ಚಂದ್ರನು ಶನಿವಾರದವರೆಗೆ ಸಿಂಹ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಕರ ರಾಶಿಯವರಿಗೆ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಅಲ್ಲದೆ, ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಆದರೆ, ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ಮಾತಿಗೆ ವಿರಾಮ ನೀಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (30-12-2023)
ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲವಿದ್ದರೆ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಉತ್ಸಾಹ ತುಂಬಿದ ವಾತಾವರಣ ನಿಮ್ಮದಾಗಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಉಂಟಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಹೆಚ್ಚಿದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಾಣುವಿರಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಧನಾತ್ಮಕ ಪರಿಣಾಮವನ್ನು ಬೀರಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ ಇದಾಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ ನಡೆಸುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡಲಿದ್ದೀರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ಕೋರ್ಟ್ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಮಿಶ್ರಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಹೀಗಾಗಿ ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ಆಗಲಿದೆ. ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಪಡಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com