Site icon Vistara News

Dina Bhavishya : ಈ ರಾಶಿಯವರು ಇವತ್ತೊಂದು ದಿನ ಆಪ್ತರಿಂದ ದೂರವಿದ್ದರೆ ಒಳ್ಳೆಯದು

dina bhavishya

ಚಂದ್ರನು ಭಾನುವಾರವೂ ಮಕರ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕಟಕ, ತುಲಾ, ಧನಸ್ಸು, ಕುಂಭ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಕನ್ಯಾ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯ ಪೋಷಕರ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಮಕರ ರಾಶಿಯವರಿಗೆ ಅನಾವಶ್ಯಕ ಜಗಳ ನಡೆಯುವ ಸಾಧ್ಯತೆ ಇದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-08-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 21:31 ವಾರ: ಭಾನುವಾರ
ನಕ್ಷತ್ರ: ಮೂಲಾ 07:15/ ಪೂರ್ವಾಷಾಡ 29:14 ಯೋಗ: ಪ್ರೀತಿ 13:25
ಕರಣ: ವಣಿಜ 10:54 ಅಮೃತ ಕಾಲ: ಮಧ್ಯರಾತ್ರಿ 12:51 ರಿಂದ 02:19 ರವರೆಗೆ

ಸೂರ್ಯೋದಯ : 06:15  ಸೂರ್ಯಾಸ್ತ : 06:46

ರಾಹುಕಾಲ: ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಆಪ್ತರೇ ನಿಮಗೆ ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು. ವ್ಯಾಪಾರ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಆಹಾರ ಹಿತ ಮಿತವಾಗಿರಲಿ, ಇಲ್ಲವಾದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ, ಆತುರದಲ್ಲಿ ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಉದ್ಯೋಗಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಖರ್ಚಿನಷ್ಟೇ ಹಣಕಾಸಿನ ಹರಿವು ಹೆಚ್ಚಾಗಲಿದೆ. ಕುಟುಂಬದಲ್ಲಿ ಚರ್ಚಿಸುವ ವಿಷಯಗಳು ನಿಮ್ಮನ್ನು ಭಾವುಕರನ್ನಾಗಿ ಮಾಡುವುದು. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಸೃಜನಾತ್ಮಕ ಕೆಲಸ ಕಾರ್ಯಗಳಿಂದ ಯಶಸ್ಸು ಸಿಗಲಿದೆ.
ಉತ್ತಮ ಆರೋಗ್ಯ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಲಿದ್ದಿರಿ. ಅತಿಥಿಗಳ ಆಗಮನ ಸಂತಸ ತರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗಲಿದೆ. ನಿಮ್ಮ ನಡವಳಿಕೆ ಕುಟುಂಬದ ಸದಸ್ಯರಿಗೆ ಕೋಪ ತರಿಸಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಹೆಚ್ಚು ಲಾಭವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನಿರೀಕ್ಷಿತ ಘಟನೆಗಳು ಕೆಲವು ಸಮಸ್ಯೆಗಳನ್ನು ಉಂಟು ಮಾಡಬಹುದು. ಒತ್ತಡಕ್ಕೆ ಒಳಗಾಗದೆ, ತಾಳ್ಮೆಯಿಂದ ಇರಿ. ಹಿರಿಯರ ಮಾರ್ಗದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಪೋಷಕರ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೆಲಸ ಕಾರ್ಯಗಳು ಆಲಸ್ಯದಿಂದ ಸಾಗಲಿದ್ದು, ಮುಂಜಾಗ್ರತೆ ವಹಿಸಿ. ವ್ಯಾಪಾರ ವ್ಯವಹಾರ ಸಾಮಾನ್ಯವಾಗಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಧನಸ್ಸು: ಅಧಿಕ ಉತ್ಸಾಹದಿಂದ ಇರುವಿರಿ. ಆದರೂ ಕೆಲಸದ ಒತ್ತಡ ತಪ್ಪಲ್ಲ. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಪ್ರದರ್ಶನ ಮಾಡಲಿದ್ದರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ.
ಕೌಟುಂಬಿಕ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಯಾವ ರಾಶಿಗೆ ಅದ್ಭುತವಾದ ಸಂದರ್ಭ ಬರಲಿದೆ? ಇಲ್ಲಿದೆ ಮಾಹಿತಿ

ಮಕರ: ಮುಂಗೋಪಿ ಮಾತುಗಳಿಂದ ತೊಂದರೆಗೆ ಸಿಲುಕಿ ಅಪಾಯ ತಂದುಕೊಳ್ಳುವುದು ಬೇಡ. ಭೂ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇದೆ. ಜೊತೆಯಲ್ಲಿ ಇರುವವರು ಅನಾವಶ್ಯಕ ಜಗಳ ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ನಿಗಾ ಇರಲಿ. ಉದ್ಯೋಗಿಗಳಿಗೆ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಅನಾವಶ್ಯಕ ವಿಚಾರಗಳು ನಿಮ್ಮ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಹನೆ ಕಳೆದುಕೊಳ್ಳುವುದು ಬೇಡ. ನೆರೆಹೊರೆಯವರ ಜತೆಗೆ ವಾದಕ್ಕೆ ಇಳಿಯುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ಇತರರು ಒಪ್ಪಿಕೊಳ್ಳದಿರಬಹುದು. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಇಳಿಯುವುದು ಬೇಡ. ವ್ಯಾಪಾರ ವ್ಯವಹಾರ ಮಧ್ಯಮ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version