Dina Bhavishya : ಈ ನಾಲ್ಕು ರಾಶಿಯವರಿಗೆ ಇಂದು ಲಕ್ಕಿ ನಂಬರ್ 1! - Vistara News

ಪ್ರಮುಖ ಸುದ್ದಿ

Dina Bhavishya : ಈ ನಾಲ್ಕು ರಾಶಿಯವರಿಗೆ ಇಂದು ಲಕ್ಕಿ ನಂಬರ್ 1!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಹುಣ್ಣಿಮೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

daily horoscope predictions for Janaury ‌25 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕಟಕ ರಾಶಿಯಿಂದ ಗುರುವಾರ ಮುಂಜಾನೆ 2.36ಕ್ಕೆ ಸಿಂಹ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಶನಿವಾರದ ವರೆಗೂ ಇಲ್ಲಿಯೇ ನೆಲೆಸಲಿದ್ದು, ಅಂದು ಮಧ್ಯಾಹ್ನ 2.11ಕ್ಕೆ ಕನ್ಯರಾಶಿಗೆ ಪ್ರವೇಶ ಮಾಡುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ ಹಾಗೂ ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಸಿಂಹ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಹುಣ್ಣಿಮೆ 23:22 ವಾರ: ಗುರುವಾರ
ನಕ್ಷತ್ರ: ಪುನರ್ವಸು 08:15 ಯೋಗ: ವಿಷ್ಕಂಭ 07:30
ಕರಣ: ವಿಷ್ಟಿ 10:33 ಅಮೃತ ಕಾಲ: ಶುಕ್ರವಾರ ಮುಂಜಾನೆ 03:29 ರಿಂದ 05:14ರ ವರೆಗೆ
ದಿನದ ವಿಶೇಷ: ಬನದ ಹುಣ್ಣಿಮೆ (ಬಂದ ಹುಣ್ಣಿಮೆ), ಮಾಘಸ್ನಾನಾರಂಭ, ರಾಷ್ಟ್ರೀಯ ಮತದಾರರ ದಿನ, ರಾಷ್ಟ್ರೀಯ ಪ್ರವಾಸೋದ್ಯಮ ದಿನ.

ಸೂರ್ಯೋದಯ : 06:46  ಸೂರ್ಯಾಸ್ತ : 06:17

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣದ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಹಾಸ್ಯದ ಮನೋಭಾವವು ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದೀರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯವನ್ನು ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ನಿಮ್ಮ ಪೂರ್ವಯೋಜಿತ ಕಾರ್ಯಗಳನ್ನು ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡವನ್ನು ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ. ಅದು ಅಪಾಯ ತಂದೀತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೆನಿಸಿದರೂ. ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Talguppa Honnavar Railway Line: ಹೊನ್ನಾವರ-ತಾಳಗುಪ್ಪ ರೈಲ್ವೆ ಮಾರ್ಗ; ಮಂಕಿಯ ಬಿಜೆಪಿ ಮುಖಂಡರಿಂದ ಸಂಸದ ಕಾಗೇರಿಯವರಿಗೆ ಮನವಿ

Talguppa Honnavar Railway Line: ಬೆಂಗಳೂರಿನಿಂದ ಸಾಗರದ ತಾಳಗುಪ್ಪದವರೆಗೆ ರೈಲ್ವೆ ಮಾರ್ಗವಿದೆ. ಆದರೆ ಅಲ್ಲಿಂದ ಹೊನ್ನಾವರಕ್ಕೆ ಬೇರೆ ವಾಹನದಲ್ಲಿ ಬರಲು ಸಾಕಷ್ಟು ಸಮಯ ವ್ಯರ್ಥವಾಗುತ್ತದೆ. ಹಾಗಾಗಿ ತಾಳಗುಪ್ಪದಿಂದ ಹೊನ್ನಾವರದವರೆಗೆ ರೈಲ್ವೆ ಮಾರ್ಗ ನಿರ್ಮಿಸಿದರೆ ಹೊನ್ನಾವರ ಸುತ್ತಮುತ್ತಲಿನ ಜನರಿಗೆ ಬೆಂಗಳೂರಿನಿಂದ ಸುಗಮವಾಗಿ ಆಗಮಿಸಲು ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಂಕಿಯ ಬಿಜೆಪಿ ಮುಖಂಡರು ಮತ್ತು ನಾಗರಿಕರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಪತ್ರ ಅರ್ಪಿಸಿದರು.

