Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರದವರೆಗೂ ವೃಶ್ಚಿಕ ರಾಶಿಯಲ್ಲೇ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯ ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕನ್ಯಾ ರಾಶಿಯವರು ಶುಭ ಕಾರ್ಯಗಳಿಗಾಗಿ ಹೆಚ್ಚು ಖರ್ಚು ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 07:12 ವಾರ: ಭಾನುವಾರ
ನಕ್ಷತ್ರ: ಸ್ವಾತಿ 11:49 ಯೋಗ: ಅತಿಗಂಡ 11:49
ಕರಣ: ತೈತುಲ 07:12 ಅಮೃತಕಾಲ: ಬೆಳಗ್ಗೆ 3:17 ರಿಂದ 04:54ರವರೆಗೆ
ದಿನದ ವಿಶೇಷ: ಶೃಂಗೇರಿ ಮಹಾಪ್ರದೋಷ, ಮಾನವ ಹಕ್ಕುಗಳ ದಿನ

ಸೂರ್ಯೋದಯ : 06:31  ಸೂರ್ಯಾಸ್ತ : 05:54

ರಾಹುಕಾಲ : ಸಂಜೆ 4:28ರಿಂದ 5:54
ಗುಳಿಕಕಾಲ: ಮಧ್ಯಾಹ್ನ 3:03 ರಿಂದ 4:28
ಯಮಗಂಡಕಾಲ: ಮಧ್ಯಾಹ್ನ 12:12 ರಿಂದ 1:38

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯದ ಕುರಿತು ಕಾಳಜಿ ಇರಲಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗುವುದರ ಜತಗೆ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಒಳ್ಳೆಯದಲ್ಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಹೆಚ್ಚಾಗಲಿದೆ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವಿರಿ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

VISTARANEWS.COM


on

karnataka high court
Koo

ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Continue Reading

ಪ್ರಮುಖ ಸುದ್ದಿ

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Dog Meat: ಬೆಂಗಳೂರಿನಲ್ಲಿ ಶಂಕಿತ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್, “ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ” ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು.

VISTARANEWS.COM


on

pramod mutalik dog meat
Koo

ಗದಗ: ಕುರಿ ಮಾಂಸದ (Mutton) ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ನಾಯಿ ಮಾಂಸ (Dog meat) ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ (Sri Rama Sene) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿ ಕಾರಿದ್ದಾರೆ. ಗದಗದಲ್ಲಿ (Gadag news) ಅವರು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿದ ಅವರು, “ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ” ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು. ʼʼರೈಲ್ವೆ ಸ್ಟೇಷನ್‌ನಲ್ಲಿ 90 ಮಾಂಸದ ಬಾಕ್ಸ್‌ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್‌ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿಯ ಅಧ್ಯಕ್ಷರು ಕತ್ತೆ ಕಾಯುತ್ತಿದ್ದಾರಾ? ಅಬ್ದುಲ್ ರಜಾಕ್ ದೇಶದ್ರೋಹಿ ಕೆಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆʼʼ ಎಂದು ಮುತಾಲಿಕ್‌ ಹೇಳಿದ್ದಾರೆ.

“ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಜಮೀರ್ ಅಹ್ಮದ್ ಉತ್ತರ ಕೊಡಬೇಕು. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ರಾಮನಗರದ ಹೆಸರು ಬದಲಾವಣೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮಾಡಿದ್ದಕ್ಕೆ ನಮ್ಮ ವಿರೋಧ ಇದೆ. ರಾಮನಗರ ಹೆಸರು ಇರುವುದಕ್ಕೆ ನಿಮಗೆ ತೊಂದರೆ ಏನು? ರಾಮನಗರ ಜಿಲ್ಲೆಯ ಹೆಸರು ಪರಿವರ್ತನೆ ಮಾಡಿದ್ದು ಹಿಂದೂ ದ್ರೋಹಿ ಕೆಲಸ. ಕಾಂಗ್ರೆಸ್ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಬಾಬರ್‌ನನ್ನು ಕೂಡ ಬೆಂಬಲಿಸಿದೆ ಎಂದು ಅವರು ಟೀಕಿಸಿದರು.

