Site icon Vistara News

Dina Bhavishya : ಗುರುಪೂರ್ಣಿಮೆಯ ಇಂದು ಈ ರಾಶಿಯವರ ಬಾಳಲ್ಲಿ ಭರವಸೆಯ ಹೊಸ ಬೆಳಕು!

Dina Bhavishya

ವಾರದ ಮೊದಲ ದಿನವಾದ ಇಂದು ವಿಶೇಷವಾದ ದಿನ. ಪೂರ್ಣಿಮೆ ತಿಥಿಯ ಈ ದಿನವನ್ನು ಗುರುಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಇಂದು ಮಹರ್ಷಿ ವ್ಯಾಸರ ಜನ್ಮದಿನವೂ ಹೌದು. ಹೀಗಾಗಿ ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಇಂದು ಮಿಥುನ, ಕಟಕ, ತುಲಾ, ಧನು, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲವಿದೆ. ಈ ವಿಶೇಷವಾದ ದಿನ ಒಂಬತ್ತು ರಾಶಿಯವರು ಕೌಟುಂಬಿಕವಾಗಿ ಶುಭ ಫಲ ಪಡೆಯಲಿದ್ದಾರೆ. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (kannada dina bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (03-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ

ತಿಥಿ: ಹುಣ್ಣಿಮೆ 17:07 ವಾರ: ಸೋಮವಾರ
ನಕ್ಷತ್ರ: ಮೂಲ 11:00 ಯೋಗ: ಬ್ರಹ್ಮ 15:43
ಕರಣ: ವಿಷ್ಟಿ (ಭದ್ರ) 06:46
ಅಮೃತಕಾಲ: ಬೆಳಗ್ಗೆ 05 ಗಂಟೆ 14 ನಿಮಿಷದಿಂದ ಬೆಳಗ್ಗೆ 06 ಗಂಟೆ 41 ನಿಮಿಷದವರೆಗೆ.
ಇಂದಿನ ವಿಶೇಷ: ಗುರು ಪೂರ್ಣಿಮೆ, ವ್ಯಾಸ ಪೂಜೆ, ಚಾತುರ್ಮಾಸ್ಯ ವ್ರತ ಆರಂಭ

ಸೂರ್ಯೋದಯ : 05:58 ಸೂರ್ಯಾಸ್ತ : 06:50

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (dina bhavishya in kannada)

