Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ! - Vistara News

ಪ್ರಮುಖ ಸುದ್ದಿ

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ದ್ವಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

read your daily horoscope predictions for december 9 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರ ವೃಶ್ಚಿಕ ರಾಶಿಯಲ್ಲೇ ನೆಲಸಲ್ಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಿ. ಜತೆಗೆ ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಕಟಕ ರಾಶಿಯವರು ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ವಹಿಸಿ. ತುಲಾ ರಾಶಿಯವರು ಹಣಕಾಸಿನ ಸಮಸ್ಯೆ ತಲೆದೋರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-12-2023)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ ಅಹೋರಾತ್ರಿ ವಾರ: ಶನಿವಾರ
ನಕ್ಷತ್ರ: ಚಿತ್ತಾ 10:42 ಯೋಗ: ಶೋಭನ 23:35
ಕರಣ: ಕೌಲವ 18:57 ಅಮೃತಕಾಲ: 2:37 ರಿಂದ 04:18ರ ವರೆಗೆ
ದಿನದ ವಿಶೇಷ: ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ

ಸೂರ್ಯೋದಯ : 06:53  ಸೂರ್ಯಾಸ್ತ : 05:39

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ.ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಆಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ.ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ.ದಿನ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆ ಆಗುವ ಕಾರ್ಯಗಳ ಬಗೆಗೆ ಗಮನ ಇರಲಿ.ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ.ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ.ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ.ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗುವುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ.ಅಗತ್ಯವಸ್ತುಗಳ ಖರೀದಿ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Sedition Case : ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಅಚಾತುರ್ಯದಿಂದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನನ್ನು ಈಗ ಬಂಧಿಸಿ ಜೈಲಿಗಟ್ಟಲಾಗಿದೆ.

VISTARANEWS.COM


on

Sedition Case Mandya
Koo

ಮಂಡ್ಯ:‌ ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ (Vidhana Soudha) ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ (Sedition Case) ಮೂವರು ದುಷ್ಕರ್ಮಿಗಳನ್ನು ಬಂಧಿಸಿದ ಬೆನ್ನಿಗೇ ಇತ್ತ ಮಂಡ್ಯದಲ್ಲಿ (Mandya News) ಎರಡು ವರ್ಷದ ಹಿಂದಿನ ಪ್ರಕರಣಕ್ಕೆ ಜೀವ ಬಂದಿದ್ದು, ಬಿಜೆಪಿ ಕಾರ್ಯಕರ್ತರೊಬ್ಬರನ್ನು ಬಂಧಿಸಲಾಗಿದೆ (BJP Activist Arrested). ಅವರು ಮುರ್ದಾಬಾದ್‌ ಬದಲು ತಪ್ಪಿ ಜಿಂದಾಬಾದ್‌ ಎಂದು ಹೇಳಿದ್ದಾರೆ.

ಎರಡು ವರ್ಷದ ಹಿಂದೆ ಮಂಡ್ಯದ ಸಂಜಯ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಮಂಡ್ಯ ತಾಲೂಕಿನ ಡನಾಯಕನಪುರ ರವಿ ಎಂಬವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದರು. ಬೆಂಗಳೂರಿನ ಪ್ರಕರಣ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಮಂಡ್ಯದ ಘಟನೆಯೂ ಮೇಲೆದ್ದು ಬಂದಿತ್ತು. ರವಿ ಅವರು ಅಚಾತುರ್ಯದಿಂದ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗಿ ಹೇಳಿದ್ದರೂ ಏನು ಮಾಡಿದರೂ ಅದು ತಪ್ಪೇ ಎಂದು ಇನ್ನೊಂದು ವಾದ ಕೇಳಿಬಂದಿತ್ತು.

2022ರ ಡಿಸೆಂಬರ್‌ 18ರಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೇಳಿಬಂದಿತ್ತು. ರವಿ ಎಂಬವರು ಪಾಕಿಸ್ತಾನ್‌ ಮುರ್ದಾಬಾದ್‌ ಎಂದು ಹೇಳುವ ಬದಲು ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದರು.

ಬೆಂಗಳೂರು ವಿಧಾನಸೌಧ ಪ್ರಕರಣ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್‌ ಕಾರ್ಯಕರ್ತರು ಈ ಪ್ರಕರಣವನ್ನು ಎತ್ತಿ ತೋರಿಸಲು, ಟ್ರೋಲ್‌ ಮಾಡಲು ಆರಂಭಿಸಿದ್ದರು.

