಳ ಆಗಮನದಿಂದ ಕಾರ್ಯ ವಿಳಂಬ. ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಸಿಂಹ: ಹಣಕಾಸು, ಹೂಡಿಕೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಒತ್ತಡದಿಂದ ಹೊರಬಂದು ಉತ್ಸಾಹದಲ್ಲಿ ಇರುವಿರಿ. ದೈಹಿಕವಾಗಿ ಮಾನಸಿಕವಾಗಿ ಆರೋಗ್ಯ ಉತ್ತಮ. ದಿಢೀರ್ ಧನಾಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಆರೋಗ್ಯದ ಬಗೆಗೆ ತುಂಬಾ ಕಾಳಜಿ ವಹಿಸಿ. ದಿನದ ಮಟ್ಟಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ. ಸಾಲದ ಮರುಪಾವತಿ ಆಗಲಿದೆ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಅತಿ ಆಪ್ತರೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅನಿವಾರ್ಯ ಕಾರಣಗಳಿಂದ ನೀವು ಇತರರೊಂದಿಗೆ ಜಗಳಕ್ಕೆ ಇಳಿಯುವ ಸಾಧ್ಯತೆ. ಆದಷ್ಟು ಮಾತಿನಲ್ಲಿ ನಿಯಂತ್ರಣ ಇರಲಿ. ಕುಟುಂಬದ ಆಪ್ತರು, ಸ್ನೇಹಿತರಿಂದ ಉಡುಗೊರೆ ಸಿಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಆರೋಗ್ಯ ಪರಿಪೂರ್ಣ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡಲಿದೆ. ಇಂದು ಮನೋರಂಜನೆಗೆ ಹೆಚ್ಚು ಮಹತ್ವ ಕೊಡುವ ಸಾಧ್ಯತೆ. ಆಪ್ತರು ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಧನಸ್ಸು: ಆರೋಗ್ಯ ಪರಿಪೂರ್ಣ. ಬಹಳ ದಿನಗಳ ಕನಸು ನನಸಾಗಲಿದೆ. ಆರ್ಥಿಕವಾಗಿ ಇಂದು ಸಬಲತೆ ಹೊಂದುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಂತೋಷದ ಜತೆ ಜತೆಗೆ ನಿಮ್ಮನ್ನು ಯಾರಾದರೂ ಟೀಕಿಸುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಕೌಟುಂಬಿಕ ತಾಪತ್ರಯ ನಿಮ್ಮನ್ನು ನಿರಾಸೆಗೊಳಿಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6
ಹೀಗೆ ನೋಡಿ ಭವಿಷ್ಯ ತಿಳಿಯಿರಿ..
ಮಕರ: ಆರೋಗ್ಯ ದಿನದ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ ಆದಷ್ಟು ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಪುಷ್ಟಿ ನೀಡಲಿದೆ. ಆರ್ಥಿಕವಾಗಿ ಬಲಗೊಳ್ಳುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕುಂಭ: ಕುಟುಂಬ ಸದಸ್ಯರ ಅನಾರೋಗ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಒಂಟಿತನ ನಿಮ್ಮನ್ನು ಕಾಡಬಹುದು. ಬಾಕಿ ಇರುವ ಕೆಲಸ ಕಾರ್ಯಗಳನ್ನು ಮುಂದುಡುವುದು ಬೇಡ. ಅತಿಯಾದ ಆಲಸ್ಯದಿಂದ ಹೊರ ಬಂದು ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!
ಮೀನ: ಆಪ್ತರು ನೀಡುವ ಶುಭ ಸಂದೇಶ ನಿಮ್ಮನ್ನು ಹರ್ಷಿತರನ್ನಾಗಿ ಮಾಡುವುದು. ಭರವಸೆಯ ಬದುಕು ರೂಪುಗೊಳ್ಳಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಉದ್ಯೊಗಿಗಳಿಗೆ ಕನಸಿನ ಭರವಸೆ ಚಿಗುರೂಡೆಯಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com