Dina Bhavishya : ಈ ರಾಶಿಯವರ ಅದೃಷ್ಟದ ಬಾಗಿಲು ಇಂದು ತೆರೆಯುತ್ತೆ - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರ ಅದೃಷ್ಟದ ಬಾಗಿಲು ಇಂದು ತೆರೆಯುತ್ತೆ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸಿಂಹ ರಾಶಿಯಿಂದ ಭಾನುವಾರ ಬೆಳಗ್ಗೆ 06:53ಕ್ಕೆ ಕನ್ಯಾ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯ ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ವೃಶ್ಚಿಕ ರಾಶಿಯ ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ ಹೀಗಾಗಿ ಆದಷ್ಟು ಎಚ್ಚರಿಕೆ ಇರಲಿ. ಧನಸ್ಸು ರಾಶಿಯವರ ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (31-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 11:55 ವಾರ: ಭಾನುವಾರ
ನಕ್ಷತ್ರ: ಮಘಾ 32:35 ಯೋಗ: ಪ್ರೀತಿ 27:38
ಕರಣ: ಬಾಲವ 11:55 ಅಮೃತಕಾಲ: ಬೆಳಗ್ಗೆ 5:55 ರಿಂದ 7:42ರವರೆಗೆ

ಸೂರ್ಯೋದಯ : 06:41  ಸೂರ್ಯಾಸ್ತ : 06:04

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಕಲೆ ಮತ್ತು ರಂಗಭೂಮಿಯ ಜತೆ ಸಂಪರ್ಕ ಹೊಂದಿರುವವರು ಸೃಜನಶೀಲವಾಗಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಬಳಲುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಅನಗತ್ಯ ವಿಷಯಗಳ ಬಗ್ಗೆ ಸಮಯ ಕೊಡಬೇಡಿ. ಸಂಗಾತಿಯ ಸಲಹೆ ಹಿತಕರವೆನಿಸಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಭೂ ಸಂಬಂಧಿ ವ್ಯವಹಾರಗಳಲ್ಲಿ ಲಾಭವಾಗಲಿದೆ. ಉತ್ಸಾಹದ ಜತೆಗೆ ನಿಮ್ಮ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವ್ಯಾಪಾರದಲ್ಲಿ ಅಧಿಕ ಲಾಭ ಸಿಗಲಿದೆ. ಜೀವನ ಸಂಗಾತಿಯ ಮಹತ್ವ ಮನವರಿಕೆ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಮಟ್ಟಿನ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕಟಕ: ದೈಹಿಕ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ದೇಹದ ಮೇಲೆ ಹೆಚ್ಚು ಒತ್ತಡ ಹಾಕುವ ಯಾವುದೇ ದೈಹಿಕ ಪರಿಶ್ರಮವನ್ನು ತಪ್ಪಿಸಲು ಪ್ರಯತ್ನಿಸಿ. ವಿಶ್ರಾಂತಿ ತೆಗೆದುಕೊಳ್ಳಿ. ಹಳೆಯ ನೆನಪುಗಳು ತಮಗೆ ಸಂತಸ ತರಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಸಂಯಮ ಕಳೆದುಕೊಳ್ಳುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಆರ್ಥಿಕ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಿದರೂ ಹಣದ ಹೊರಹರಿವು ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆಯುಂಟು ಮಾಡುತ್ತದೆ. ಆರೋಗ್ಯದ ಕಡೆ ವಿಶೇಷ ಗಮನ ಹರಿಸಿ. ಅಧಿಕ ರಕ್ತ ಒತ್ತಡದ ರೋಗಿಗಳು ಆಲಸ್ಯವನ್ನು ಮಾಡಲೇಬೇಡಿ. ಉದ್ಯೋಗಿಗಳಿಗೆ ಪ್ರಶಂಸೆ, ಪ್ರೋತ್ಸಾಹ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಯಾವುದೇ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ಹೂಡಿಕೆ ಮಾಡುವುದು ಬೇಡ, ನಷ್ಟ ಸಾಧ್ಯತೆ, ಎಚ್ಚರಿಕೆ ಇರಲಿ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸ ವಾತಾವರಣ ಇರಲಿದೆ. ಸೃಜನಶೀಲತೆಯಿಂದ ಕೆಲಸ ಮಾಡುವವರಿಗೆ ಪ್ರೋತ್ಸಾಹ ಸಿಗಲಿದೆ. ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಆರೋಗ್ಯ ಚೆನ್ನಾಗಿರುತ್ತದೆ. ಒಡಹುಟ್ಟಿದವರು ನಿಮ್ಮ ಸಹಾಯಯಾಚಿಸಬಹುದು. ಆರ್ಥಿಕವಾಗಿ ನಿಮಗೆ ಮಧ್ಯಮ ಫಲ ಇರಲಿದೆ. ಸ್ನೇಹಿತರ ವರ್ಗದಿಂದ ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇದ್ದರೂ ದೈಹಿಕವಾಗಿ ನೀವು ಸದೃಢವಾಗಿ ಕೆಲಸ ನಿಭಾಯಿಸುವಲ್ಲಿ ಯಶಸ್ಸು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲವಿದೆ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ದೈಹಿಕವಾಗಿ ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಆದಷ್ಟು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಆಧ್ಯಾತ್ಮ ಮತ್ತು ಯೋಗ ಹೆಚ್ಚಿನ ನೆಮ್ಮದಿ ತರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಸಹದ್ಯೋಗಿಗಳು ನಿಮ್ಮ ಹಿಂದೆ ಪಿತೂರಿ ನಡೆಸುವ ಸಾಧ್ಯತೆ ಇದೆ. ಆದಷ್ಟು ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಆರ್ಥಿಕವಾಗಿ ಸುಧಾರಣೆ ಆಗುವುದರಿಂದ,ಇಂದು ಕೊಂಚ ನೆಮ್ಮದಿಯಿಂದ ಇರುವಿರಿ. ದೀರ್ಘಕಾಲದ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಅದೃಷ್ಟದ ಬಾಗಿಲು ತೆರೆದು ಹೊಸ ಅವಕಾಶಗಳು ಸಿಗಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಕರ: ಸಾಲದ ಮರುಪಾವತಿ ಆಗಲಿದೆ ಹೀಗಾಗಿ ಆರ್ಥಿಕವಾಗಿ ಸದೃಢವಾಗಿ ಇರುವಿರಿ. ದೈಹಿಕ ಆರೋಗ್ಯದ ಕಡೆ ಕೊಂಚ ಗಮನ ಹರಿಸಿ.ಅನಗತ್ಯ ಅನುಮಾನ ದಿನದ ಕೊನೆಯಲ್ಲಿ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಅದರ ಕಡೆಗೆ ಗಮನ ಹರಿಸದಿರಿ. ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ಪಟ್ಟರೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ತೊಡಗಿ. ಉದ್ಯೋಗಿಗಳಿಗೆ ಒತ್ತಡ ಇದ್ದರೂ ಯಾವುದೇ ತೊಂದರೆ ಇಲ್ಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ, ತಾತ್ಸಾರ ಮನೋಭಾವ ಬೇಡ. ಸಂಗಾಂತಿಯೊಂದಿಗೆ ವಿನಾಕಾರಣ ವಾದಕ್ಕೆ ಇಳಿದು, ಮನೆಯಲ್ಲಿ ನೆಮ್ಮದಿ ವಾತಾವರಣ ಹಾಳು ಮಾಡುವುದು ಬೇಡ. ಉದ್ಯೋಗಿಗಳಿಗೆ ಭಯದ ವಾತಾವರಣ ನಿರ್ಮಾಣವಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ನೀವು ಯಾವುದೇ ದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದರಿಂದ ಹೊರಬರಬಹುದು. ಕುಟುಂಬದಲ್ಲಿ ಸ್ತ್ರೀ ಸದಸ್ಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರ್ಥಿಕವಾಗಿ ಬಲ ಹೆಚ್ಚಲಿದೆ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರತೆ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Robert Fico: ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

