Site icon Vistara News

Dina Bhavishya: ಈ ರಾಶಿಯವರಿಗೆ ಪ್ರೀತಿ ಕೈ ತಪ್ಪಲಿದೆ!

read your daily horoscope predictions for december 13 2023

ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ಬೆಳಗ್ಗೆ 10:31ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಈ ದಿನ ಕೆಲವು ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಮಿಥುನ ರಾಶಿಯವರಿಗೆ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಮಕರ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಶುಕ್ಲ ಪಕ್ಷ.
ತಿಥಿ: ಪಾಡ್ಯ 27:08 ವಾರ: ಬುಧವಾರ
ನಕ್ಷತ್ರ: ಜೇಷ್ಠಾ 11:04 ಯೋಗ: ಶೂಲ 16:16
ಕರಣ: ಕಿಂಸ್ತುಘ್ನ 16:08 ಅಮೃತಕಾಲ: ಬೆಳಗ್ಗೆ 3:44 ರಿಂದ 05:14ರವರೆಗೆ
ದಿನದ ವಿಶೇಷ: ತಿಂತ್ರಿಣೀಗೌರೀ ವ್ರತ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ:
ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಕೆಲವು ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಸಂಬಂಧದ ಆ ಎಲ್ಲಾ ದೂರುಗಳು ಮತ್ತು ದ್ವೇಷಗಳು ಈ ಅದ್ಭುತವಾದ ದಿನದಂದು ಕಣ್ಮರೆಯಾಗುತ್ತವೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಕೆಲಸದಿಂದ ಇಂದು ವಿಶ್ರಾಂತಿಗೆ ಜಾರುವಿರಿ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ, ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗುವಿರಿ. ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ. ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಇದಕ್ಕೆ ಪ್ರತಿ ಕೋಪ ತೋರುವುದಕ್ಕಿಂತ ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಹಳೆ ಸ್ನೇಹಿತರನ್ನು ಭೇಟಿ ಮಾಡುವಿರಿ, ಮಾತನಾಡಲು ಯೋಜಿಸಬಹುದು. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅನಗತ್ಯ ಖರ್ಚಿನ ಹೊರೆತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗ್ರತೆ ಅವಶ್ಯವಾಗಿ ವಹಿಸಿ, ಅಪಘಾತ ಸಂಭವಿಸಬಹುದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ಭೂಮಿ ವ್ಯವಹಾರ ನಡೆಯುವ ಸಾಧ್ಯತೆ ಇದೆ. ಅದು ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸುವುದು. ಹಣಕಾಸು,ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರಲಿದೆ. ಅನಿವಾರ್ಯ ಕಾರಣ ನೀವು ಖರ್ಚು ಮಾಡುವ ಸಾಧ್ಯತೆ ಇದೆ. ಇದು ಮನಸ್ಸಿಗೆ ಕೊಂಚ ಬೇಸರ ತರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ ಇದೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು. ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ನಿಮ್ಮ ವ್ಯಕ್ತಿತ್ವವು ಇತರರನ್ನು ಆಕರ್ಷಿಸಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ ಮಾಡುವಿರಿ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಹಣಕಾಸು ಹೂಡಿಕೆ ಬಗೆಗೆ ಆಲೋಚನೆ ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಅದರಿಂದ ದೂರ ಇರಿ. ನಿಮ್ಮ ಆಪ್ತರೊಂದಿಗೆ ವಿಷಯ ಹಂಚಿಕೊಳ್ಳುವ ಸಾಧ್ಯತೆ ಇದೆ, ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಒಳ್ಳೆಯದು. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟು ಆಗುವ ಸಾಧ್ಯತೆ ಇದೆ. ನೀವು ಅತೀ ಉದಾರಿಯಾಗಿದ್ದಲ್ಲಿ – ನಿಮ್ಮ ನಿಕಟ ಜನರು ನಿಮ್ಮ ಅನುಚಿತ ಲಾಭ ತೆಗೆದುಕೊಳ್ಳಬಹುದು. ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮೀನ: ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ ಇದೆ, ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version