ಇದನ್ನೂ ಓದಿ : Sedition Case: ಪಾಕ್‌ ಪರ ಘೋಷಣೆ ಕೂಗಿದವರಿಗೆ 3 ದಿನ ಪೊಲೀಸ್‌ ಕಸ್ಟಡಿ: ಕೋರ್ಟ್‌ ಆದೇಶ

ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲು

ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ಕನ್ನಂಬಾಡಿ ಕುಮಾರ್ ಎಂಬವರು ದೂರು ದಾಖಲಿಸಿದರು. ಇದರ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದರು. ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಉಪ್ಪರಕನ‌ಹಳ್ಳಿ ಆರಾಧ್ಯ, ಡಣಾಕನಪುರ ರವಿ ಮತ್ತು ಇತರರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಂಡಿದ್ದು ಬಳಿಕ ರಾತ್ರಿಯೇ ರವಿ ಅವರನ್ನು ಬಂಧಿಸಿದ್ದಾರೆ.

ಘೋಷಣೆ ಬಳಿಕ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದ ಬಿಜೆಪಿ ಕಾರ್ಯಕರ್ತ

ನಿಜವೆಂದರೆ, ಅಂದು ಆ ಘಟನೆ ನಡೆದ ಕೂಡಲೇ ರವಿ ಅವರು ಏನಾಯಿತು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದರು ಮತ್ತು ಕ್ಷಮೆ ಕೂಡಾ ಯಾಚಿಸಿದ್ದರು. ಡಣಾಯಕನಪುರದ ರವಿ ಅವರು, ನಾನೊಬ್ಬ ರೈತನಾಗಿದ್ದು ಹಿಂದಿ ಭಾಷೆ ಅರ್ಥ ಆಗದೆ ಜಿಂದಾ ಬಾದ್ ಮುರದಾ ಬಾದ್ ಗೆ ವ್ಯತ್ಯಾಸ ಗೊತ್ತಾಗದೆ ಹಾಗೆ ಕೂಗಿದ್ದೀನಿ ಎಂದು ಹೇಳಿದ್ದರು. ಅಂದೇ ರವಿ ಅವರು ಜಿಂದಾಬಾದ್‌ ಘೋಷಣೆ ಕೂಗಿದ ಕೂಡಲೇ ಸಹವರ್ತಿಗಳು ಬಾಯಿ ಮುಚ್ಚಿಸಿದ್ದರು.

ಹಾಗಾಗಿ ಅಂದು ಆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿರಲಿಲ್ಲ. ಈಗ ಕಾಂಗ್ರೆಸ್‌ ಪಕ್ಷದ ನಾಯಕರು ಬಿಜೆಪಿ ವಿರುದ್ಧ ಈ ಪ್ರಕರಣದ ಪ್ರಯೋಗ ಮಾಡಿದ್ದಾರೆ.

Continue Reading

ದೇಶ

ಹೆಣ್ಣುಮಕ್ಕಳನ್ನು ‘ಡಾರ್ಲಿಂಗ್‌’ ಎಂದು ಕರೆಯುವುದೂ ಇನ್ನು ಲೈಂಗಿಕ ಕಿರುಕುಳ; ಹುಡುಗರೇ ಹುಷಾರ್!

ಅಪರಿಚಿತ ಹೆಣ್ಣುಮಕ್ಕಳಿಗೆ ಯಾರಾದರೂ ಡಾರ್ಲಿಂಗ್‌ ಕರೆದರೆ ಅದು ಕ್ರಮಿನಲ್‌ ಅಪರಾಧಕ್ಕೆ ಸಮನಾಗಿದೆ ಎಂದು ಕೋಲ್ಕೊತಾ ಹೈಕೋರ್ಟ್‌ ತೀರ್ಪು ನೀಡಿದೆ.

