ಚಂದ್ರನು ಶನಿವಾರ ವೃಶ್ಚಿಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು ಹಾಗೂ ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ಕನ್ಯಾ ರಾಶಿಯವರು ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (06-01-2024)
ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟ ಸಂಖ್ಯೆ: 3
ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟು ಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ ಇದೆ ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡವನ್ನು ಈ ಮೂಲಕ ಹೊರ ಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯದಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಚುರುಕುತನದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡವನ್ನು ಉಂಟು ಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದಿಸಬಹುದು, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com