Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ? - Vistara News

ಭವಿಷ್ಯ

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for February 28 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರ ವೃಶ್ಚಿಕ ರಾಶಿಯಲ್ಲಿ ನೆಲೆಸಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮಿಥುನ ರಾಶಿಯವರು ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಲಿದ್ದಾರೆ. ಆರ್ಥಿಕವಾಗಿ ಪ್ರಗತಿ ಕಾಣಲಿದ್ದಾರೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಿಂಹ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಎಚ್ಚರವಹಿಸುವುದು ಸೂಕ್ತ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದ ಭರದಲ್ಲಿ ದುಡುಕುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-02-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ಪಂಚಮಿ 30:21 ವಾರ: ಗುರುವಾರ
ನಕ್ಷತ್ರ: ಚಿತ್ತಾ 10:21 ಯೋಗ: ವೃದ್ಧಿ 17:54
ಕರಣ: ಕೌಲವ 17:23 ಅಮೃತ ಕಾಲ: ಶುಕ್ರವಾರ ಬೆಳಗಿನ ಜಾವ 03:07 ರಿಂದ 04:53 ರವರೆಗೆ

ಸೂರ್ಯೋದಯ : 6:36   ಸೂರ್ಯಾಸ್ತ : 06:28

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲವು ನಿಮಗೆ ದೊರೆಯಲಿದ್ದು, ಬಯಸಿದ ಫಲಿತಾಂಶಗಳು ನಿಮ್ಮದಾಗಲಿವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಉಂಟಾಗಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಹೊಂದುವಿರಿ. ಆರ್ಥಿಕವಾಗಿ ಸುಧಾರಣೆ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇರುತ್ತದೆ. ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡಲಿದ್ದೀರಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಎಚ್ಚರವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದ ಭರದಲ್ಲಿ ದುಡುಕುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರುವುದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ . ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ ಉಂಟಾಗಲಿದೆ. ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ನಿಮ್ಮದಾಗಲಿದೆ. ಹಿರಿಯರಿಂದ ಮಾರ್ಗದರ್ಶನ ಪಡೆಯಿರಿ. ಉದ್ಯೋಗಿಗಳಿಗೆ ಮಿಶ್ರ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ನಿಮ್ಮದಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಕಾಣುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಸಹ ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗ್ಗೆ ಕಾಳಜಿ ಮಾಡುವವರನ್ನು ಉದಾಸೀನ ಮಾಡಬೇಡಿ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಪಾಡ್ಯ ಅಹೋರಾತ್ರಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಬುಧವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ , ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹಣಕಾಸಿನ ಹೂಡಿಕೆ ವ್ಯವಹಾರದ ಕುರಿತು ಹೊಸ ಆಲೋಚನೆಗಳನ್ನು ಮಾಡುವಿರಿ. ವೃಷಭ ರಾಶಿಯವರು ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ತುಲಾ ರಾಶಿಯವರು ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ ಅಹೋರಾತ್ರಿ ವಾರ: ಬುಧವಾರ
ನಕ್ಷತ್ರ: ಸ್ವಾತಿ 24:39 ಯೋಗ: ಸಿದ್ಧಿ 29:03
ಕರಣ: ಬಾಲವ 18:04 ಅಮೃತಕಾಲ: ಮಧ್ಯಾಹ್ನ 03:06 ರಿಂದ 04:50
ದಿನದ ವಿಶೇಷ: ಕೊಲ್ಲಾಪುರ ರಥ

ಸೂರ್ಯೋದಯ : 06:02   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ
10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸಿನ ಹೂಡಿಕೆ ವ್ಯವಹಾರದ ಕುರಿತು ಹೊಸ ಆಲೋಚನೆಗಳನ್ನು ಮಾಡುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇದೆ. ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:3

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವು ತರಿಸಲಿದೆ. ಹೀಗಾಗಿ ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಮಂಗಳವಾರ ಬೆಳಗ್ಗೆ 11:19ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ , ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವೃಷಭ ರಾಶಿಯವರಿಗೆ ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (23-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 29:17 ವಾರ: ಮಂಗಳವಾರ
ನಕ್ಷತ್ರ: ಚಿತ್ತಾ 22:31 ಯೋಗ: ವಜ್ರ 28:55
ಕರಣ: ವಿಷ್ಟಿ (ಭದ್ರ) 16:24 ಅಮೃತಕಾಲ: ಮಧ್ಯಾಹ್ನ 03:27 ರಿಂದ 05:14
ದಿನದ ವಿಶೇಷ: ಚಿತ್ತ ಹುಣ್ಣಿಮೆ (ಚೈತ್ರ ಹುಣ್ಣಿಮೆ) ಬೆಂಗಳೂರು ಕರಗ

ಸೂರ್ಯೋದಯ : 06:03   ಸೂರ್ಯಾಸ್ತ : 06:33

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉತ್ಸಾಹದ ವಾತಾವರಣ ತುಂಬಿರಲಿದೆ. ಆಪ್ತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ ಇರಲಿದೆ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿದ್ದರೂ, ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಮನೆಯಲ್ಲಿ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ ಇರಲಿದೆ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿಂದು ಸಂತೋಷದ ದಿನ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕು ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟದಿಂದ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವು ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ. ವೃಷಭ ರಾಶಿಯವರು ನಿಮ್ಮ ಕೆಲಸ- ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಚತುರ್ದಶಿ 27:25 ವಾರ: ಸೋಮವಾರ
ನಕ್ಷತ್ರ: ಹಸ್ತಾ 19:58 ಯೋಗ: ಹರ್ಷಣ 28:27
ಕರಣ: ಗರಜ 14:20 ಅಮೃತಕಾಲ: ಮಧ್ಯಾಹ್ನ 01:17 ರಿಂದ 03:04
ದಿನದ ವಿಶೇಷ: ಭೂಮಿ ದಿನ, ಕಂಚೀ ವರದರಾಜ ಜಯಂತಿ

ಸೂರ್ಯೋದಯ : 06:03   ಸೂರ್ಯಾಸ್ತ : 06:33

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದೆ. ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ- ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆದಕಬೇಡಿ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕೆಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಭಾನುವಾರವೂ ತುಲಾ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕನ್ಯಾ ರಾಶಿಯವರು ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಧನಸ್ಸು ರಾಶಿಯವರು ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ಇರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 25:10 ವಾರ: ಭಾನುವಾರ
ನಕ್ಷತ್ರ: ಉತ್ತರ ಪಾಲ್ಗುಣಿ 17:07 ಯೋಗ: ವ್ಯಾಘಾತ 27:42
ಕರಣ: ಕೌಲವ 11:57 ಅಮೃತಕಾಲ: ಬೆಳಗ್ಗೆ 09:01 ರಿಂದ 10:49
ದಿನದ ವಿಶೇಷ: ಮಹಾವೀರ ಜಯಂತಿ

ಸೂರ್ಯೋದಯ : 06:04   ಸೂರ್ಯಾಸ್ತ : 06:33

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಅಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಕೋಪದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಕುಟುಂಬದ ಆಪ್ತರು ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ:ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ಇರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮ.ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Road Accident
ಕರ್ನಾಟಕ6 mins ago

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Madrid Open 2024
ಕ್ರೀಡೆ15 mins ago

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Kotak Bank
ದೇಶ27 mins ago

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Lok sabha Election
ಪ್ರಮುಖ ಸುದ್ದಿ42 mins ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ1 hour ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ1 hour ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ2 hours ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ2 hours ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ2 hours ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 20242 hours ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ16 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