Site icon Vistara News

Dina Bhavishya: ಈ ರಾಶಿಯವರಿಗೆ ಹೂಡಿಕೆ ಮಾಡಲು ಇಂದು ಬೆಸ್ಟ್‌ ದಿನ!

daily horoscope predictions for December 14 2023

ಚಂದ್ರನು ಧನಸ್ಸು ರಾಶಿಯಿಂದ ಬುಧವಾರ ಮಕರ ರಾಶಿಯನ್ನು ಪ್ರವೇಶ ಮಾಡಿದ್ದು, ಶುಕ್ರವಾರ ಮಧ್ಯಾಹ್ನದ ವರೆಗೆ ಅಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಅಲ್ಲದೆ, ಇಂದಿನಿಂದ ಬುಧ ವಕ್ರ ಸಂಚಾರ ಆರಂಭವಾಗಿದೆ. ಹೀಗಾಗಿ ಇದರ ಪರಿಣಾಮ ಎಲ್ಲ 12 ರಾಶಿಗಳ ಮೇಲೆಯೂ ಇರಲಿದೆ. ಸಿಂಹ ರಾಶಿಯವರಿಗೆ ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು ಉಂಟಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಶುಕ್ಲ ಪಕ್ಷ.
ತಿಥಿ: ಬಿದಿಗೆ 24:55 ವಾರ: ಗುರುವಾರ
ನಕ್ಷತ್ರ: ಮೂಲಾ 09:45 ಯೋಗ: ಗಂಡ 13:23
ಕರಣ: ಬಾಲವ 14:04 ಅಮೃತಕಾಲ: ಬೆಳಗ್ಗೆ 03:42 ರಿಂದ 05:11 ರವರೆಗೆ
ದಿನದ ವಿಶೇಷ: ಮಾರ್ಗಶಿರ ಲಕ್ಷ್ಮೀ ವ್ರತ, ಚಂದ್ರದರ್ಶನ, ಬುಧವಕ್ರಾರಂಭ.

ಸೂರ್ಯೋದಯ : 06:33  ಸೂರ್ಯಾಸ್ತ : 05:55

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ ಉಂಟಾಗಲಿದೆ. ಹೀಗಾಗಿ ಆದಷ್ಟು ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡ ಇರಲಿದೆ. ಮಾನಸಿಕ ನೆಮ್ಮದಿ ಕೆಡುವ ಸಾಧ್ಯತೆ ಹೆಚ್ಚಿದೆ. ಸಾಧ್ಯವಾದಷ್ಟು ಸಂಯಮದಿಂದ ವರ್ತಿಸಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು ಉಂಟಾಗಲಿದೆ. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಹಣಕಾಸು ಪ್ರಗತಿ ಕಾಣುವಿರಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬ ಸದಸ್ಯರ ಆರೋಗ್ಯದ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಕವಾಗಿ ಮಾತನಾಡುವುದು ಬೇಡ. ಸಾಧ್ಯವಾದಷ್ಟು ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಉಂಟಾಗಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿವೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version