VISTARANEWS.COM


on

Talguppa Honnavar Railway Line
Koo

ಹೊನ್ನಾವರ: ಹೊನ್ನಾವರ – ತಾಳಗುಪ್ಪ ರೈಲ್ವೆ ಮಾರ್ಗ ನಿರ್ಮಿಸುವಂತೆ (Talguppa Honnavar Railway Line) ಕೇಂದ್ರ ರೈಲ್ವೆ ಇಲಾಖೆ ಮೇಲೆ ಒತ್ತಡ ಹೇರುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಇತ್ತೀಚೆಗೆ ಮನವಿ ಪತ್ರ ನೀಡಲಾಯಿತು.

ಸಂಸದ ಕಾಗೇರಿ ಅವರಿಗೆ ನೀಡಿರುವ ಮನವಿ ಪತ್ರದ ಸಾರ ಹೀಗಿದೆ

ಹೊನ್ನಾವರ ತಾಲ್ಲೂಕಿನ ಮತದಾರರಾದ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ನಮ್ಮ ತಾಲೂಕಿನ ಸಾವಿರಾರು ಯುವಕರು ಉದ್ಯೋಗದ ನಿಮಿತ್ತ ಮತ್ತು ಶಿಕ್ಷಣದ ನಿಮಿತ್ತ ಬೆಂಗಳೂರಿನಲ್ಲಿ ವಾಸವಾಗಿದ್ದು ಅವರು ರಜೆಯಲ್ಲಿ ಊರಿಗೆ ಬಂದು ಹೋಗಬೇಕಾದರೆ ಬಸ್ಸನ್ನೇ ಅವಲಂಬಿಸಬೇಕಾಗಿದೆ. ಹಬ್ಬದ ಸಂದರ್ಭದಲ್ಲಿ ಬಸ್ಸಿನ ಟಿಕೆಟ್‌ ದರ ಸಾವಿರಾರು ರೂಪಾಯಿ ಆಗುತ್ತದೆ. ನಮ್ಮೂರ ಯುವಕರು ಮತ್ತು ವಿದ್ಯಾರ್ಥಿಗಳು ಸಾಮಾನ್ಯವಾಗಿ ಆರ್ಥಿಕವಾಗಿ ಹಿಂದುಳಿದವರೇ ಆಗಿದ್ದು, ದುಬಾರಿ ಹಣ ಕೊಟ್ಟು ಊರಿಗೆ ಬರುವುದು ಕಷ್ಟಕರ.
ಇದರಿಂದಾಗಿ ಕೆಲವೊಮ್ಮೆ ಅನಿವಾರ್ಯ ಸಂದರ್ಭ ಇದ್ದರೂ ಊರಿಗೆ ಬರುವುದು ಮುಂದೂಡಬೇಕಾಗುತ್ತದೆ. ಅಲ್ಲದೇ ನಮ್ಮೂರಿನ ಕೆಲವೊಂದು ವ್ಯಾಪಾರಿಗಳು ಬೆಂಗಳೂರಿನಿಂದ ಸಾಮಾನು ಸರಂಜಾಮುಗಳನ್ನು ತರಬೇಕಾಗುತ್ತದೆ. ಅದೂ ಸಹ ಈಗಿನ ಸಾರಿಗೆ ಸ್ಥಿತಿಯಲ್ಲಿ ತರುವುದು ದುಬಾರಿಯಾಗುತ್ತಿದೆ. ಅಲ್ಲದೇ ನಮ್ಮ ಜಿಲ್ಲೆಯ ಕೆಲವು ಅನಾರೋಗ್ಯ ಪೀಡಿತ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಕರೆದೊಯ್ಯಬೇಕಾದರೂ ತುಂಬಾ ತೊಂದರೆ ಆಗುತ್ತಿದೆ.