ರಾಮನಗರವನ್ನು ಬದಲಾವಣೆ ಮಾಡುವುದಾದರೆ ಮಾಡಲಿ. ಹಾಗೇ ಬೆಂಗಳೂರಿನಲ್ಲಿ 32 ಕಡೆಗಳಲ್ಲಿ ಬ್ರಿಟೀಷರ ಹೆಸರು ಇವೆ. ಮೊದಲು ಅವುಗಳನ್ನು ಬದಲಾವಣೆ ಮಾಡಲಿ. ನಿಮಗೆ ನಿಜವಾಗಲೂ ಸ್ವಾಭಿಮಾನ ಇದ್ದರೆ ಬ್ರಿಟಿಷರ ಹೆಸರು ಬದಲಾಯಿಸಿ. ರಾಮನಗರಕ್ಕೆ ತನ್ನದೇ ಆದ ಇತಿಹಾಸ ಇದೆ. ನಾಳೆ ಕಲಬುರಗಿಯಲ್ಲಿ ಇದರ ಬಗ್ಗೆ ಸಭೆ ನಡೆಸಿ ಇಡೀ ರಾಜ್ಯಾದ್ಯಂತ ಹೋರಾಟದ ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು.

ಅಬ್ದುಲ್ ರಜಾಕ್ ಹೇಳಿಕೆ

ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೀತಿದೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ. ಪುನೀತ್ ಕೆರೆಹಳ್ಳಿ ಅದನ್ನು ನಾಯಿ ಅಂತಿದ್ದಾರೆ. ಹಣ ವಸೂಲಿ ಮಾಡೋಕೆ ಈ ರೀತಿ ಮಾಡ್ತಾ ಇದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಈ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡುತ್ತೇವೆ ಎಂದು ಮಾಂಸ ಸಾಗಾಟಗಾರ ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಇದನ್ನೂ ಓದಿ: Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Continue Reading

ಕ್ರೀಡೆ

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Paris Olympic: 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

VISTARANEWS.COM


on

Paris Olympic
Koo

ಪ್ಯಾರಿಸ್​: ಒಲಿಂಪಿಕ್ಸ್​(Paris Olympic) ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ ಮಾಡಿದ್ದ ಭಾರತೀಯ ಕ್ರಿಡಾಭಿಮಾನಿಗಳಿಗೆ ಮೊದಲ ದಿನವೇ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಆದರೆ ರೋಯಿಂಗ್​ನಲ್ಲಿ ಬಾಲರಾಜ್ ಪನ್ವಾರ್(Balraj Panwar) ಹೀಟ್ಸ್​ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ಕೊನೆಯ ಹಂತದ ಸುತ್ತಿನವರೆಗೂ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು. ಆದರೆ ಫಿನಿಶಿಂಗ್​ ಹಂತದ ವೇಳೆ ಹಿನ್ನಡೆ ಅನುಭವಿಸಿ ಅಂತಿಮವಾಗಿ 07:07.11 ನಿಮಿಷದಲ್ಲಿ ಹೀಟ್ಸ್ ಪೂರ್ಣಗೊಳಿಸಿ ನಾಲ್ಕನೇ ಸ್ಥಾನ ಪಡೆದರು.

 

ಇಂದು ನಡೆಯುವ ಪುರುಷರ ಸಿಂಗಲ್ಸ್‌ ಟೆಬಲ್​ ಟೆನಿಸ್​ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

Continue Reading

ಪ್ರಮುಖ ಸುದ್ದಿ

Tomato Price: ದಿಢೀರ್‌ ಕುಸಿದ ಟೊಮೆಟೊ ಬೆಲೆ, ಕೋಲಾರ ಎಪಿಎಂಸಿಯಲ್ಲಿ ತಳಮಳ

Tomato Price: ಒಂದು ವಾರದಿಂದ ಟೊಮೆಟೋ ಬಾಕ್ಸ್ ಬೆಲೆ ಸಾವಿರ ರೂಪಾಯಿ ಗಡಿ ದಾಟಿ ಟೊಮೆಟೊ ಬೆಳೆಗಾರನ (Tomato farmer) ಮುಖದಲ್ಲಿ ಮದಹಾಸ ಮೂಡಿಸಿತ್ತು. ಎರಡು ದಿನಗಳಿಂದ ದಿಢೀರನೇ ಕುಸಿತ ಕಂಡಿದ್ದು ಟೊಮೊಟೊ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ.

VISTARANEWS.COM


on

tomato price
Koo

ಕೋಲಾರ : ನಿಲ್ಲದ ಮಳೆಯ ಆರ್ಭಟದ (Karnataka Rain news) ಪರಿಣಾಮ ಕೋಲಾರದ ಕೆಂಪು ಸುಂದರಿ ಟೊಮೊಟೊ ಬೆಲೆ (Tomato Price) ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ಕಂಡಿದೆ.

