Site icon Vistara News

Dina Bhavishya: ಈ ರಾಶಿಯವರಿಗೆ ಮಾತೇ ಮುಳುವು; ಬೇಡದ ವಿಚಾರಕ್ಕೆ ಮೂಗು ತೂರಿಸಬೇಡಿ

read your daily horoscope predictions for february 10 2024

ಚಂದ್ರನು ಕುಂಭ ರಾಶಿಯಿಂದ ಶನಿವಾರ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಇಂದು ಅನೇಕ ಒತ್ತಡಗಳು ನಿಮ್ಮನ್ನು ಆವರಿಸುವ ಸಾಧ್ಯತೆ ಇದೆ. ವೃಷಭ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಕನ್ಯಾ ರಾಶಿಯ ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-02-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ
ತಿಥಿ: ಪಾಡ್ಯ 24:46 ವಾರ: ಶನಿವಾರ
ನಕ್ಷತ್ರ: ಧನಿಷ್ಠಾ 20:32 ಯೋಗ: ವರಿಯಾನ 14:52
ಕರಣ: ಕಿಂಸ್ತುಘ್ನ 14:37 ಅಮೃತ ಕಾಲ: ಬೆಳಗ್ಗೆ 11:26 ರಿಂದ 12:50ರ ವರೆಗೆ
ದಿನದ ವಿಶೇಷ: ಮಧ್ವನವರಾತ್ರಿ ಆರಂಭ, ಹಿರಿಯೂರು ತೇರುಮಲ್ಲೇಶ್ವರ ರಥ, ಕಾಯಕ ಶರಣರ ಜಯಂತಿ

ಸೂರ್ಯೋದಯ : 6:44  ಸೂರ್ಯಾಸ್ತ : 06:24

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅನೇಕ ಒತ್ತಡಗಳು ನಿಮ್ಮನ್ನು ಆವರಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಾಧರಣ ಫಲ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕವಿದೆ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಆಪ್ತರ ಆರೋಗ್ಯ ವಿಚಾರಣೆ ಮಾಡುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಇರಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯ ಕುರಿತು ಕಾಳಜಿ ವಹಿಸಿ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಹೆಚ್ಚಾಗಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ ಇರಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯವನ್ನು ಕೋರುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಆರ್ಥಿಕವಾಗಿ ಲಾಭ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಇದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version