ಇವೆಲ್ಲ ಸಮಸ್ಯೆ ಬಗೆಹರಿಯಬೇಕಾದರೆ ಹೊನ್ನಾವರ – ತಾಳಗುಪ್ಪ ರೈಲ್ವೆ ಮಾರ್ಗ ಮಂಜೂರಾತಿ ಆಗಿ ರೈಲ್ವೆ ಓಡಾಟ ಆರಂಭವಾಗಬೇಕು. ಹಾಗಾಗಿ ದಯಾಳುಗಳಾದ ತಾವು ಈ ರೈಲ್ವೆಯ ಕುರಿತು ವಿಶೇಷ ಕಾಳಜಿ ವಹಿಸಿ ಈ ರೈಲ್ವೇ ಮಂಜೂರಾತಿ ಬಗ್ಗೆ ರೈಲ್ವೆ ಸಚಿವರ ಹತ್ತಿರ ಈ ಬಗ್ಗೆ ಮಾತಾಡಿದರೆ ಈ ಕಾರ್ಯ ಆಗಬಹುದು. ದಯವಿಟ್ಟು ತಾವು ಈ ಬಗ್ಗೆ ಕಾಳಜಿ ವಹಿಸಿ ನಮ್ಮ ಊರಿನ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು ಎಂದು ಮನವಿ ಮಾಡಲಾಗಿದೆ.
ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಂಕಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಕಿ ಬಿಜೆಪಿ ಓಬಿಸಿ ಕಾರ್ಯದರ್ಶಿ ಆನಂದ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ನಾಯ್ಕ, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ನಾಯ್ಕ, ಸತೀಶ್ ನಾಯ್ಕ, ಸುಬ್ರಾಯ ನಾಯ್ಕ ಬೊಳೆಬಸ್ತಿ, ಸುರೇಶ್ ನಾಯ್ಕ (ಬುಡ್ಡಾ) ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಮನವಿ ಸ್ವೀಕರಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ತಾಳಗುಪ್ಪ-ಹೊನ್ನಾವರ ರೈಲ್ವೆ ಮಾರ್ಗದ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

Continue Reading

ಪ್ರಮುಖ ಸುದ್ದಿ

Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ

Terrorist Attack: ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ.

VISTARANEWS.COM


on

Terrorist Attack
Koo

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ (LOC) ಭದ್ರತಾ ಪಡೆಗಳು (Security Forces) ಉಗ್ರರ ಒಳನುಸುಳುವಿಕೆ (Infiltration) ಪ್ರಯತ್ನವನ್ನು (Terrorist Attack) ವಿಫಲಗೊಳಿಸಿದ್ದು, ಮೂವರು ಭಯೋತ್ಪಾದಕರನ್ನು ಕೊಂದುಹಾಕಿದ್ದಾರೆ (Terrorists killed) ಎಂದು ಭಾರತೀಯ ಸೇನೆ (Indian Army) ಭಾನುವಾರ ತಿಳಿಸಿದೆ.

ಎಲ್‌ಒಸಿಯಲ್ಲಿ ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಯಿತು. “ಕೆರಾನ್ ಸೆಕ್ಟರ್‌ನಲ್ಲಿನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ. ಹತ್ಯೆಗೀಡಾದ ಉಗ್ರರ ಗುರುತು ಕುರಿತು ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಗುಂಡಿನ ಚಕಮಕಿಯಲ್ಲಿ ಸೇನೆಯು ತನ್ನ ಇಬ್ಬರು ಸೈನಿಕರನ್ನು ಕಳೆದುಕೊಂಡಿತ್ತು.

ಜುಲೈ 6 ರಂದು ಚಿನಿಗಾಮ್‌ನಲ್ಲಿ ನಾಲ್ವರು ಭಯೋತ್ಪಾದಕರು ಮತ್ತು ಒಬ್ಬ ಯೋಧ (Soldier) ಸಾವನ್ನಪ್ಪಿದ್ದರೆ, ಮೊಡೆರ್‌ಗಾಮ್‌ನಲ್ಲಿ ಇನ್ನೊಬ್ಬ ಯೋಧ ಸಾವನ್ನಪ್ಪಿದ್ದರು. ಜುಲೈ 7 ರಂದು ಮಾಡರ್‌ಗಾಮ್ ಕಾರ್ಯಾಚರಣೆ ಮುಕ್ತಾಯಗೊಳ್ಳುತ್ತಿದ್ದಂತೆ ಉಳಿದ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಯಿತು.

