ಚಂದ್ರನು ಶುಕ್ರವಾರವೂ ವೃಶ್ಚಿಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು ಹಾಗೂ ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಧನಸ್ಸು ರಾಶಿಯವರು ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು ಆದಷ್ಟು ಎಚ್ಚರಿಕೆ ಯಿಂದ ಹೆಜ್ಜೆ ಇಡಿ. ಮಕರ ರಾಶಿಯವರಿಗೆ ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಮೀನ ರಾಶಿಯವರಿಗೆ ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (2-02-2024)
ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಖಿನ್ನತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯದ ಕೋರಿಕೆ ಬರಬಹುರು. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳು ಮಾಡಬಹುದು. ನಕಾರಾತ್ಮಕ ಆಲೋಚನೆಗಳಿಂದ ದೂರಯಿರಿ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುತ್ತದೆ. ಆರ್ಥಿಕವಾಗಿ ಪ್ರಗತಿ ಇರಲಿದೆ.
ಅದೃಷ್ಟ ಸಂಖ್ಯೆ: 9
ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸಬಹುದು. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ನಿಮ್ಮ ಸಭ್ಯ ನಡವಳಿಕೆಗೆ ಮೆಚ್ಚುಗೆ ಸಿಗಲಿದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ನೀವು ಯಾವುದೇ ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ, ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಪಡೆಯಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದವರ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವಿರಿ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ಆರೋಗ್ಯದ ಕಡೆ ಗಮನಹರಿಸಿ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು ಆದಷ್ಟು ಎಚ್ಚರಿಕೆ ಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ ಇದೆ. ಆದಷ್ಟು ಆಹಾರದಲ್ಲಿ ಕಂಟ್ರೋಲ್ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳಸಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com