VISTARANEWS.COM


on

Slovakian PM Robert Fico critical after assassination attempt
Koo

ಹೊಸದಿಲ್ಲಿ: ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Slovakia Prime minister Robert Fico) ಹತ್ಯೆ ಯತ್ನ (Assassination attempt) ಬುಧವಾರ ನಡೆದಿದೆ. ದುಷ್ಕರ್ಮಿಯೊಬ್ಬ ಅವರತ್ತ ಗುಂಡು ಹಾರಿಸಿದ್ದು, ರಾಬರ್ಟ್‌ ಫಿಕೊ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುದ್ದಿ ದೂರದರ್ಶನ ಕೇಂದ್ರ TA3 ಪ್ರಕಾರ, ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

“ಇಂದು ಹ್ಯಾಂಡ್ಲೋವಾದಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಹತ್ಯೆ ಪ್ರಯತ್ನ ನಡೆದಿದೆ. ಗಾಯಗೊಂಡ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ” ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೊವಾಕಿಯಾ ಸಂಸತ್ತಿನ ಉಪ ಸ್ಪೀಕರ್ ಲುಬೊಸ್ ಬ್ಲಾಹಾ ಅವರು ಸಂಸತ್ತಿನ ಅಧಿವೇಶನದಲ್ಲಿ ರಾಬರ್ಟ್ ಫಿಕೊ ಮೇಲಿನ ದಾಳಿಯನ್ನು ದೃಢಪಡಿಸಿದರು. ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಕ್ಯಾಪುಟೋವಾ ಈ ದಾಳಿಯನ್ನು ಖಂಡಿಸಿದ್ದು, ಇದು ಪ್ರಧಾನ ಮಂತ್ರಿಯವರ ಮೇಲಿನ “ಕ್ರೂರ ಮತ್ತು ನಿರ್ದಯ” ದಾಳಿ ಎಂದು ಕರೆದರು. “ನಾನು ಆಘಾತಕ್ಕೊಳಗಾಗಿದ್ದೇನೆ. ಈ ನಿರ್ಣಾಯಕ ಕ್ಷಣದಲ್ಲಿ ರಾಬರ್ಟ್ ಫಿಕೊಗೆ ಹೆಚ್ಚಿನ ಶಕ್ತಿ ಮತ್ತು ಚೇತರಿಕೆ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು.