ಒಂದು ವಾರದಿಂದ ಟೊಮೆಟೋ ಬಾಕ್ಸ್ ಬೆಲೆ ಸಾವಿರ ರೂಪಾಯಿ ಗಡಿ ದಾಟಿ ಟೊಮೆಟೊ ಬೆಳೆಗಾರನ (Tomato farmer) ಮುಖದಲ್ಲಿ ಮದಹಾಸ ಮೂಡಿಸಿತ್ತು. ಎರಡು ದಿನಗಳಿಂದ ದಿಢೀರನೇ ಕುಸಿತ ಕಂಡಿದ್ದು ಟೊಮೊಟೊ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಹದಿನೈದು ಕೆಜಿ ಬಾಕ್ಸ್ ಬೆಲೆ ಒಂದು ಸಾವಿರದ ನೂರ ಐವತ್ತರಿಂದ ಇನ್ನೂರರ ವರೆಗೆ ಮಾರಾಟವಾಗುತ್ತಿತ್ತು. ಆದರೆ ಎರಡು ದಿನಗಳಿಂದ ಟೊಮೊಟೊ ದಿಢೀರ್ ಎಂದು ಕುಸಿದಿದ್ದು 330ರಿಂದ 650 ರೂ.ಗೆ ಇಳಿದಿದೆ.

ಕೋಲಾರ ಎಪಿಎಂಸಿ (Kolar APMC) ಮಾರುಕಟ್ಟೆಗೆ ಪ್ರತಿ ದಿನ ಎರಡು ಲಕ್ಷಕ್ಕೂ ಹೆಚ್ಚು ಟೊಮೊಟೊ ಬಾಕ್ಸ್ (Tomato Box) ಬರುತ್ತಿವೆ. ಹೊರಗಿನ ಬೇಡಿಕೆಯಷ್ಟೇ ಟೊಮೊಟೊ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಧಾರಣೆ ಮಾತ್ರ ಕುಸಿತ ಕಂಡಿದೆ.

ಬೆಲೆ ಕುಸಿತಕ್ಕೆ ಕಾರಣವೇನು?

ದೇಶದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ಟೊಮೊಟೊ ಸಾಗಾಣಿಕೆಗೆ ತೊಂದರೆಯಾಗಿದೆ. ಭಾರಿ ಮಳೆಯ ಹೊಡೆತದಿಂದ ರಸ್ತೆ ಸಂಪರ್ಕವಿಲ್ಲದೆ ಸಾಗಾಣಿಕೆಯಾದ ಟೊಮೆಟೊ ಲಾರಿಗಳು ಎಲ್ಲೆಂದರೆ ಅಲ್ಲಿ ನಿಂತಿವೆ. ಮಳೆ ಅಡ್ಡಿಯಾಗಿದ್ದರಿಂದ ಮಾರುಕಟ್ಟೆಯಲ್ಲಿ ಕೊಳ್ಳುವವರು ಇಲ್ಲದೆ ಟೊಮೊಟೊ ಧಾರಣೆ ಕುಸಿತವಾಗಿದೆ. ರೈತರು ಆತಂಕ ಪಡಬೇಕಿಲ್ಲ; ಮಳೆ ನಿಂತರೆ ಮತ್ತೆ ಟೊಮೆಟೊ ಧಾರಣೆ ಚೇತರಿಕೆಯಾಗಲಿದೆ ಎಂದು ಕೋಲಾರ ಎಪಿಎಂಸಿ ಮಾರುಕಟ್ಟೆಯ ಸಹಾಯಕ ಕಾರ್ಯದರ್ಶಿ ಕಿರಣ್ ಸ್ಪಷ್ಟಪಡಿಸಿದ್ದಾರೆ.

ಏಷ್ಯಾದಲ್ಲಿ ಎರಡನೇ ಅತಿ ದೊಡ್ಡ ಮಾರುಕಟ್ಟೆ ಎಂಬ‌ ಹೆಗ್ಗಳಿಕೆ ಪಡೆದಿರುವ ಕೋಲಾರ ಎಪಿಎಂಸಿ (Kolar APMC) ಮಾರುಕಟ್ಟೆಯಲ್ಲಿ ಕಳೆದ ವಾರ ಟೊಮೆಟೊಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಬಂದಿತ್ತು. 15 ಕೆ.ಜಿಯ ಬಾಕ್ಸ್​​ಗೆ 900ರಿಂದ 1200 ರೂ.ಗಳಿಗೆ ಹರಾಜಾಗಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು.

