ಚಂದ್ರನು ಗುರುವಾರದವರೆಗೆ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರಿಗೆ ಜೀವನದಲ್ಲಿ ಕಾಡುವ ಅಭದ್ರತೆ ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕನ್ಯಾ ರಾಶಿಯವರು ಇಂದು ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಹೀಗಾಗಿ ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (18-01-2024)
ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ. ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಆಗಲಿದೆ. ಆರೋಗ್ಯದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ವೃಷಭ: ಶಾಂತ ಮನಃಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವಂತೆ ಮಾಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದ್ದೀರಿ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಜೀವನದಲ್ಲಿ ಕಾಡುವ ಅಭದ್ರತೆ ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಉಂಟಾಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನ ಇದಾಗಿರಲಿದೆ. ಬಹುದಿನಗಳ ಕನಸು ನನಸಾಗುವ ಸಮಯ ಬಂದಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಸಿಂಹ: ಆಪ್ತರು ನಿಮ್ಮ ತಾಳ್ಮೆಯನ್ನು ಪರೀಕ್ಷಿಸಲಿದ್ದಾರೆ. ಹೀಗಾಗಿ ಈ ಬಗ್ಗೆ ಗಮನ ಇರಲಿ. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ ನಿಮ್ಮದಾಗಲಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಉಂಟಾಗಲಿದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾಗುವ ಸಾಧ್ಯತೆ ಇದೆ. ಇದರಿಂದಾಗಿ ಜಗಳವಾಗಬಹುದು. ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸನ್ನು ತಂದು ಕೊಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮಕರ: ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಉಂಟಾಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಉದ್ಯೋಗಿಗಳಿಗೆ ಸಾಧಾರಣ ಫಲ ಇರಲಿದೆ. ಕೌಟುಂಬಿಕ ವ್ಯಾಜ್ಯಗಳು ಉಂಟಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com