Dina Bhavishya : ಕೌಟುಂಬಿಕ ಕಲಹ; ಈ ರಾಶಿಯವರು ಇಂದು ನಾಲಿಗೆಗೆ ಲಗಾಮ್‌ ಹಾಕಿ - Vistara News

ಪ್ರಮುಖ ಸುದ್ದಿ

Dina Bhavishya : ಕೌಟುಂಬಿಕ ಕಲಹ; ಈ ರಾಶಿಯವರು ಇಂದು ನಾಲಿಗೆಗೆ ಲಗಾಮ್‌ ಹಾಕಿ

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

read your daily horoscope predictions for janaury 21 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಭಾನುವಾರವೂ ಮಿಥುನ ರಾಶಿಯಲ್ಲೇ ನೆಲಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ವೃಶ್ಚಿಕ ರಾಶಿಯವರು ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಮೀನ ರಾಶಿಯವರಿಗೆ ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಏಕಾದಶಿ 19:26 ವಾರ: ಭಾನುವಾರ
ನಕ್ಷತ್ರ: ರೋಹಿಣಿ 27:51 ಯೋಗ:ಶುಕ್ಲ 09:45
ಕರಣ: ವಣಿಜ 07:23 ಅಮೃತ ಕಾಲ: ಮಧ್ಯರಾತ್ರಿ 12:34 ರಿಂದ 02:13 ರವರೆಗೆ
ದಿನದ ವಿಶೇಷ: ಉಜಿರೆ ಜನಾರ್ಧನ ರಥ

ಸೂರ್ಯೋದಯ : 06:46  ಸೂರ್ಯಾಸ್ತ : 06:15

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆಯು ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಚಿಸುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ.ಅನಿರೀಕ್ಷಿತ ಖರ್ಚು ಇರಲಿದೆ ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ.ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಮಾತನಾಡುವುದು ಬೇಡ.ಆರ್ಥಿಕ ಪ್ರಗತಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ,ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ.ಅರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಗದಗ

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

VISTARANEWS.COM


on

By

Gosavi samaj lathicharged Sri Ram Sene calls for bandh in Lakshmeshwara town on October 19
Koo

ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

ಏನಿದು ಘಟನೆ?

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

Continue Reading

ಬೆಂಗಳೂರು

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Murder Case: ಮಹಿಳೆಯೊಬ್ಬಳು ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತಿಗೆ ಸಿಕ್ಕಿಬಿದ್ದಿದ್ದಾಳೆ. ಪತ್ನಿಯ ಕಳ್ಳಾಟಕ್ಕೆ ಸಿಟ್ಟಾದ ಪತಿ ಇಬ್ಬರನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

VISTARANEWS.COM


on

By

A man killed his wife and her lover then committed suicide
Koo

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಪ್ರಿಯಕರನನ್ನು ಕೊಲೆ (Murder case) ಮಾಡಿದ್ದಾನೆ. ಪೈತಮ್ಮ (40), ಗಣೇಶ್ ಕುಮಾರ್ ಕೊಲೆಯಾದವರು. ಗೊಲ್ಲಬಾಬು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇವರೆಲ್ಲರೂ ಮೂಲತಃ ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

ಪೈತಮ್ಮ (40), ಗೊಲ್ಲಬಾಬು (45) ದಂಪತಿ ಕೆಲಸ ಅರಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಪತ್ನಿ ಪೈತಮ್ಮ ಮೇಲೆ ಆಗಾಗ ಗೊಲ್ಲಬಾಬು ಅನುಮಾನ ವ್ಯಕ್ತ ಪಡಿಸಿದ್ದ. ನಿನ್ನೆ ತಡರಾತ್ರಿಯಲ್ಲಿ ಗಣೇಶ್ ಕುಮಾರ್ ಜತೆಗಿದ್ದಾಗಲೇ ಪೈತಮ್ಮ ಪತಿಗೆ ಸಿಕ್ಕಿಬಿದ್ದಿದ್ದಳು.

