Site icon Vistara News

Dina Bhavishya : ಈ ರಾಶಿಯವರಿಗೆ ಸಂಶಯ ಸ್ವಭಾವವೇ ಮುಳುವು!

Dina Bhavishya

ಚಂದ್ರನು ಮೇಷ ರಾಶಿಯಿಂದ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರ ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವೃಷಭ ರಾಶಿಯವರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ನಿಮ್ಮ ಕೋಪವು ಹದಗೆಡಿಸಲಿದೆ. ಹೀಗಾಗಿ ತಾಳ್ಮೆಯಿಂದ ವರ್ತಿಸಿ. ಸಿಂಹ ರಾಶಿಯವರ ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ವೃಶ್ಚಿಕ ರಾಶಿಯವರ ಉದಾರ ವರ್ತನೆಯನ್ನು ಬಳಸಿಕೊಂಡು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಹೀಗಾಗಿ ಎಚ್ಚರದಿಂದ ಇರಿ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (7-08-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಸಪ್ತಮಿ 28:13 ವಾರ: ಸೋಮವಾರ
ನಕ್ಷತ್ರ: ಅಶ್ವಿನಿ 25:15 ಯೋಗ: ಶೂಲ 18:14
ಕರಣ: ವಿಷ್ಟಿ (ಭದ್ರ) 16:41 ಅಮೃತ ಕಾಲ: ರಾತ್ರಿ 06:12 ರಿಂದ 07:47 ರವರೆಗೆ
ದಿನದ ವಿಶೇಷ : ರಾಷ್ಟ್ರೀಯ ಕೈಮಗ್ಗ ದಿನ

ಸೂರ್ಯೋದಯ : 06:06 ಸೂರ್ಯಾಸ್ತ : 06:45

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆಪ್ತರ ಮಾತುಗಳು ಅಗಾಧ ಪರಿಣಾಮ ಬೀರುವ ಸಾಧ್ಯತೆ. ಹಣಕಾಸಿನ ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರ ವರ್ತನೆಯನ್ನು ಬಳಸಿಕೊಂಡು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿ ನಿಧಾನ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

ದೇವರಿಗೆ ಇಂಥದ್ದೇ ಹೂವಿನಿಂದ ಪೂಜಿಸಬೇಕು ಎಂಬುದು ಇದೆಯೇ?

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಇದನ್ನೂ ಓದಿ : Prerane column : ನಿಮ್ಮ ನಿಮ್ಮ ಬದುಕಿಗೆ ನೀವೇ ಜವಾಬ್ದಾರಿ; ಅದನ್ನು ಬೇರೆಯವರ ಮೇಲೆ ಹೊರಿಸಿದರೆ ನೀವು Waste Body!

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version