Site icon Vistara News

Dina Bhavishya: ಈ ರಾಶಿಯವರಿಗೆ ಇಂದು ವಾಹನ ಕಂಟಕ; ಪ್ರಯಾಣ ಮುಂದೂಡಿ

Dina Bhavishya

ಚಂದ್ರನು ಬುಧವಾರವು ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕರ್ಕಾಟಕ, ಕನ್ಯಾ, ವೃಶ್ಚಿಕ, ಧನಸ್ಸು ಹಾಗೂ ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರಿಗೆ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಸಿಂಹ ರಾಶಿಯವರಿಗೆ ಕಳೆದ ದಿನಗಳಿಗೆ ಹೋಲಿಸಿದರೆ ಇಂದು ಆರ್ಥಿಕವಾಗಿ ಉತ್ತಮವಾಗಿರಲಿದೆ. ನೀವು ಹೆಚ್ಚಿನ ಹಣವನ್ನು ಪಡೆಯುತ್ತೀರಿ. ತುಲಾ ರಾಶಿಯವರಿಗೆ ಕೆಲವು ಅನುಮಾನಗಳು ಮನೆಯ ವಾತಾವರಣವನ್ನು ವಿಷಮ ಸ್ಥಿತಿಗೆ ತಳ್ಳುವ ಸಾಧ್ಯತೆ ಇದೆ. ಆದಷ್ಟು ಸಮಾಧಾನ ಚಿತ್ತರಾಗಿ ಆಲೋಚಿಸಿ. ಮಕರ ರಾಶಿಯವರು ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ನೀವು ಮಾನಸಿಕ ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಗೊಂದಲ ಮತ್ತು ಹತಾಶೆಯನ್ನು ತಡೆಗಟ್ಟಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (03-1-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶೀರ್ಷ ಮಾಸ, ಕೃಷ್ಣ ಪಕ್ಷ
ತಿಥಿ: ಸಪ್ತಮಿ 19:47 ವಾರ: ಬುಧವಾರ
ನಕ್ಷತ್ರ: ಉತ್ತರ ಪಾಲ್ಗುಣಿ 14:45 ಯೋಗ: ಶೋಭನ 30:19
ಕರಣ: ಭವ 19:47

ಸೂರ್ಯೋದಯ : 06:42  ಸೂರ್ಯಾಸ್ತ : 06:05

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಇಂದು ನೀವು ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಪ್ರಯಾಣ ಮಾಡುವ ಸಂಭವವಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯಿಂದ ಸಲಹೆ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಭರವಸೆಯಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಇದಕ್ಕೆ ಪೂರಕವೆಂಬಂತೆ ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡವಿದ್ದರೂ ಸಮರ್ಥವಾಗಿ ನಿಭಾಯಿಸುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಭರವಸೆಯ ಹೊಸ ಬೆಳಕು ನಿಮ್ಮ ಬಾಳಿನಲ್ಲಿ ಮೂಡಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಸಿಗುವುದು. ಉದ್ಯೋಗಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

ಕಟಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗಲಿದೆ. ಹೀಗಾಗಿ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ದೈಹಿಕವಾಗಿ ಆಯಾಸವಾಗುವ ಸಾಧ್ಯತೆ ಇದೆ. ಆದಷ್ಟು ಸೃಜನಾತ್ಮಕವಾಗಿ ಕಾರ್ಯವನ್ನು ಮಾಡುವುದು ಒಳಿತು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ಚಾಲನೆ ಮಾಡುವಾಗ ಆದಷ್ಟು ಎಚ್ಚರ ವಹಿಸಿ. ಕಳೆದ ದಿನಗಳಿಗೆ ಹೋಲಿಸಿದರೆ ಇಂದು ಆರ್ಥಿಕವಾಗಿ ಉತ್ತಮವಾಗಿರಲಿದೆ. ನೀವು ಹೆಚ್ಚಿನ ಹಣವನ್ನು ಪಡೆಯುತ್ತೀರಿ. ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅಥವಾ ಆಧ್ಯಾತ್ಮಿಕ ವ್ಯಕ್ತಿಗಳ ಸಂಪರ್ಕದಿಂದಾಗಿ ಮನಸ್ಸಿಗೆ ಸಮಾಧಾನವಾಗಲಿದೆ. ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಎಲ್ಲಿಲ್ಲದ ಪ್ರೋತ್ಸಾಹ, ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಕೆಲವು ಘಟನೆಗಳಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ಹಣಕಾಸು ಅಡಚಣೆಗಳು ನಿವಾರಣೆ ಆಗಲಿವೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಕೆಲವು ಅನುಮಾನಗಳು ಮನೆಯ ವಾತಾವರಣವನ್ನು ವಿಷಮ ಸ್ಥಿತಿಗೆ ತಳ್ಳುವ ಸಾಧ್ಯತೆ ಇದೆ. ಆದಷ್ಟು ಸಮಾಧಾನ ಚಿತ್ತರಾಗಿ ಆಲೋಚಿಸಿ. ಆರೋಗ್ಯ ಪರಿಪೂರ್ಣವಾಗಿರವಿದೆ. ಅನಾವಶ್ಯಕ ಖರ್ಚುಗಳಿಂದಾಗಿ ಮನಸ್ಸಿನ ಹತೋಟಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಅನಿವಾರ್ಯ ಕಾರಣಗಳಿಂದ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಮುಜುಗರ ಉಂಟುಮಾಡುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಬಹಳ ದಿನಗಳಿಂದ ದ್ವೇಷಿಸುತ್ತಿರುವ ವ್ಯಕ್ತಿಗಳು ಇಂದು ನಿಮ್ಮ ಸಂಪರ್ಕಕ್ಕೆ ಬರಬಹುದು. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ನೀವು ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ, ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಇಂದು ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ನೀವು ಮಾನಸಿಕ ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಗೊಂದಲ ಮತ್ತು ಹತಾಶೆಯನ್ನು ತಡೆಗಟ್ಟಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ದೈಹಿಕವಾಗಿ ಮತ್ತು ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಉದ್ಭವಿಸುವ ವಿರೋಧಕ್ಕೆ ವಿವೇಚನಾಯುಕ್ತರೂ ಮತ್ತು ಧೈರ್ಯಶಾಲಿಗಳೂ ಆಗಿರಿ, ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ.
ಅದೃಷ್ಟ ಸಂಖ್ಯೆ: 7

ಮೀನ: ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನವಾಗಲಿದೆ. ದೀರ್ಘಕಾಲ ಬಾಕಿಯಿದ್ದ ಕೆಲಸಗಳು ಪೂರ್ಣವಾಗಲಿವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವ ಸಾಧ್ಯತೆ ಇದೆ. ಇತರರ ಹಸ್ತಕ್ಷೇಪ ವ್ಯಾಜ್ಯವುಂಟು ಮಾಡುತ್ತದೆ. ಯಾವುದೇ ಪಾಲುದಾರಿಕೆಗೆ ಒಪ್ಪುವ ಮೊದಲು ಆಲೋಚಿಸಿ ಹೆಜ್ಜೆ ಹಾಕಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿರೀಕ್ಷಿತ ಲಾಭ ದೊರೆಯಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version