ಚಂದ್ರನು ಭಾನುವಾರವೂ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಕನ್ಯಾ ರಾಶಿಯವರಿಗೆ ಅನೇಕ ವಿಷಯಗಳು ಒತ್ತಡ ಜತೆಗೆ ಖರ್ಚು ಹೆಚ್ಚಾಗುವ ಸಾಧ್ಯತೆಯೂ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡವೇ ಬೇಡ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (20-08-2023)
ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ಸ್ಥಳಗಳ ಭೇಟಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾದಿ ಮರುಕಳಿಸುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಹಣದ ಮೂಲ ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವುದು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟು ಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ಪ್ರಗತಿ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ. ಅನಗತ್ಯ ಖರ್ಚು. ಆರೋಗ್ಯ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಧನಸ್ಸು: ಅನಿರೀಕ್ಷಿತ ಪ್ರಯಾಣ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಇಂಥದ್ದೇ ಹೂವಿನಿಂದ ಪೂಜಿಸಬೇಕು ಎಂಬುದು ಇದೆಯೇ?; ಇಲ್ಲಿದೆ ಉತ್ತರ
ಮಕರ: ಆರೋಗ್ಯ ಉತ್ತಮ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕುಂಭ: ಆಹಾರದ ಕ್ರಮದಿಂದ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com