ಕಳೆದ ವರ್ಷ ಇದೇ ಸಮಯದಲ್ಲಿ ಟೊಮೆಟೊಗೆ ಚಿನ್ನದ ಬೆಲೆ ಬಂದು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿತ್ತು. ಬಾಕ್ಸ್‌ಗೆ ಸುಮಾರು 2000ರಿಂದ 2700 ರೂ.ವರೆಗೂ ಮಾರಾಟವಾಗಿ ಎಲ್ಲರನ್ನೂ ಅಚ್ಚರಿಗೊಳಿಸಿತ್ತು.

ಕೋಲಾರ ಮತ್ತು‌ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಈ ಸೀಸನ್‌ನಲ್ಲಿ ಅತಿ‌ ಹೆಚ್ಚು ಟೊಮೆಟೊವನ್ನು ಬೆಳೆಯುತ್ತಾರೆ. ಆದರೆ ಇತ್ತೀಚಿನ ತಾಪಮಾನ, ಮಳೆ ಮತ್ತು ವೈರಸ್ ಹಾವಳಿಯಿಂದ ಟೊಮೆಟೊ ಬೆಳೆಯಿಲ್ಲದೆ ಆವಕ ಕಡಿಮೆಯಾಗಿದೆ. ಜೊತೆಗೆ ಟೊಮೆಟೊ ಬೆಳೆ ಬೆಳೆಯವುದಕ್ಕೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತಿದೆ. ಕಷ್ಟಪಟ್ಟು ಬೆಳೆದರೂ ಸಹ ಟೊಮೆಟೊಗೆ ಬೆಲೆ ಸಿಗುತ್ತೆ ಎಂಬ ವಿಶ್ವಾಸವಿಲ್ಲದ ಕಾರಣ ರೈತ ಇತ್ತೀಚಿಗೆ ಟೊಮೆಟೊ ಬಿಟ್ಟು ಪರ್ಯಾಯ ಬೆಳೆಗಳನ್ನು ಬೆಳೆಯಲು ಮುಂದಾಗುತ್ತಿದ್ದಾನೆ.

ಮೊದಲು ಆಂಧ್ರ, ತಮಿಳುನಾಡು, ಮಂಡ್ಯ, ಚಾಮರಾಜನಗರ, ‌ಮೈಸೂರು, ನೆಲಮಂಗಲ ಕಡೆಯಿಂದ ಟೊಮೆಟೊ ಬರುತ್ತಿತ್ತು.‌ ಆದರೆ ಈಗ ಬರುತ್ತಿಲ್ಲ. ಆಗಸ್ಟ್ ತಿಂಗಳವರೆಗೂ ಟೊಮೆಟೊ ಸೀಜನ್‌ ಇರುವುದರಿಂದ ಟೊಮೆಟೊ ಬೆಲೆ ಇನ್ನೂ ಏರಿಕೆಯಾಗುವ ಸಂಭವವಿದೆ. ಕೋಲಾರದ ಟೊಮೆಟೊಗೆ ದೆಹಲಿ, ಒರಿಸ್ಸಾ, ಗುಜರಾಜ್​, ಪಶ್ಚಿಮ ಬಂಗಾಳ, ರಾಜಸ್ಥಾನ ಮುಂತಾದ ಕಡೆ ಹೆಚ್ಚಿನ ಬೇಡಿಕೆ ಇದೆ.

ಇದನ್ನೂ ಓದಿ: Superfood Tomato: ಬಲ್ಲಿರಾ ಟೊಮೆಟೊ ಎಂಬ ಹಣ್ಣಿನ ಸದ್ಗುಣಗಳನ್ನು?

Continue Reading
Advertisement
karnataka high court
ಪ್ರಮುಖ ಸುದ್ದಿ16 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ26 mins ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ30 mins ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ38 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ51 mins ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ1 hour ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್1 hour ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Paris Olympic
ಕ್ರೀಡೆ1 hour ago

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Electric shock
ಮೈಸೂರು1 hour ago

Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

Mamata Banerjee
ದೇಶ1 hour ago

Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ51 mins ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ20 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ21 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ22 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ23 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