Site icon Vistara News

Dina Bhavishya : ಈ ರಾಶಿಯವರು ಆತುರದಲ್ಲಿ ಹೂಡಿಕೆ ಮಾಡ್ಬೇಡಿ!

Dina bhavishya Don t invest with urgent

ಚಂದ್ರನು ಬುಧವಾರ ಸಂಜೆ 7.22ರವರೆಗೆ ವೃಶ್ಚಿಕ ರಾಶಿಯಲ್ಲೆ ಇರಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕನ್ಯಾ ರಾಶಿಯವರು ಮನೆ ಸದಸ್ಯರೊಂದಿಗೆ ಕಲಹ ಉಂಟಾಗಬಹುದು. ವಾತಾವರಣವೂ ಹದಗೆಡಡಬಹುದು. ತುಲಾ ರಾಶಿಯವರು ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಬೇಡಿ. ಮೀನ ರಾಶಿಯವರು ಗೌಪ್ಯ ವಿಷಯಗಳನ್ನು ಬಹಿರಂಗ ಪಡಿಸದೆ ಇರುವುದು ಒಳ್ಳೆಯದು. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಲು ಯೋಚನೆ ಮಾಡಿ. ಮಕರ ರಾಶಿಯವರು ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕುಂಭ ರಾಶಿಯವರಿಗೆ ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 27:30 ವಾರ: ಬುಧವಾರ
ನಕ್ಷತ್ರ: ಸ್ವಾತಿ 08:06 ಯೋಗ: ಬ್ರಹ್ಮ 21:43
ಕರಣ: ಗರಜ 15:23 ಅಮೃತ ಕಾಲ: ರಾತ್ರಿ 11:55 ರಿಂದ ಮಧ್ಯರಾತ್ರಿ 01:35 ರವರೆಗೆ

ಸೂರ್ಯೋದಯ : 06:08  ಸೂರ್ಯಾಸ್ತ : 06:36

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಉತ್ಸಾಹದ ವಾತಾವರಣ ಇರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಾಧಿಸಿಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 5

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ.
ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗಲಿದೆ. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 3

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತತರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 7

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗ ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ಪ್ರತಿಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಕನ್ಯಾ: ಮನೆ ಸದಸ್ಯರೊಂದಿಗೆ ಕಲಹ ಆಗಲಿದೆ. ವಾತಾವರಣವೂ ಹದಗೆಡಡಬಹುದು. ಕೆಲಸದಲ್ಲಿ ಹಿರಿಯ ಅಧಿಕಾರಿಗಳಿಂದ ಒತ್ತಡ ಬರಬಹುದು. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 8

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡಲಿದ್ದಾರೆ. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ಒತ್ತಡ ಉಂಟು ಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿ. ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಯಾವ ಕಾರ್ಯ ಮಾಡಿದರೆ ಮನೆಯಲ್ಲಿ ಶಾಂತಿ ನೆಲೆಸುತ್ತದೆ? ಇಲ್ಲಿದೆ ನೋಡಿ ಉತ್ತರ

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version