ಚಂದ್ರನು ವೃಶ್ಚಿಕ ರಾಶಿಯಿಂದ ಸೋಮವಾರ ಬೆಳಗ್ಗೆ 06:11 ಕ್ಕೆ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅತಿರೇಕದ ಮಾತುಗಳು ಜಗಳ ಉಂಟು ಮಾಡಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುದವುದು ಅವಶ್ಯಕವಾಗಿದೆ. ಸಿಂಹ ರಾಶಿಯವರ ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (11-12-2023)
ಮೇಷ: ಅತಿರೇಕದ ಮಾತುಗಳು ಜಗಳ ಉಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುದವುದು ಅವಶ್ಯಕ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಇದ್ದು, ಅದನ್ನೂ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯದ ಸಂಬಂಧ ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ ಆಗಲಿದೆ. ನಂಬಿದ ವ್ಯಕ್ತಿಗಳಿಂದ ಮೋಸ ಹೋಗುತ್ತೀರಿ. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ.ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಭೂಮಿ ಸಂಬಂಧ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಸಿಗಲಿದೆ. ಪ್ರಯಾಣ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ.ಆರ್ಥಿಕ ಪ್ರಗತಿ ಸಾಧಾರಣ.ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com