ಚಂದ್ರನು ಮಕರ ರಾಶಿಯಿಂದ ಕುಂಭ ರಾಶಿಗೆ ಸೋಮವಾರ ಬೆಳಗ್ಗೆ 10:31ಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಕುಂಭ ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವಾರದ ಮೊದಲ ದಿನವೇ ಹಲವು ರಾಶಿಯ ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ವೃಷಭ ರಾಶಿಯವರಿಗೆ ದಿನದ ಮಟ್ಟಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಕಟಕ ರಾಶಿಯವರಿಗೆ ಸಂಗಾತಿಯ ಮಾತುಗಳು ಕಹಿ ಬೇವಿನಂತೆ ಇರಬಹುದು. ಸಿಂಹ ರಾಶಿಯವರು ವಿನಾಕಾರಣ ಸಂಬಂಧಿಕರೊಂದಿಗೆ ಮಾತಿಗೆ ಇಳಿದು ಅಪಾಯ ತಂದುಕೊಳ್ಳುವುದು ಬೇಡ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (28-08-2023)
ಮೇಷ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಿಶೇಷ ಅತಿಥಿಗಳ ಆಗಮನದಿಂದ ಹರುಷ ತರಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ವೃಷಭ: ದೈಹಿಕವಾಗಿ ಮತ್ತು ಮಾನಸಿಕವಾಗಿ ಇಂದು ಕೊಂಚ ಮಟ್ಟಿಗೆ ಬಳಲುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನ ಸಂತಸ ಹೆಚ್ಚಿಸಲಿದೆ. ಆರ್ಥಿಕವಾಗಿ ಪ್ರಗತಿ. ಆತುರದಲ್ಲಿ ಮಾಡುವ ಕೆಲಸ ಅಪಾಯ ಇರಲಿದೆ, ಎಚ್ಚರಿಕೆ ಇರಲಿ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರುಕುಳ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ಮಿಥುನ: ಹಳೆಯ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಪೋಷಕರಿಂದ ಹಣಕಾಸು ರೀತಿಯಿಂದ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6
ಕಟಕ: ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ದಿನಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸಲಿದ್ದೀರಿ. ಅತಿಥಿಗಳ ಆಗಮನ ಸಂತಸ ತರುವುದು. ಸಂಗಾತಿಯ ಮಾತುಗಳು ಹಿತಕರವಾಗಿಲ್ಲದೆ ಇರಬಹುದು. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ, ಪ್ರೋತ್ಸಾಹ ಸಿಗುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ಹಿಂದೆ ಮಾಡಿದ ತಪ್ಪಿನ ಅರಿವಾಗುವುದು. ಕುಟುಂಬದ ಸದಸ್ಯರೊಂದಿಗೆ ಪ್ರವಾಸ ಬೆಳೆಸುವ ಸಾಧ್ಯತೆ ಇದೆ. ವಿನಾಕಾರಣ ಸಂಬಂಧಿಕರೊಂದಿಗೆ ಮಾತಿಗೆ ಇಳಿದು ಅಪಾಯ ತಂದುಕೊಳ್ಳುವುದು ಬೇಡ. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ಕನ್ಯಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮನಸ್ಸಿಗೆ ಸಮಾಧಾನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಬಿಡುವಿರದ ಕಾರ್ಯದಿಂದ ಒತ್ತಡ ಹೆಚ್ಚಾಗಲಿದೆ, ಅದರ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಿನದ ಕೊನೆಯಲ್ಲಿ ಮನೆಯ ಸದಸ್ಯರ ಭಿನ್ನಾಭಿಪ್ರಾಯ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9
ವೃಶ್ಚಿಕ: ಇಂದು ಎಲ್ಲಿಲ್ಲದ ಉತ್ಸಾಹ, ಸಂತಸ ಇರಲಿದೆ. ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುವುದು. ಯಾರಾದರೂ ನಿಮ್ಮ ಸಹಾಯವನ್ನು ಬೇಡುವ ಸಾಧ್ಯತೆ ಇದ್ದು, ಯೋಚಿಸಿ ಸಹಾಯ ಮಾಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ನಿರಂತರ ಪರಿಶ್ರಮದಿಂದ ಇಂದು ವಿಶ್ರಾಂತಿ ಸಿಗಲಿದೆ. ದಿನದ ಮಧ್ಯ ಭಾಗದಲ್ಲಿ ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ದ್ವಾದಶ ರಾಶಿಗಳ ಇಂದಿನ ಫಲಾಫಲ ಹೀಗಿದೆ ನೋಡಿ
ಮಕರ: ಒತ್ತಡಗಳಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ದಿನದ ಮಟ್ಟಿಗೆ ಸಣ್ಣ ಪ್ರಯಾಣ ಬೆಳೆಸಲಿದ್ದೀರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ಕುಂಭ: ದೀರ್ಘಕಾಲದ ಪ್ರಯಾಣದಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸುವರು. ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಇಂದು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ಅತಿಥಿಗಳ ಆಗಮನ ನಿಮ್ಮ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com