VISTARANEWS.COM


on

Couple
Koo

ಕೋಲ್ಕೊತಾ: ಹೆಣ್ಣುಮಕ್ಕಳನ್ನು ಡಾರ್ಲಿಂಗ್‌ (Darling), ಬೇಬಿ, ಬೇಬ್‌ ಎಂದು ಕರೆಯುವ ರೂಢಿ ತುಂಬ ಯುವಕರಿಗೆ ಇರುತ್ತದೆ. ಆದರೆ, ಇನ್ನುಮುಂದೆ ಅಪರಿಚಿತ ಹೆಣ್ಣುಮಕ್ಕಳನ್ನು ಡಾರ್ಲಿಂಗ್‌ ಎಂದು ಕರೆಯುವುದು, ಛೇಡಿಸುವ ಚಾಳಿ ಇದ್ದರೆ, ಯುವಕರು ಕೂಡಲೇ ಈ ಚಾಳಿಯನ್ನು ಬಿಡಬೇಕು. ಏಕೆಂದರೆ, “ಅಪರಿಚಿತ ಹೆಣ್ಣುಮಕ್ಕಳನ್ನು ಡಾರ್ಲಿಂಗ್‌ ಎಂದು ಕರೆಯುವುದು ಕೂಡ ಲೈಂಗಿಕ ಕಿರುಕುಳವಾಗಿದ್ದು (Sexual Harassment), ಅಪರಾಧ ಪ್ರಕರಣ ದಾಖಲಿಸಿ” ಎಂಬುದಾಗಿ ಕೋಲ್ಕೊತಾ ಹೈಕೋರ್ಟ್‌ (Calcutta High Court) ತೀರ್ಪು ನೀಡಿದೆ.

ಹೌದು, ಅಪರಿಚಿತ ಮಹಿಳೆ ಅಥವಾ ಯುವತಿಯನ್ನು ಡಾರ್ಲಿಂಗ್‌ ಎಂದು ಕರೆಯುವುದು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್‌ 354 ಎ (ಮಹಿಳೆ ಜತೆ ಅತಿರೇಕದ ವರ್ತನೆ) ಹಾಗೂ 509 (ಹೆಣ್ಣುಮಕ್ಕಳನ್ನು ಚುಡಾಯಿಸುವುದು) ಅಡಿಯಲ್ಲಿ ಅಪರಾಧ ಪ್ರಕರಣ ದಾಖಲಿಸಬೇಕು. ಅವರನ್ನು ಡಾರ್ಲಿಂಗ್‌ ಎಂದು ಕರೆಯುವುದು ಕೂಡ ಸೆಕ್ಸುವಲ್‌ ಹೇಳಿಕೆಯಾಗಿದೆ. ಅದರಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಜಯ್‌ ಸೇನ್‌ಗುಪ್ತಾ ಆದೇಶ ಹೊರಡಿಸಿದ್ದಾರೆ.

Court Order

ಏನಿದು ಪ್ರಕರಣ?

ಪಶ್ಚಿಮ ಬಂಗಾಳದಲ್ಲಿ ಜಾನಕ್‌ ರಾಮ್‌ ಎಂಬಾತನು ಮಹಿಳಾ ಪೊಲೀಸ್‌ ಪೇದೆಯೊಬ್ಬರನ್ನು ಡಾರ್ಲಿಂಗ್‌ ಎಂದು ಕರೆದಿದ್ದ. ಕುಡಿದ ಮತ್ತಿನಲ್ಲಿ ಆತ ಪೊಲೀಸ್‌ ಪೇದೆಯನ್ನು ಡಾರ್ಲಿಂಗ್‌ ಎಂದು ಕರೆದಿದ್ದ. ಈತನ ವಿರುದ್ಧ ಮಹಿಳಾ ಪೊಲೀಸ್‌ ಪೇದೆಯು ಕೇಸ್‌ ದಾಖಲಿಸಿದ್ದು, ಅಧೀನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಅಧೀನ ನ್ಯಾಯಾಲಯದ ತೀರ್ಪನ್ನು ಈಗ ಕೋಲ್ಕೊತಾ ಹೈಕೋರ್ಟ್‌ ಎತ್ತಿಹಿಡಿದಿದೆ. ಇದರೊಂದಿಗೆ ಯಾರು ಕೂಡ ಹೆಣ್ಣುಮಕ್ಕಳನ್ನು ಡಾರ್ಲಿಂಗ್‌ ಎಂದು ಕರೆಯಬಾರದು ಎಂಬುದಾಗಿಯೂ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಎಂಎಸ್‌ಪಿಗೂ, ಎಂಆರ್‌ಪಿಗೂ ವ್ಯತ್ಯಾಸ ತಿಳಿಯದ ರಾಹುಲ್‌ ಗಾಂಧಿ; ನೀವೇ ವಿಡಿಯೊ ನೋಡಿ

