Site icon Vistara News

Dina Bhavishya : ಅತಿರೇಕದ ಮಾತುಗಳು ಕಲಹಕ್ಕೆ ದಾರಿ

Dina Bhavishya

ಚಂದ್ರನು ಭಾನುವಾರವೂ ಮೀನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಕಟಕ ರಾಶಿಯವರು ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಸಿಂಹ ರಾಶಿಯವರು ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣವನ್ನು ಕೆಡಿಸುವುದು, ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-02-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ
ತಿಥಿ: ಬಿದಿಗೆ 21:08 ವಾರ: ಭಾನುವಾರ
ನಕ್ಷತ್ರ: ಶತಭಿಷಾ 17:38 ಯೋಗ: ಪರಿಘ 10:37
ಕರಣ: ಬಾಲವ 10:56 ಅಮೃತ ಕಾಲ: ಬೆಳಗ್ಗೆ 11:19 ರಿಂದ 12:44ರ ವರೆಗೆ
ದಿನದ ವಿಶೇಷ: ವಿಶ್ವರೂಪ ದರ್ಶನ ದಿನ, ಶ್ರೀ ವಾಸವಿ ಅಗ್ನಿಪ್ರವೇಶ ದಿನ

ಸೂರ್ಯೋದಯ : 6:44  ಸೂರ್ಯಾಸ್ತ : 06:24

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಗಳಿಸಬಹುದು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಇದೆ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ.
ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ನಿಮ್ಮ ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣವನ್ನು ಕೆಡಿಸುವುದು, ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳಿಂದ ನೀವು ಮೋಸ ಹೋಗಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ.
ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಆರ್ಥಿಕವಾಗಿ ಲಾಭ ಗಳಿಸುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version