Site icon Vistara News

Dina Bhavishya : ಈ ರಾಶಿಯವರು ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಬದುಕು ಬಂಗಾರ!

dina bhavishya

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೇ ಇರಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇತರರನ್ನು ಟೀಕಿಸುವ ಸಿಂಹ ರಾಶಿಯವರ ಈ ಅಭ್ಯಾಸದಿಂದಾಗಿ ಇಂದು ನೀವೇ ಕೆಲವು ಟೀಕೆಗಳನ್ನು ಎದುರಿಸುವ ಸಾಧ್ಯತೆಗಳಿವೆ. ಮೇಷ ರಾಶಿಯವರು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ ಬದಲಾಗಿ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ. ವೃಷಭ ರಾಶಿಯವರು ಬಹುಕಾಲದಿಂದ ಎದುರು ನೋಡುತ್ತಿದ್ದ ಅನುಭವಿಸುತ್ತಿದ್ದ ಒತ್ತಡಗಳೆಲ್ಲವೂ ಇಂದು ಶಮನಗೊಳ್ಳಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (5-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ
ತಿಥಿ: ಚೌತಿ 09:39 ವಾರ: ಶನಿವಾರ
ನಕ್ಷತ್ರ: ಉತ್ತರಾಭಾದ್ರಪದ 26:53 ಯೋಗ: ಸುಕರ್ಮ 23:10
ಕರಣ: ಬಾಲವ 09:39 ಅಮೃತ ಕಾಲ: ರಾತ್ರಿ 10:28 ರಿಂದ 11:57 ರವರೆಗೆ

ಸೂರ್ಯೋದಯ : 06:06 ಸೂರ್ಯಾಸ್ತ : 06:45

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆತ್ಮ ವಿಶ್ವಾಸದಿಂದ ಕಾರ್ಯದಲ್ಲಿ ಮುನ್ನುಗ್ಗಿ. ನಿಮ್ಮ ಹೆತ್ತವರ ಆರೋಗ್ಯದ ಬಗೆಗೆ ಹೆಚ್ಚುವರಿ ಗಮನ ಮತ್ತು ಎಚ್ಚರಿಕೆ ಅಗತ್ಯವಿದೆ. ಉದ್ಯೋಗಿಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಸಂತಸದ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಮಧುರತೆ ಇರಲಿದೆ.
ಅದೃಷ್ಟ ಸಂಖ್ಯೆ: 3

ಮಿಥುನ: ಸ್ನೇಹಿತರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ನಿಮ್ಮ ಸಲಹೆ ಪಡೆದುಕೊಳ್ಳುತ್ತಾರೆ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಇಂದಿನಿಂದಲೇ ಬಿಡಲು ಸಿದ್ಧವಾಗಿ. ಆರೋಗ್ಯ ಪರಿಪೂರ್ಣವಾಗಿದ್ದು, ದೈಹಿಕವಾಗಿ ಮಾನಸಿಕವಾಗಿ ಸದೃಢ. ವ್ಯಾಪಾರಿಗಳಿಗೆ ಅಧಿಕ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಹೆಚ್ಚಿನ ಉತ್ಸಾಹ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ದೇಹದ ನೋವಿನಿಂದ ಬಳಲುವ ಸಾಧ್ಯತೆ ಹೆಚ್ಚಿದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಇತರರನ್ನು ಟೀಕಿಸುವ ನಿಮ್ಮ ಈ ಅಭ್ಯಾಸದಿಂದಾಗಿ ನೀವೇ ಕೆಲವು ಟೀಕೆಗಳನ್ನು ಎದುರಿಸುವ ಸಾಧ್ಯತೆಗಳಿವೆ. ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ. ಆರೋಗ್ಯದ ಕುರಿತು ಕೊಂಚ ಮಟ್ಟಿಗೆ ಕಾಳಜಿ ವಹಿಸುವುದು ಒಳ್ಳೆಯದು. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ. ವಿವಾಹ ಅಪೇಕ್ಷಿತರು ಮನೆಯಲ್ಲಿಂದು ತಮ್ಮ ಗುರುಗಳೊಂದಿಗೆ ಮಾತನಾಡಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಹೊಸ ಹಣ ಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ಅತಿಥಿಗಳ ದಿಢೀರ್‌ ಆಗಮನದಿಂದ ಅಚ್ಚರಿ ಆಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿನ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಟ್ಟೆಯ ನೋವು ಕಾಡಬಹುದು, ಆಹಾರದಲ್ಲಿ ಮಿತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕ ಜೀವನ ತೃಪ್ತಿಕರವಾಗಿ ಇರಲಿದೆ.
ಅದೃಷ್ಟ ಸಂಖ್ಯೆ: 5

ಧನಸ್ಸು: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಒತ್ತಡ ಕಡಿಮೆಯಾಗಲು ನೀವು ಮಾದಕ ವಸ್ತುಗಳ ಸೇವನೆ ಮಾಡದೆ, ನಂಬಿದ ದೇವರು ಅಥವಾ ಗುರುಗಳಿಂದ ಅನುಗ್ರಹ ಪಡೆಯಿರಿ. ಎಲ್ಲವೂ ಶುಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

ತೀರ್ಥವನ್ನು ಎಲ್ಲಿ, ಹೇಗೆ ಸ್ವೀಕರಿಸಬೇಕು? ಈ ವಿಡಿಯೊದಲ್ಲಿ ಸಿಗಲಿದೆ ಪೂರ್ತಿ ಮಾಹಿತಿ

ಮಕರ: ಈ ರಾಶಿಯವರಂತೂ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಲೆಬೇಕು.
ಉದ್ಯೋಗದ ಸ್ಥಳದಲ್ಲಿ ಕೊಂಚ ಒತ್ತಡ. ಆರ್ಥಿಕ ಪ್ರಗತಿ ಉತ್ತಮ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ, ಆದರೆ ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು. ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಉದ್ಯೋಗಿಗಳಿಗೆ ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಆರೋಗ್ಯ ಪರಿಪೂರ್ಣ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ಬಹಳ ದಿನಗಳಿಂದ ಕಾಯುತ್ತಿದ್ದ ಉದ್ಯೋಗ ಸಂಬಂಧಿ ಒತ್ತಡ ನಿವಾರಣೆ ಆಗಿ ಹೊಸ ಭರವಸೆ ಮೂಡಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸುವುದು ಅಗತ್ಯ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಇರಲಿದೆ. ಗುರು ದತ್ತಾತ್ರೇಯರ ಆರಾಧನೆ ಮಾಡಿ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version