ಮಹಿಳೆಯು ಪೊಲೀಸ್‌ ಕಾನ್‌ಸ್ಟೆಬಲ್‌ ಆಗಿರಲಿ, ಸಾಮಾನ್ಯ ಗೃಹಿಣಿಯೇ ಆಗಿರಲಿ, ಅಪರಿಚಿತರು ಆಕೆಯನ್ನು ಡಾರ್ಲಿಂಗ್‌ ಎಂದು ಕರೆಯುವ ಹಾಗಿಲ್ಲ. ವ್ಯಕ್ತಿಯು ಮದ್ಯಪಾನ ಮಾಡಿರಲಿ ಅಥವಾ ಮಾಡದಿರಲಿ, ಯಾವುದೇ ಮಹಿಳೆಯನ್ನು ಡಾರ್ಲಿಂಗ್‌ ಎಂದು ಕರೆಯುವಂತಿಲ್ಲ. ಹಾಗೆ ಕರೆಯುವುದು ಕೂಡ ಸೆಕ್ಸುವಲ್‌ ರಿಮಾರ್ಕ್‌ ಆಗಿದೆ” ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿತು. ಅದರಲ್ಲೂ, ಒಬ್ಬ ವ್ಯಕ್ತಿಯು ಕುಡಿಯದೆ, ಸಮಚಿತ್ತದಿಂದ ಇದ್ದಾಗ ಏನಾದರೂ ಡಾರ್ಲಿಂಗ್‌ ಎಂದು ಕರೆದರೆ, ಆತನಿಗೆ ಇನ್ನೂ ಕಠಿಣ ಶಿಕ್ಷೆ ವಿಧಿಸಬೇಕು ಎಂಬುದಾಗಿ ಕೋರ್ಟ್‌ ಸ್ಪಷ್ಟಪಡಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

Blast in Bengaluru : ರಾಷ್ಟ್ರೀಯ ತನಿಖಾ ದಶ ಚೆನ್ನೈಯಲ್ಲಿ ನಡೆಸಿದ ದಾಳಿಯಲ್ಲಿ ಐವರನ್ನು ವಶಕ್ಕೆ ಪಡೆದಿದೆ. ಅವರು ಬೆಂಗಳೂರಿನಲ್ಲಿ ಮಾರ್ಚ್‌ 1ರಂದು ನಡೆದ ಬಾಂಬ್‌ ಸ್ಫೋಟ ಪ್ರಕರಣದ ರೂವಾರಿ ಜತೆ ಸಂಪರ್ಕ ಹೊಂದಿರುವ ಶಂಕೆ ಇದೆ.

VISTARANEWS.COM


on

Rameshwarm Cafe
Koo

ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟಕ್ಕೆ (Blast in Bengaluru) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (National Investigation Agency) ಚೆನ್ನೈಯಲ್ಲಿ ಹಲವು ಕಡೆ ದಾಳಿ ನಡೆಸಿ ಐವರನ್ನು ಬಂಧಿಸಿದೆ. ಚೆನ್ನೈನ ಸಿದ್ದಾಯಳ್ ಪೇಟೆ (Siddyalpet) ಮತ್ತು ಬಿಡಾರಿಯಾರ್ (bidariyar)ಟೆಂಪಲ್ ಬಳಿ ಎನ್‌ಐಎ ಕೆಲವು ಮನೆಗಳಿಗೆ ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದು ಈಗ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದೆ.

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್‌ಐಎ ತಕ್ಷಣದಿಂದಲೇ ಕಾರ್ಯಾಚರಣೆ ಆರಂಭ ಮಾಡಿದೆ. ಸ್ಪೋಟ ಪ್ರಕರಣದ ಬಳಿಕ ಎನ್‌ಐಎ ಚೆನ್ನೈನಲ್ಲಿರುವ ತನ್ನ ಪೇಯ್ಡ್ ಇನ್ಪಾರ್ಮರ್ (paid informer)ಗಳನ್ನು ಅಲರ್ಟ್ ಮಾಡಿತ್ತು. ಅವರು ನೀಡಿದ ಮಾಹಿತಿಯ ಮೇರೆಗೆ ಚೆನ್ನೈಯಲ್ಲಿ ಐವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಶದಲ್ಲಿರುವವರು ಬೆಂಗಳೂರಿನ ನಝೀರ್‌ ಜತೆ ಸಂಪರ್ಕ ಹೊಂದಿದ್ದರು!

