ಚಂದ್ರನು ವೃಶ್ಚಿಕ ರಾಶಿ ಭಾನುವಾರ ಧನಸ್ಸು ರಾಶಿಗೆ ಪ್ರವೇಶಿಸುತ್ತಾನೆ. ವೃಷಭ, ಮಿಥುನ, ಕನ್ಯಾ , ವೃಶ್ಚಿಕ, ಮಕರ, ಕುಂಭ ರಾಶಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ಹಾಗೂ ವೃಷಭ ರಾಶಿಯ ಉದ್ಯೋಗಿಗಳಿಗೆ ಈ ದಿನ ಒತ್ತಡ ಹೆಚ್ಚಲಿದೆ. ಮಿಥುನ ರಾಶಿಯವರಿಗೆ ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವಿಸಬಹುದು, ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಂಭ ರಾಶಿಯವರ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಮೀನ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (04-02-2024)
ಮೇಷ: ಆರ್ಥಿಕವಾಗಿ ಬಲಿಷ್ಠತೆ ಹೊಂದುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ ಇದೆ. ಅವಘಡ ಸಂಭವಿಸಬಹುದು, ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗುವಿರಿ. ಸಹದ್ಯೋಗಿಗಳ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಮಾನಸಿಕ ಆರೋಗ್ಯ ಸದೃಢವಾಗಿರಲಿದೆ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕವಾಗಿ ಶ್ರಮ ಇರಲಿದೆ. ಉದ್ಯೋಗಿಗಳಿಗೆ ಸಹಕಾರ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ. ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶವಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹರಟೆಯಿಂದ ಕಾಲಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಸಕರಾತ್ಮಕ ಆಲೋಚನೆಯಲ್ಲಿ ತೊಡಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ತಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ ಇದಕ್ಕಾಗಿ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಮೀನ: ಒತ್ತಡದ ಕೆಲಸದಿಂದ ಮುಕ್ತಿ ಸಿಗಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com