ಮತ್ತೊಬ್ಬನೊಟ್ಟಿಗೆ ಪತ್ನಿಯನ್ನು ಕಂಡೊಡನೆ ಸಿಟ್ಟಾದ ಗೊಲ್ಲಬಾಬು ಅಲ್ಲೇ ಇದ್ದ ಮರದ ರಿಪೀಸ್‌ನಿಂದ ಹಲ್ಲೆ ನಡೆಸಿ, ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯ ನಿರ್ಮಾಣ ಹಂತದ ‌ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಸಿನಿಮಾ

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

Parvati Nair: ಐರ್ಲೆಂಡ್‌ನ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮಿಳು ಥ್ರಿಲ್ಲರ್ “ಊಣ್ ಪರವೈಲ್ ” ಹೆಸರು ಬಿಡುಗಡೆಯಾಗಿದೆ. ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

By

Parvati Nair to play dual role in suspense thriller un Paravail Tamil film
Koo

ಬೆಂಗಳೂರು: ಇತ್ತೀಚೆಗೆ ಐರ್ಲೆಂಡ್, ಡಬ್ಲಿನ್‌ನಲ್ಲಿ ನಡೆದ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಹುನಿರೀಕ್ಷಿತ ತಮಿಳು ಥ್ರಿಲ್ಲರ್ ಮೂವಿ ” ಊಣ್ ಪರವೈಲ್ ” ಅಧಿಕೃತವಾಗಿ ಬಿಡುಗಡೆಯಾಯಿತು. ತಾಲ್ ಮತ್ತು ಕಹೋ ನಾ ಪ್ಯಾರ್ ಹೈ ಖ್ಯಾತಿಯ ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಕಬೀರ್ ಲಾಲ್ ನಿರ್ದೇಶಿಸಿದ ಈ ಚಿತ್ರದಲ್ಲಿ ಪಾರ್ವತಿ ನಾಯರ್ (Parvati Nair) ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಸಾಧಾರಣ ನಟನಾ ಕೌಶಲ್ಯವನ್ನು ಪ್ರದ‌ರ್ಶಿಸಿದ್ದಾರೆ. ಊಣ್ ಪರವೈಲ್ ಚಿತ್ರವು ಸಸ್ಪೆನ್ಸ್, ರಹಸ್ಯ ಮತ್ತು ಭಾವನಾತ್ಮಕ ನಾಟಕದ ವಿಶಿಷ್ಟ ಮಿಶ್ರಣವಾಗಿದೆ ಎಂದು ಪಾರ್ವತಿ ನಾಯರ್ ಹೇಳಿದರು.

ಪಾರ್ವತಿ ನಾಯರ್‌ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭವ್ಯ ಮತ್ತು ದಿವ್ಯಾ ದ್ವಿಪಾತ್ರಗಳನ್ನು ನಿರ್ವಹಿಸುವುದು ಸವಾಲಾಗಿತ್ತು. ಥ್ರಿಲ್ಲರ್‌ ಸಿನಿಮಾದಲ್ಲಿ ನನ್ನ ಅಭಿಯಾನವನ್ನು ಪ್ರದರ್ಶಿಸಲು ರೋಮಾಂಚನಗೊಂಡಿದ್ದೇನೆ ಎಂದಿದ್ದಾರೆ. ಇನ್ನು “ಊಣ್ ಪರವೈಲ್” ನಲ್ಲಿ ಪಾರ್ವತಿ ನಾಯರ್ ಅದ್ಭುತವಾಗಿ ನಟಿಸಿದ್ದಾರೆ. ಎರಡು ವಿಭಿನ್ನ ಪಾತ್ರಗಳಲ್ಲಿ ದಿವ್ಯಾ, ದೃಢಸಂಕಲ್ಪವುಳ್ಳ ಮತ್ತು ರಕ್ಷಿಸುವ ಸಹೋದರಿ ಮತ್ತು ಭವ್ಯಾ, ನಿಗೂಢ ಸಂದರ್ಭಗಳಲ್ಲಿ ದುರಂತ ಅಂತ್ಯವನ್ನು ಎದುರಿಸುವ ದೃಷ್ಟಿಹೀನ ಹುಡುಗಿಯಾಗಿದ್ದಾಳೆ. 