ಚೆನ್ನೈನಲ್ಲಿ ವಶಕ್ಕೆ ಪಡೆದವರಲ್ಲಿ ಕೆಲವರು ಬೆಂಗಳೂರಿನ ಆರ್.ಟಿ ನಗರ ನಿವಾಸಿ, ಕುಖ್ಯಾತ ಭಯೋತ್ಪಾದಕ ನಝೀರ್‌ ಎಂಬಾತನ ಜತೆ ಸಂಪರ್ಕ ಹೊಂದಿದವರಾಗಿದ್ದಾರೆ.

ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಲಕಾರೈ ಏರಿಯಾ ಬಳಿ ಇರುವ ಸಂಶುದ್ದೀನ್‌ ಎಂಬಾತನ ಮನೆ ಮೇಲೆ ದಾಳಿ ಮಾಡಲಾಗಿದೆ.

ಪ್ರಸಕ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಜೀರ್‌ ಒಬ್ಬ ಕುಖ್ಯಾತ ಭಯೋತ್ಪಾದಕನಾಗಿದ್ದು, ಜೈಲಿನಲ್ಲಿ ಇರುತ್ತಲೇ ತನ್ನ ಷಡ್ಯಂತ್ರಗಳನ್ನು ರೂಪಿಸುತ್ತಾನೆ. ಯಾವುದೋ ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವ ಮುಸ್ಲಿಂ ಯುವಕರನ್ನು ತನ್ನೆಡೆಗೆ ಸೆಳೆದುಕೊಂಡು ಅವರ ಬ್ರೇನ್‌ ವಾಷ್‌ ಮಾಡಿ ಅವರು ಜೈಲಿನಿಂದ ಬಿಡುಗಡೆಯಾದ ಬಳಿಕ ಉಗ್ರ ಕೃತ್ಯಗಳಲ್ಲಿ ಭಾಗಿಯಾಗುವಂತೆ ಮಾಡುವುದು ಈತನ ಗೇಮ್‌ ಪ್ಲ್ಯಾನ್‌.

ಇದನ್ನೂ ಓದಿ : NIA Raid: ಬೆಂಗಳೂರು ಜೈಲಿನಲ್ಲಿ ಉಗ್ರ ದಾಳಿಗೆ ಸ್ಕೆಚ್; 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

ವರ್ಷದ ಹಿಂದೆ ಆರ್ ಟಿ ನಗರದ ಸುಲ್ತಾನ್ ಪಾಳ್ಯದ ಮನೆಯೊಂದರಲ್ಲಿ ಲೈವ್ ಗ್ರನೇಡ್ , ಪಿಸ್ತೂಲ್ ಸೇರಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು,. ಈ ಪ್ರಕರಣವನ್ನು ಮುಂದಿನ ತನಿಖೆಗಾಗಿ ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು.

ಅಂದು ಸೈಯದ್ ಸೊಹೇಲ್‌, ಜಾಹಿದ್, ಮುದಾಸಿರ್, ಉಮರ್, ಫೈಜಲ್ ಎಂಬುವರನ್ನು ಗ್ರನೇಡ್, ಪಿಸ್ತೂಲ್, ಜೀವಂತ ಗುಂಡುಗಳ ಜೊತೆಗೆ ಅರೆಸ್ಟ್ ಮಾಡಲಾಗಿತ್ತು. ಬಳಿಕ ಏಳು ಪಿಸ್ತೂಲ್, ನಲವತ್ತೈದು ಜೀವಂತ ಗುಂಡುಗಳು, ಹದಿನೈದು ಮೊಬೈಲ್, 20ಕ್ಕೂ ಹೆಚ್ಚು ಸಿಮ್ ಕಾರ್ಡ್, ಒಂದು ಡ್ಯಾಗರ್ ವಶಕ್ಕೆ ಪಡೆಯಲಾಗಿತ್ತು.

