ಚಂದ್ರನು ಶುಕ್ರವಾರವೂ ಧನಸ್ಸು ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ನಕಾರಾತ್ಮಕ ಆಲೋಚನೆಗಳೇ ಶಾಂತಿ ಭಂಗ ಮಾಡಲಿದೆ. ಹಣದ ಹೂಡಿಕೆ ಕುರಿತು ವೃಷಭ ರಾಶಿಯವರು ಆಲೋಚಿಸಿ. ಕಟಕ ರಾಶಿಯವರಿಗೆ ನ್ಯಾಯಾಲಯದಲ್ಲಿ ಯಾವುದೆ ವ್ಯಾಜ್ಯ ಪ್ರಕರಣಗಳು ಇದ್ದರೂ ಅದು ವಿಜಯವನ್ನು ತಂದು ಕೊಡಲಿದೆ. ತುಲಾ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ವೃಶ್ಚಿಕ ರಾಶಿಯವರು ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ವಹಿಸುವುದು ಸೂಕ್ತ. ಕುಂಭ ರಾಶಿಯವರು ತಮ್ಮ ಕೋಪದಿಂದಲೇ ಅಪಾಯ ತಂದುಕೊಳ್ಳುವ ಸಾಧ್ಯತೆ ಇದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (25-08-2023)
ಮೇಷ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಶಾ ಭಂಗ ಮಾಡುವ ಸಾಧ್ಯತೆ ಇದೆ. ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣದ ಸಾಧ್ಯತೆ ಇದೆ. ಬಹು ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಹಣದ ಹೂಡಿಕೆ ಕುರಿತು ಆಲೋಚಿಸಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮ್ಮದಲ್ಲದ ವಿಷಯಕ್ಕೆ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅತಿಯಾದ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಲಕ್ಷ್ಮಿ ದೇವಿ ವರ ಪಡೆಯಲು ಯಾವ ವಿಧಿವಿಧಾನ ಪಾಲಿಸಬೇಕು? ಇಲ್ಲಿದೆ ಮಾಹಿತಿ
ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ ಇರಲಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com