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿರುವ ರಾಬರ್ಟ್ ಫಿಕೊ ಮತ್ತು ಅವರ ಎಡಪಂಥೀಯ ಸ್ಮರ್ (ದಿಕ್ಕು) ಪಕ್ಷವು ಸ್ಲೋವಾಕಿಯಾದಲ್ಲಿ ಸೆಪ್ಟೆಂಬರ್ 30ರಂದು ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿತು. ಈ ಗೆಲುವು ಫಿಕೊ ಅವರ ರಾಜಕೀಯ ಪುನರಾಗಮನಕ್ಕೆ ದಾರಿಯಾಗಿದೆ. ಅವರು ರಷ್ಯಾದ ಪರ ಮತ್ತು ಅಮೇರಿಕನ್ ವಿರೋಧಿ ನಿಲುವನ್ನು ಹೊಂದಿದ್ದಾರೆ. ಫಿಕೊ ನೀತಿಗಳನ್ನು ಪ್ರತಿಭಟಿಸಲು ಸಾವಿರಾರು ಜನರು ರಾಜಧಾನಿಯಲ್ಲಿ ಮತ್ತು ಸ್ಲೋವಾಕಿಯಾದಾದ್ಯಂತ ಪದೇ ಪದೆ ರ್ಯಾಲಿ, ಪ್ರತಿಭಟನೆ ಮಾಡಿದ್ದಾರೆ.

ರಾಬರ್ಟ್ ಫಿಕೊ ಹತ್ಯೆಯ ಯತ್ನದ ಬಗ್ಗೆ ವಿಶ್ವದಾದ್ಯಂತ ಹಲವಾರು ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. Xನಲ್ಲಿನ ಪೋಸ್ಟ್‌ನಲ್ಲಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼ ಎಂದು ಹೇಳಿದರು.

ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Continue Reading

ಕರ್ನಾಟಕ

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather: ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

VISTARANEWS.COM


on

Koo

ಬೆಂಗಳೂರು: ಮೇ 16 ರಂದು ರಾಜ್ಯದ ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ (50-60 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಭವಿಷ್ಯ

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 16 2024
Koo

ಚಂದ್ರನು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರಿಗೆ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 06:22 ವಾರ: ಗುರುವಾರ
ನಕ್ಷತ್ರ: ಮಘಾ 18:12 ಯೋಗ: ಧ್ರುವ 08:21
ಕರಣ: ಧ್ರುವ 08:21 ಅಮೃತ ಕಾಲ: ಮಧ್ಯಾಹ್ನ 03:33ರಿಂದ ಸಂಜೆ 05:20

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಕ್ಷೇತ್ರ ದರ್ಶನಕ್ಕೆ ತೆರಳಬಹುದಾಗಿದೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿವೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಹೆಚ್ಚಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ ಉಂಟಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಕಾಣುವಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ಇದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಈ ದಿನವು ನಿಮಗೆ ಸಂತೋಷವನ್ನುಂಟು ಮಾಡಲಿದೆ. ಇದು ಇತರರಿಗೆ ಸಂತಸ ಕೊಡಲಿದ್ದು, ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವಾಗಾವುದು ಬೇಡ, ಈ ಬಗ್ಗೆ ತುಸು ಎಚ್ಚರ ವಹಿಸುವುದು ಒಳಿತು. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ. ಇದರಿಂದ ಇತರರಿಗೆ ನೋವಾಗುತ್ತದೆ. ಇದು ನಿಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಆಧ್ಯಾತ್ಮದ ಹಾದಿ ಬಗ್ಗೆ ಗಮನಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಪ್ರಾಪ್ತಿಯಾಗಲಿದೆ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೂರದ ಕಡೆಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಉಂಟಾಗುವ ಸಾಧ್ಯತೆ ಇದೆ. ಕೆಲವು ವಿಷಯದಲ್ಲಿ ನಿಮಗೆ ಸ್ನೇಹಿತರ ಸಲಹೆ – ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯ ಮಾಡಿದಲ್ಲಿ ನಿಮ್ಮ ಕೆಲಸಕ್ಕೇ ತೊಂದರೆಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗಬಹುದು. ಹೀಗಾಗಿ ಈ ಬಗ್ಗೆ ಗಮನಹರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading
Advertisement
IPL 2024 Points Table
ಕ್ರೀಡೆ19 mins ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ22 mins ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ28 mins ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ35 mins ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ36 mins ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Kangana Ranaut
Lok Sabha Election 20241 hour ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ1 hour ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್1 hour ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ2 hours ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ2 hours ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