ಇದೀಗ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದಲ್ಲೂ ನಜೀರ್‌ನಿಂದ ಪ್ರೇರಿತರಾದ ದುಷ್ಟರೇ ಭಾಗಿಯಾಗಿದ್ದಾರೆ ಎಂಬ ಸಣ್ಣ ಸಂಶಯವಿದೆ. ಅದರ ಭಾಗವಾಗಿಯೇ ಈಗ ನಜೀರ್‌ ಜತೆ ಸಂಬಂಧ ಹೊಂದಿರುವ ವ್ಯಕ್ತಿಗಳ ವಿಚಾರಣೆ ನಡೆಯಲಿದೆ. ಪರಪ್ಪನ ಅಗ್ರಹಾರದಲ್ಲಿರುವ ನಜೀರ್‌ನನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

Continue Reading

ಕರ್ನಾಟಕ

NIA Raid: ಬೆಂಗಳೂರು ಜೈಲಿನಲ್ಲಿ ಉಗ್ರ ದಾಳಿಗೆ ಸ್ಕೆಚ್; 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

NIA Raid: ಬೆಂಗಳೂರು ಜೈಲಿನಲ್ಲಿ ಲಷ್ಕರೆ ತಯ್ಬಾ ಉಗ್ರನು ಮೂಲಭೂತವಾದ ಪಸರಿಸಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದೇಶದ 7 ರಾಜ್ಯಗಳ 17 ಕಡೆ ದಾಳಿ ನಡೆಸಿದೆ.

VISTARANEWS.COM


on

NIA Raid
Koo

ಬೆಂಗಳೂರು/ನವದೆಹಲಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜೈಲಿನಲ್ಲಿರುವ ಕೈದಿಗಳಲ್ಲಿ ಮೂಲಭೂತವಾದ (Radicalisation Of Prisoners) ಪಸರಿಸುವುದು, ಅವರನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡಿರುವ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ದೇಶದ 7 ರಾಜ್ಯಗಳ 7 ಕಡೆ ದಾಳಿ (NIA Raid) ನಡೆಸಿದೆ. ಲಷ್ಕರೆ ತಯ್ಬಾ (Lashkar-e-Taiba) ಉಗ್ರನೊಬ್ಬನಿಂದ ಕೈದಿಗಳ ಮನಸ್ಸಿನಲ್ಲಿ ಮೂಲಭೂತವಾದ ಬಿತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದಾಳಿ ನಡೆಸಿದ್ದು, 17 ಕಡೆಗಳಲ್ಲಿ ತೀವ್ರ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕ, ತಮಿಳುನಾಡು ಸೇರಿ 7 ರಾಜ್ಯಗಳಲ್ಲಿ ಎನ್‌ಐಎ ದಾಳಿ ನಡೆಸುತ್ತಿದೆ. ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು, ದೇಶದ ಹಲವೆಡೆ ಉಗ್ರ ದಾಳಿಗೆ ಸಂಚು ರೂಪಿಸುವುದು ಸೇರಿ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದೆ ಎನ್ನಲಾಗಿದೆ. ಹಲವು ಶಂಕಿತ ಉಗ್ರರು ಪಾಲ್ಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ಕೂಡ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ದಾಳಿಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಬಂಧಿತರಿಂದ ಏಳು ಪಿಸ್ತೂಲ್‌, ಆರು ಹ್ಯಾಂಡ್‌ ಗ್ರೆನೇಡ್‌, 45 ಸುತ್ತಿನ ಜೀವಂತ ಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕಳೆದ ವರ್ಷದ ಜುಲೈನಲ್ಲಿಯೇ ವಶಪಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಕೈದಿಗಳು ಸೇರಿ ಹಲವರು ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಎನ್‌ಐಎ ಕೂಲಂಕಷ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: NIA Raid: ಎನ್‌ಐಎ ದಾಳಿ, ಬೆಂಗಳೂರಿನಲ್ಲಿ ಶಂಕಿತ ಐಸಿಸ್‌ ಉಗ್ರ ವಶಕ್ಕೆ

ಏನಿದು ಪ್ರಕರಣ?

