Site icon Vistara News

Dina Bhavishya : ಈ ರಾಶಿಯವರ ಆಸೆ-ಆಕಾಂಕ್ಷೆಗಳು ಇಂದು ಯಶಸ್ಸನ್ನು ತಂದುಕೊಡಲಿವೆ

Dina Bhavishya

ಚಂದ್ರನು ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ಕನ್ಯಾ ರಾಶಿಯವರು ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 26:19 ವಾರ: ಸೋಮವಾರ
ನಕ್ಷತ್ರ: ಕೃತ್ತಿಕಾ 15:54 ಯೋಗ: ವ್ಯಾಘಾತ 22:15
ಕರಣ: ಬಾಲವ 14:54 ಅಮೃತಕಾಲ: ಮಧ್ಯಾಹ್ನ 01:36 ರಿಂದ 03:09
ದಿನದ ವಿಶೇಷ: ಶ್ರೀಕೃಷ್ಣಾ ಜನ್ಮಾಷ್ಟಮಿ

ಸೂರ್ಯೋದಯ : 06:08   ಸೂರ್ಯಾಸ್ತ : 06:34

ರಾಹುಕಾಲ: ಬೆಳಗ್ಗೆ 07:42 ರಿಂದ 09:15
ಗುಳಿಕಕಾಲ: ಮಧ್ಯಾಹ್ನ 01:54 ರಿಂದ 03:28
ಯಮಗಂಡಕಾಲ: ಬೆಳಗ್ಗೆ 10:48 ರಿಂದ 12:21

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ .ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು.ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ.ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version