Parvati Nair to play dual role in suspense thriller un Paravail Tamil film
Parvati Nair to play dual role in suspense thriller un Paravail Tamil film

ದಿವ್ಯಾ ತನ್ನ ಸಹೋದರಿ ಭವ್ಯಳ ಸಾವಿನ ಸುತ್ತಲಿನ ಸತ್ಯವನ್ನು ಆಳವಾಗಿ ಪರಿಶೀಲಿಸಿದಾಗ, ಆಕೆಯ ಹಿಂದಿನ ರಹಸ್ಯಗಳು ಮತ್ತು ಸುಳ್ಳಿನ ಸಂಕೀರ್ಣ ಜಾಲವನ್ನು ಬಹಿರಂಗಪಡಿಸುತ್ತಾರೆ. ಊಣ್ ಪರವೈಲ್ ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದು ಮಹಿಳೆಯರ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ನಿರ್ದೇಶಕ ಕಬೀರ್ ಲಾಲ್ ಹೇಳಿದರು. “ಪಾರ್ವತಿ ನಾಯರ್ ಅವರ ಗಮನಾರ್ಹ ಅಭಿನಯವು ನಿರೂಪಣೆಗೆ ಆಳ ಮತ್ತು ಸೂಕ್ಷ್ಮತೆಯನ್ನು ತರುತ್ತದೆ. ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದುಇಟ್ಟುಕೊಳ್ಳಲಿದೆ. ಐರ್ಲೆಂಡ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಚಲನಚಿತ್ರದ ಬಿಡುಗಡೆಯು ಮತ್ತಷ್ಟು ಉತ್ಸಾಹದಿಂದ ಕೂಡಿತ್ತು. ಉದ್ಯಮದ ತಜ್ಞರು ಮತ್ತು ಚಲನಚಿತ್ರ ಉತ್ಸಾಹಿಗಳು ಚಲನಚಿತ್ರದ ವಿಶಿಷ್ಟತೆಯನ್ನು ಶ್ಲಾಘಿಸಿದರು. 

ಪಾರ್ವತಿ ನಾಯರ್ ಅವರ ಅದ್ವಿತೀಯ ಅಭಿನಯದ ಕಥಾಹಂದರ ಹೊಂದಿರುವ ಈ ಚಿತ್ರ ಭಾರತದಲ್ಲಿ ಡಿಸೆಂಬರ್ 2024 ರೊಳಗೆ ಬಿಡುಗಡೆಗೊಳ್ಳಲಿದೆ. ಊಣ್ ಪರವೈಲ್ ಬಗ್ಗೆ” ಊಣ್ ಪರವೈಲ್” ಅಜಯ್ ಕುಮಾರ್ ಸಿಂಗ್ ಮತ್ತು ರೇಖಾ ಸಿಂಗ್ ನಿರ್ಮಿಸಿದ ತಮಿಳು ಥ್ರಿಲ್ಲರ್ ಆಗಿದೆ. ಚಿತ್ರದ ಹಿಡಿತದ ನಿರೂಪಣೆ ಮತ್ತು ಪಾರ್ವತಿ ನಾಯರ್ ಅವರ ಅಸಾಧಾರಣ ಅಭಿನಯವು ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುವ ಭರವಸೆ ನೀಡುತ್ತದೆ.

Continue Reading

ಬೆಂಗಳೂರು

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

Construction of Business Park of Bangalore Airport City Limited a subsidiary of Bangalore International Airport Limited
Construction of Business Park of Bangalore Airport City Limited a subsidiary of Bangalore International Airport Limited

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ6 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು9 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ9 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು12 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ12 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ12 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