ಲಷ್ಕರೆ ತಯ್ಬಾ ಉಗ್ರ, ಸಂಘಟನೆಯ ಕಿಂಗ್‌ಪಿನ್‌ ಆಗಿರುವ ಟಿ ನಾಸೀರ್‌ ಎಂಬಾತನು ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದುಕೊಂಡು ಹಲವು ಕೈದಿಗಳು ಉಗ್ರವಾದದಲ್ಲಿ ತೊಡಗುವಂತೆ ಪ್ರಚೋದನೆ ನೀಡಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. ಹೀಗೆ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರವಾದದಲ್ಲಿ ತೊಡಗಿದ ಐವರು ಕೈದಿಗಳ ವಿರುದ್ಧ ಎನ್‌ಐಎ ಈಗಾಗಲೇ ತನಿಖೆ ನಡೆಸುತ್ತಿದೆ. ಇನ್ನೂ ಹಲವು ಕೈದಿಗಳು ಕೂಡ ಟಿ ನಾಸೀರ್‌ನಿಂದ ಪ್ರಚೋದನೆಗೊಂಡು ಉಗ್ರ ದಾಳಿಗೆ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sedition Case Mandya
ಮಂಡ್ಯ8 mins ago

Sedition Case : ಪಾಕಿಸ್ತಾನ್‌ ಮುರ್ದಾಬಾದ್‌ ಬದಲು ಜಿಂದಾಬಾದ್‌ ಎಂದ ಬಿಜೆಪಿ ಕಾರ್ಯಕರ್ತ ಜೈಲಿಗೆ!

Couple
ದೇಶ38 mins ago

ಹೆಣ್ಣುಮಕ್ಕಳನ್ನು ‘ಡಾರ್ಲಿಂಗ್‌’ ಎಂದು ಕರೆಯುವುದೂ ಇನ್ನು ಲೈಂಗಿಕ ಕಿರುಕುಳ; ಹುಡುಗರೇ ಹುಷಾರ್!

china military
ವಿದೇಶ40 mins ago

ಮಾಲ್ಡೀವ್ಸ್‌ಗೆ ಉಚಿತ ಮಿಲಿಟರಿ ನೆರವು ನೀಡುವ ಒಪ್ಪಂದಕ್ಕೆ ಚೀನಾ ಸಹಿ

Rameshwarm Cafe
ಪ್ರಮುಖ ಸುದ್ದಿ43 mins ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟ; ಚೆನ್ನೈಯಲ್ಲಿ NIA ದಾಳಿ, ಐವರು ಕ್ರಿಮಿಗಳ ಸೆರೆ

NIA Raid
ಕರ್ನಾಟಕ45 mins ago

NIA Raid: ಬೆಂಗಳೂರು ಜೈಲಿನಲ್ಲಿ ಉಗ್ರ ದಾಳಿಗೆ ಸ್ಕೆಚ್; 7 ರಾಜ್ಯಗಳಲ್ಲಿ ಎನ್‌ಐಎ ದಾಳಿ

Missile Attack
ವಿದೇಶ1 hour ago

Missile Attack: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ; ಕೇರಳ ಮೂಲದ ವ್ಯಕ್ತಿ ಸಾವು

Raja Marga Column Beena das2
ಸ್ಫೂರ್ತಿ ಕತೆ3 hours ago

Raja Marga Column : ಕ್ರಾಂತಿ ಸಿಂಹಿಣಿ ಬೀನಾ ದಾಸ್! ಅನಾಥ ಶವದ ಪರ್ಸಲ್ಲಿತ್ತು ಸುಭಾಸ್ ಚಿತ್ರ!

Best Ways To Clean Fruits
ಆಹಾರ/ಅಡುಗೆ4 hours ago

Best Ways To Clean Fruits: ಹಣ್ಣುಗಳನ್ನು ತಿನ್ನುವ ಮೊದಲು ನೀವು ಈ ವಿಧಾನದಲ್ಲಿ ತೊಳೆದುಕೊಂಡಿದ್ದೀರಾ?

Sunny weather across the karnataka
ಮಳೆ4 hours ago

Karnataka Weather: ರಾಜ್ಯಾದ್ಯಂತ ಇಂದು ಬಿಸಿಲಿನ ವಾತಾವರಣ

Supreme Court On Udhayanidhi Stalin
ದೇಶ5 hours ago

ವಿಸ್ತಾರ ಸಂಪಾದಕೀಯ: ‘ಅಧರ್ಮ’ ಹೇಳಿಕೆಯ ಸ್ಟಾಲಿನ್‌ಗೆ ಸುಪ್ರೀಂ ಚಾಟಿ; ಇನ್ನಾದರೂ ಬುದ್ಧಿ ಬರಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ17 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ20 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