ಜೂನ್ 23 ರಂದು, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಎಲ್‌ಒಸಿ ಬಳಿ ಭದ್ರತಾ ಪಡೆಗಳು ನಡೆಸಿದ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಉರಿ ಸೆಕ್ಟರ್‌ನ ಎಲ್‌ಒಸಿಯ ಬಾಸ್‌ಗ್ರೇನ್ ಗ್ರಾಮದ ಬಳಿಯ ಕಣಿವೆಯೊಳಗೆ ನುಸುಳಲು ಭಯೋತ್ಪಾದಕರ ಗುಂಪಿನ ಒಳನುಸುಳುವಿಕೆಯ ಪ್ರಯತ್ನವನ್ನು ಭಾರತೀಯ ಸೇನೆಯು ವಿಫಲಗೊಳಿಸಿತು.

ಏಪ್ರಿಲ್‌ನಲ್ಲಿ, ರುಸ್ತಮ್ ಪೋಸ್ಟ್ ಬಳಿಯ ಉರಿಯಲ್ಲಿ ಸೇನೆಯು ಇಬ್ಬರು ನುಸುಳುಕೋರರನ್ನು ಕೊಂದಿತು. ಉರಿ ಸೆಕ್ಟರ್‌ನ ಎಲ್‌ಒಸಿಯ ಸಬುರಾ ನುಲ್ಲಾ ಬಳಿ ಭದ್ರತಾ ಪಡೆಗಳಿಂದ ಹತ್ಯೆಗೀಡಾದ ಇಬ್ಬರು ನುಸುಳುಕೋರರಿಗೆ ಪಾಕಿಸ್ತಾನಿ ಪಡೆ ಬೆಂಬಲ ನೀಡಿತ್ತು ಎಂದು ಭಾರತೀಯ ಸೇನೆ ಹೇಳಿದೆ. ಇದು ಈ ವರ್ಷದ ಮೊದಲ ಒಳನುಸುಳುವಿಕೆ ಪ್ರಯತ್ನವಾಗಿದೆ. ಭಾರತೀಯ ಪಡೆಗಳು ಎಚ್ಚರದಿಂದಿದ್ದು ಇದನ್ನು ತಪ್ಪಿಸಿವೆ.

ಕಳೆದ ವರ್ಷ ನವೆಂಬರ್‌ನಲ್ಲಿ ಉರಿ ಸೆಕ್ಟರ್‌ನಲ್ಲಿ ಇದೇ ರೀತಿಯ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ (Indian army) ವಿಫಲಗೊಳಿಸಿತ್ತು ಮತ್ತು ಇಬ್ಬರು ಭಯೋತ್ಪಾದಕರನ್ನು ಕೊಂದಿತ್ತು.

ಇದನ್ನೂ ಓದಿ: PM Modi Russia Visit: ಭಾರತ-ರಷ್ಯಾ ಜಂಟಿ ಹೇಳಿಕೆ ಬಿಡುಗಡೆ; ಜಮ್ಮು & ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 19:18 ವಾರ: ಸೋಮವಾರ
ನಕ್ಷತ್ರ: ಸ್ವಾತಿ 24:28 ಯೋಗ: ಸಿದ್ಧಿ 06:58
ಕರಣ: ಬಾಲವ 06:26 ಅಮೃತಕಾಲ: ಮಧ್ಯಾಹ್ನ 02:49 ರಿಂದ 04:35

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ ಇದೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ ಇದ್ದು, ಇದರಿಂದ ನೀವು ದೈಹಿಕವಾಗಿ ಬಳಲುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡದಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ : ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ ಉಂಟಾಗಲಿದೆ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಹೆಚ್ಚಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ.ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ:ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು,ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ:ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ.ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

NSUI: ಎಬಿವಿಪಿ ಆರೋಪವನ್ನು ಎನ್‌ಎಸ್‌ಯುಐ ಅಲ್ಲಗಳೆದಿದೆ. “ಎಬಿವಿಪಿ ಉಪಾಧ್ಯಕ್ಷ ಅಭಿ ದಹಿಯಾ ಹಾಗೂ ಅಧ್ಯಕ್ಷ ತುಷಾರ್‌ ದೇಢಾ ಅವರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂಬ ಸಂಗತಿಯನ್ನು ಎನ್‌ಎಸ್‌ಯುಐ ಬಯಲು ಮಾಡಿದೆ. ಇದರ ಸೇಡಿನ ಭಾಗವಾಗಿಯೇ ಎಬಿವಿಪಿ ಕಾರ್ಯಕರ್ತರು ವಿವಿಯಲ್ಲಿರುವ ಎನ್‌ಎಸ್‌ಯುಐ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎನ್‌ಎಸ್‌ಯುಐ ತಿಳಿಸಿದೆ.

