Site icon Vistara News

Dina Bhavishya : ಈ ರಾಶಿಯವರಿಗೆ ದಿನಪೂರ್ತಿ ಟೆನ್ಷನ್‌!

dina bhavishya

ಚಂದ್ರನು ಕುಂಭ ರಾಶಿಯಿಂದ ಬುಧವಾರ ಬೆಳಗ್ಗೆ 09:56ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು ಹಾಗೂ ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಚಂದ್ರನ ಬಲ ಇದ್ದರೂ ಇತರರ ಬಣ್ಣದ ಮಾತುಗಳನ್ನು ನಂಬಿ ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಕಟಕ ರಾಶಿಯವರು ಗೌಪ್ಯ ವಿಷಯಗಳನ್ನು ಇತತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಾಗಿರಿ. ಮೀನ ರಾಶಿಯವರು ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಉಂಟಾಗಲಿದೆ. ಇತರೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ
ತಿಥಿ: ಚತುರ್ದಶಿ 10:58 ವಾರ: ಬುಧವಾರ
ನಕ್ಷತ್ರ: ಧನಿಷ್ಠಾ 20:45 ಯೋಗ: ಅತಿಗಂಡ 21:31
ಕರಣ: ವಾಣಿಜ 10:58 ಅಮೃತ ಕಾಲ: ಬೆಳಗ್ಗೆ 11:42ರಿಂದ ಮಧ್ಯಾಹ್ನ 01:06ರವರೆಗೆ
ದಿನದ ವಿಶೇಷ: ಯಜುರುಪಾಕರ್ಮ, ಹಯಗ್ರೀವ ಜಯಂತಿ, ಶಿವಪವಿತ್ರಾರೋಪಣ

ಸೂರ್ಯೋದಯ : 06:15  ಸೂರ್ಯಾಸ್ತ : 06:46

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ಧಿಡೀರ್ ಪ್ರಯಾಣ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತತರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ನಂತರ ಬೇಸರ ಪಡುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ ಇರಲಿದೆ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ದಾಂಪತ್ಯ ಜೀವನಕ್ಕೆ ಕುಜನಿಂದ ಒಳಿತಾಗುತ್ತಾ?

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು.
ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version