ಚಂದ್ರನು ಸೋಮವಾರವೂ ಕನ್ಯರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡವು ಹೆಚ್ಚಲಿದೆ. ವೃಷಭ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ. ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (29-01-2024)
ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲದಿಂದ ಬಯಸಿದ ಫಲಿತಾಂಶಗಳು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡವು ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕವಾಗಿ ಸುಧಾರಣೆ ಆಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ. ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಕಟಕ: ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಆಗುವ ಸಾಧ್ಯತೆ ಇದೆ, ಎಚ್ಚರವಹಿಸಿ. ಹಿರಿಯರ ಮಾರ್ಗದರ್ಶನ ಪಡೆಯಿರಿ. ಅತಿಯಾದ ಆತ್ಮವಿಶ್ವಾಸದ ಭರದಲ್ಲಿ ದುಡುಕುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ ಉಂಟಾಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯುನ್ನಂಟಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸವಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಷು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗ್ಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com