VISTARANEWS.COM


on

NSUI
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಗಳ ಕಲಹ ಜೋರಾಗಿದೆ. ದೆಹಲಿ ವಿಶ್ವವಿದ್ಯಾಲಯದಲ್ಲಿ (Delhi University) ಕಾಂಗ್ರೆಸ್‌ ವಿದ್ಯಾರ್ಥಿ ಘಟಕವಾದ ನ್ಯಾಷನಲ್‌ ಸ್ಟುಡೆಂಟ್ಸ್‌ ಯುನಿಯನ್‌ ಆಫ್‌ ಇಂಡಿಯಾ (NSUI) ಹಾಗೂ ಆರ್‌ಎಸ್‌ ವಿದ್ಯಾರ್ಥಿ ಘಟಕವಾದ ಎಬಿವಿಪಿ ಮಧ್ಯೆ ಗಲಾಟೆ ನಡೆದಿದೆ. ಅದರಲ್ಲೂ, ದೆಹಲಿ ವಿವಿಯಲ್ಲಿರುವ ದೆಹಲಿ ವಿವಿ ವಿದ್ಯಾರ್ಥಿಗಳ ಒಕ್ಕೂಟದ (DUSU) ಕಚೇರಿಗೆ ಎನ್‌ಎಸ್‌ಯುಐ ಘಟಕದ ಮುಖಂಡರು ದಾಳಿ ನಡೆಸಿದ್ದು, ಅಲ್ಲಿದ್ದ ರಾಮನ ಮೂರ್ತಿಯನ್ನು ಒಡೆದು ಹಾಕಿ, ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ವಿರೂಪಗೊಳಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ.

ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಅಭಿ ದಹಿಯಾ ಅವರು ದಾಳಿಯ ಕುರಿತು ಮಾಹಿತಿ ನೀಡಿದ್ದಾರೆ. “ಡಿಯುಎಸ್‌ಯು ಅಧ್ಯಕ್ಷ ತುಷಾರ್‌ ದೇಢಾ, ಕಾರ್ಯದರ್ಶಿ ಅಪರಾಜಿತಾ, ಜಂಟಿ ಕಾರ್ಯದರ್ಶಿ ಸಚಿನ್‌ ಬೈಸ್ಲಾ ಸೇರಿ ಹಲವರ ಕಚೇರಿಗೆ ಭಾನುವಾರ ಬೆಳಗ್ಗೆ ಎನ್‌ಎಸ್‌ಯುಐ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ದಾಳಿಕೋರರು ಮೊದಲು ಮದ್ಯಪಾನ ಮಾಡಿದ್ದಾರೆ. ಇದಾದ ಬಳಿಕ ಡಿಯುಎಸ್‌ಯು ಪದಾಧಿಕಾರಿಗಳ ಕಚೇರಿಗಳಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ” ಎಂದಿದ್ದಾರೆ.

ಅಭಿ ದಹಿಯಾ ಕಚೇರಿಯಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವ, ವಿವೇಕಾನಂದರ ಫೋಟೊವನ್ನು ವಿರೂಪಗೊಳಿಸಿರುವ, ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಕಚೇರಿಯಲ್ಲಿದ್ದ ಶ್ರೀರಾಮನ ಮೂರ್ತಿಯನ್ನು ಕೂಡ ಒಡೆದು ಹಾಕಲಾಗಿದೆ ಎಂಬುದಾಗಿ ಒಕ್ಕೂಟವು ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಕೂಡ ಆರೋಪ-ಪ್ರತ್ಯಾರೋಪಕ್ಕಿಳಿದಿದ್ದಾರೆ.

