Site icon Vistara News

Dina Bhavishya : ಈ ರಾಶಿಯವರಿಗೆ ಕೋಪದಿಂದಲೇ ಅಪಾಯ!

Dina Bhavishya

ಚಂದ್ರನು ಗುರುವಾರ ಧನಸ್ಸು ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಪ್ರಗತಿ ಸಿಗಲಿದ್ದು, ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ವೃಷಭ ರಾಶಿಯವರು ಅನಿವಾರ್ಯ ಕಾರಣಗಳಿಂದ ಅಪರಿಚಿತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಹೀಗಾಗಿ ಮಾತು ಮಿತವಾಗಿರಲಿ. ಸಿಂಹ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ತುಲಾ ರಾಶಿಯವರು ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸುಮ್ಮನೆ ವ್ಯರ್ಥ ಪ್ರಯತ್ನ ಮಾಡಬೇಡಿ. ಮಕರ ರಾಶಿಯವರ ಬಹು ದಿನಗಳ ಕನಸು ನನಸಾಗುವ ಕಾಲವಿದು. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 27:10 ವಾರ: ಗುರುವಾರ
ನಕ್ಷತ್ರ: ವಿಶಾಖಾ 09:02 ಯೋಗ: ಇಂದ್ರ 20:35
ಕರಣ: ವಿಷ್ಟಿ (ಭದ್ರ) 15:26 ಅಮೃತ ಕಾಲ: ರಾತ್ರಿ 10:46ರಿಂದ ಮಧ್ಯರಾತ್ರಿ 12:22 ರವರೆಗೆ

ಸೂರ್ಯೋದಯ : 06:08  ಸೂರ್ಯಾಸ್ತ : 06:36

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಸಂಬಂಧ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ .
ಅದೃಷ್ಟ ಸಂಖ್ಯೆ: 8

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅನಿವಾರ್ಯ ಕಾರಣಗಳಿಂದ ಅಪರಿಚಿತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಹೀಗಾಗಿ ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಹಳೆಯ ಪರಿಚಿತರು ಸಂಪರ್ಕಕ್ಕೆ ಸಿಗಬಹುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡಬಹುದು. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಇರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಆಗಲಿದೆ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ನಿಮ್ಮ ನಗುವಿನ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಸುಮ್ಮನೆ ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿಸಿದಷ್ಟು ಲಾಭವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ಹೀಯಾಳಿಸುವ ಸಾಧ್ಯತೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ನಾಗ ಶಾಪ ಹೇಗೆ ಉಂಟಾಗುತ್ತದೆ? ಇಲ್ಲಿದೆ ನೋಡಿ ಉತ್ತರ

ಮಕರ: ಬಹು ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವಿರಿ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version