Site icon Vistara News

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌!

dina bhavishya

ಚಂದ್ರನು ಭಾನುವಾರವೂ ಮೇಷ ರಾಶಿಯಲ್ಲೇ ಇರಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಮನೆಯಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಬಹುದು ಆದಷ್ಟು ಮಾತಿನಲ್ಲಿ ತೂಕ ಇರಲಿ. ಕನ್ಯಾ ರಾಶಿಯವರು ಹಳೆಯ ವಿಷಯಗಳನ್ನು ಕೆದಕಿ ಕಠಿಣ ಸಮಸ್ಯೆ ಮಾಡಿಕೊಳ್ಳುವುದು ಬೇಡ. ವೃಶ್ಚಿಕ ರಾಶಿಯವರು ಭೂಮಿಯನ್ನು ಮಾರಾಟ ಮಾಡುವ ಮೂಲಕ ಉತ್ತಮ ಹಣವನ್ನು ಪಡೆಯಬಹುದು. ಧನಸ್ಸು ರಾಶಿಯವರು ಇಂದು ಯಾವುದೇ ದಿಢೀರ್ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-08-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ
ತಿಥಿ: ಪಂಚಮಿ 07:09 / ಷಷ್ಠಿ 29:19 ವಾರ: ಭಾನುವಾರ
ನಕ್ಷತ್ರ: ರೇವತಿ 25:42 ಯೋಗ: ಧೃತಿ 20:25
ಕರಣ: ತೈತುಲ 07:09 ಅಮೃತ ಕಾಲ: ರಾತ್ರಿ 11:27 ರಿಂದ 12:58ರವರೆಗೆ
ದಿನದ ವಿಶೇಷ : ಹಿರೋಷಿಮಾ ದಿನ, ವಿಶ್ವ ಸ್ನೇಹ ದಿನ

ಸೂರ್ಯೋದಯ : 06:06 ಸೂರ್ಯಾಸ್ತ : 06:45

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅನಗತ್ಯ ಚಿಂತೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಕಾರ್ಯದಲ್ಲಿ ಯಶಸ್ಸು ಸಿಕ್ಕಿತು. ಮನೆಯಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಬಹುದು ಆದಷ್ಟು ಮಾತಿನಲ್ಲಿ ತೂಕ ಇರಲಿ. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಉತ್ತಮಗೊಳ್ಳಲಿದೆ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತು ಕಾಳಜಿ ವಹಿಸಿ. ಅದರಲ್ಲೂ ಗರ್ಭಿಣಿಯರು ವಿಶೇಷ ಕಾಳಜಿಯ ದಿನವಾಗಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಸಾಧ್ಯತೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಮಿಥುನ: ಸಂತೃಪ್ತ ಜೀವನ. ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢ. ವ್ಯಾಪಾರ ವ್ಯವಹಾರಗಳಲ್ಲಿ ತೊಡಗಿಕೊಂಡವರು ಜಾಗೃಕರಾಗಿರಿವುದು ಒಳಿತು. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಿವಾಹ ಆಕಾಂಕ್ಷಿಗಳು ಇಂದು ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮಗೆ ಯಾವುದಾದರೂ ಒಂದು ರೀತಿಯಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿಕೊಳ್ಳಿ. ನಿಮ್ಮ ಹಳೆಯ ಯಾವುದೇ ರೋಗ ಇಂದು ನಿಮ್ಮನ್ನು ಕಾಡಬಹುದು. ಆರ್ಥಿಕವಾಗಿ ಇಂದು ಹೆಚ್ಚಿನ ಖರ್ಚು ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಹಳೆಯ ವಿಷಯಗಳನ್ನು ಕೆದಕಿ ಕಠಿಣ ಸಮಸ್ಯೆ ಮಾಡಿಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ,
ಮಕ್ಕಳ ಜತೆಗಿನ ನಿಮ್ಮ ಕಠಿಣ ವರ್ತನೆ ನಿಮಗೆ ಸಿಟ್ಟು ಬರಿಸಬಹುದು.
ಯಾವುದೇ ಆಧ್ಯಾತ್ಮಿಕ ಗುರುವನ್ನು ಭೇಟಿ ಮಾಡಲು ಹೋಗಬಹುದು. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಭೂಮಿಯನ್ನು ಖರೀದಿಸಿದ ಮತ್ತು ಈಗ ಅದನ್ನು ಮಾರಾಟ ಮಾಡಲು ಬಯಸುವ ಜನರು ಇಂದು ಉತ್ತಮ ಖರೀದಿದಾರರನ್ನು ಕಾಣಬಹುದು ಮತ್ತು ಭೂಮಿಯನ್ನು ಮಾರಾಟ ಮಾಡುವ ಮೂಲಕ ಅವರು ಉತ್ತಮ ಹಣವನ್ನು ಪಡೆಯಬಹುದು. ಮನೆಯಲ್ಲಿ ಹಿರಿಯರ ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೆಚ್ಚಿನ ಕಿರಿಕಿರಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ಯಾವುದೇ ದಿಢೀರ್ ನಿರ್ಧಾರ ಇಂದು ತೆಗೆದುಕೊಳ್ಳುವುದು ಬೇಡ. ನಿಮ್ಮ ನಿರ್ಲಕ್ಷತನದ ಮತ್ತು ಊಹಿಸಲಾಗದ ವರ್ತನೆಯಿಂದ ನಿಮ್ಮ ಜತೆಗಿರುವ ಯಾರಾದರೂ ಬೇಸರಗೊಳ್ಳಬಹುದು. ಆರೋಗ್ಯದ ಕುರಿತು ವಿಶೇಷ ಗಮನ ಹರಿಸಿ. ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಉದ್ಯೋಗಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಂತಾನ ಸಮಸ್ಯೆ ಇದ್ದಾಗ ಈ ತಪ್ಪು ಮಾಡಬೇಡಿ!

ಮಕರ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಸೆಳೆಯಲಿದೆ. ಹಣದ ಹರಿವು ಹೆಚ್ಚಾಗಲಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೆಲವು ದೂರುಗಳು ಬರಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ಆರ್ಥಿಕವಾಗಿ ಇಂದು ಸಮಸ್ಯೆ ಎದುರಿಸುವ ಸಾಧ್ಯತೆಗಳು ಇವೆ, ಆದಷ್ಟು ಖರ್ಚುಗಳಿಗೆ ಕಡಿವಾಣ ಹಾಕಿ. ನೆರೆಮನೆಯವರ ಜತಗಿನ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಆದಷ್ಟು ಮಾತಿಗೆ ವಿರಾಮ ಇರಲಿ. ಆರೋಗ್ಯ ಮಧ್ಯಮ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version