ಎಬಿವಿಪಿ ಆರೋಪವನ್ನು ಎನ್‌ಎಸ್‌ಯುಐ ಅಲ್ಲಗಳೆದಿದೆ. “ಎಬಿವಿಪಿ ಉಪಾಧ್ಯಕ್ಷ ಅಭಿ ದಹಿಯಾ ಹಾಗೂ ಅಧ್ಯಕ್ಷ ತುಷಾರ್‌ ದೇಢಾ ಅವರು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂಬ ಸಂಗತಿಯನ್ನು ಎನ್‌ಎಸ್‌ಯುಐ ಬಯಲು ಮಾಡಿದೆ. ಇದರ ಸೇಡಿನ ಭಾಗವಾಗಿಯೇ ಎಬಿವಿಪಿ ಕಾರ್ಯಕರ್ತರು ವಿವಿಯಲ್ಲಿರುವ ಎನ್‌ಎಸ್‌ಯುಐ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎನ್‌ಎಸ್‌ಯುಐ ತಿಳಿಸಿದೆ. ಅಭಿ ದಹಿಯಾ ಅವರನ್ನು ಡಿಯುಎಸ್‌ಯು ಉಪಾಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಇದರ ಭಾಗವಾಗಿಯೇ, ಗಲಾಟೆ ಶುರುವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JNU Election: ದಿಲ್ಲಿಯ ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಎಡಪಕ್ಷಗಳ ಕ್ಲೀನ್‌ ಸ್ವೀಪ್

Continue Reading
Advertisement
Talguppa Honnavar Railway Line
ಉತ್ತರ ಕನ್ನಡ2 mins ago

Talguppa Honnavar Railway Line: ಹೊನ್ನಾವರ-ತಾಳಗುಪ್ಪ ರೈಲ್ವೆ ಮಾರ್ಗ; ಮಂಕಿಯ ಬಿಜೆಪಿ ಮುಖಂಡರಿಂದ ಸಂಸದ ಕಾಗೇರಿಯವರಿಗೆ ಮನವಿ

road accident chitradurga news
ಕ್ರೈಂ22 mins ago

Road Accident: ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

Shikakai For Hair
ಆರೋಗ್ಯ33 mins ago

Shikakai For Hair: ಕೂದಲಿನ ಪೋಷಣೆಗೆ ಶ್ಯಾಂಪು ಒಳ್ಳೆಯದೋ ಸೀಗೆಕಾಯಿ ಒಳ್ಳೆಯದೋ?

Terrorist Attack
ಪ್ರಮುಖ ಸುದ್ದಿ55 mins ago

Terrorist Attack: ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದ ಸೇನೆ

karnataka weather Forecast
ಮಳೆ1 hour ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Noodles Side Effect
ಆರೋಗ್ಯ2 hours ago

Noodles Side Effect: ಇನ್‌ಸ್ಟಂಟ್‌ ನೂಡಲ್‌‌ಗಳನ್ನು ಸೇವಿಸಿದರೆ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳದಿರಿ

NSUI
ದೇಶ7 hours ago

NSUI: ದೆಹಲಿ ವಿವಿಯಲ್ಲಿ ಗಲಾಟೆ ಮಾಡಿ, ರಾಮನ ಮೂರ್ತಿ ಒಡೆದ ಕಾಂಗ್ರೆಸ್‌ ವಿದ್ಯಾರ್ಥಿ ಘಟಕದ ಸದಸ್ಯರು; ಭಾರಿ ವಿವಾದ!

Yashasvi Jaiswal
ಕ್ರಿಕೆಟ್8 hours ago

Yashasvi Jaiswal : ಇನಿಂಗ್ಸ್​​ನ ಮೊದಲ ಎಸೆತಕ್ಕ 13 ರನ್​, ವಿನೂತನ ದಾಖಲೆ ಬರೆದ ಯಶಸ್ವಿ ಜೈಸ್ವಾಲ್​

MUDA Scam
ಕರ್ನಾಟಕ8 hours ago

MUDA Scam: ಮುಡಾ ಕೇಸ್ ತನಿಖೆಗೆ ಏಕಸದಸ್ಯ ಆಯೋಗ ರಚಿಸಿದ ರಾಜ್ಯ ಸರ್ಕಾರ; ಅಧಿವೇಶನಕ್ಕೂ ಮುನ್ನವೇ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಯತ್ನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ15 hours ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ19 hours ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ6 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

ಟ್ರೆಂಡಿಂಗ್‌