ಮೇಷ: ಮಾನಸಿಕವಾಗಿ ಇಂದು ನೀವು ಬಳಲುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಪ್ರಯಾಣ ಮಾಡುವ ಸಂಭವ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯಿಂದ ಸಲಹೆ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಭರವಸೆ ಇಟ್ಟು ಮಾಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಮಾಡಿದ ಹೂಡಿಕೆ ನಿಮ್ಮ ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಇದಕ್ಕೆ ಪೂರಕವೆಂಬಂತೆ ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಒತ್ತಡವಿದ್ದರೂ ಸಮರ್ಥವಾಗಿ ನಿಭಾಯಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಭರವಸೆಯ ಹೊಸ ಬೆಳಕು ನಿಮ್ಮ ಬಾಳಿನಲ್ಲಿ ಮೂಡಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ದೈಹಿಕವಾಗಿ ಆಯಾಸವಾಗುವ ಸಾಧ್ಯತೆ. ಆದಷ್ಟು ಸೃಜನಾತ್ಮಕ ಕಾರ್ಯಗಳನ್ನು ಮಾಡುವುದು ಒಳಿತು. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ಚಾಲನೆ ಮಾಡುವಾಗ ಆದಷ್ಟು ಎಚ್ಚರ ವಹಿಸಿ. ಕಳೆದ ದಿನಗಳಿಗೆ ಹೋಲಿಸಿದರೆ ಇಂದು ಆರ್ಥಿಕ ಸ್ಥಿತಿ ಉತ್ತಮವಾಗಲಿದೆ ಮತ್ತು ನೀವು ಹೆಚ್ಚಿನ ಹಣದ ಹರಿವನ್ನು ನೋಡುತ್ತೀರಿ. ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಅಥವಾ ಆಧ್ಯಾತ್ಮಿಕ ವ್ಯಕ್ತಿಗಳ ಸಂಪರ್ಕದಿಂದಾಗಿ ಮನಸ್ಸಿಗೆ ಸಮಾಧಾನ. ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಎಲ್ಲಿಲ್ಲದ ಪ್ರೋತ್ಸಾಹ, ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಕೆಲವು ಘಟನೆಗಳಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುವ ಸಾಧ್ಯತೆ. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ಹಣಕಾಸು ಆಡಚಣೆಗಳು ನಿವಾರಣೆ ಆಗಲಿವೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಕೆಲವು ಅನುಮಾನಗಳು ಮನೆಯ ವಾತಾವರಣವನ್ನು ವಿಷಮ ಸ್ಥಿತಿಗೆ ತಳ್ಳುವ ಸಾಧ್ಯತೆ. ಆದಷ್ಟು ಸಮಾಧಾನ ಚಿತ್ತರಾಗಿ ಆಲೋಚಿಸಿ ಪ್ರತಿಕ್ರಿಯಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚುಗಳಿಂದಾಗಿ ಮನಸ್ಸಿನ ಹತೋಟಿಯನ್ನು ಕಳೆದುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಅನಿವಾರ್ಯ ಕಾರಣಗಳಿಂದ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ಬಹಳ ದಿನಗಳಿಂದ ದ್ವೇಷಿಸುತ್ತಿರುವ ವ್ಯಕ್ತಿಗಳು ಇಂದು ನಿಮ್ಮ ಸಂಪರ್ಕಕ್ಕೆ ಬರಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇಂದಿನ ಎಂದರೆ ಸೋಮವಾರದ ಮಹತ್ವ ತಿಳಿಯಲು ಈ ವಿಡಿಯೋ ನೋಡಿ.

ಧನಸ್ಸು: ಆರ್ಥಿಕ ಸ್ಥಿತಿಯು ಬಲಗೊಳ್ಳುವ ಎಲ್ಲ ಸಾಧ್ಯತೆಗಳಿವೆ. ನೀವು ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ, ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳು ಇಂದು ಭರವಸೆಯ ಹೊಸ ಅವಕಾಶಗಳನ್ನು ಪಡೆಯಲಿದ್ದಾರೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ಹಾಳುಮಾಡಬಹುದು. ನೀವು ಮಾನಸಿಕ ನೆಮ್ಮದಿಯನ್ನು ಕಾಯ್ದುಕೊಳ್ಳಲು ಗೊಂದಲ ಮತ್ತು ನಿರಾಸೆಗಳಿಂದ ಮುಕ್ತರಾಗಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ದೈಹಿಕವಾಗಿ ಮತ್ತು ಆರ್ಥಿಕವಾಗಿ ಬಳಲುವ ಸಾಧ್ಯತೆ. ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಉದ್ಭವಿಸುವ ವಿರೋಧಕ್ಕೆ ವಿವೇಚನಾಯುಕ್ತರೂ ಮತ್ತು ಧೈರ್ಯಶಾಲಿಗಳೂ ಆಗಿರಿ. ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

ಮೀನ: ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿ ಹೆಚ್ಚಾಗಲಿದೆ. ದೀರ್ಘ ಕಾಲ ಬಾಕಿಯಿದ್ದ ಕೆಲಸಗಳು ಪೂರ್ಣವಾಗಲಿವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವ ಸಾಧ್ಯತೆ. ಇತರರ ಹಸ್ತಕ್ಷೇಪ ವ್ಯಾಜ್ಯವನ್ನುಂಟುಮಾಡುತ್ತದೆ. ಯಾವುದೇ ಪಾಲುದಾರಿಕೆಗೆ ಒಪ್ಪುವ ಮೊದಲು ಆಲೋಚಿಸಿ ಹೆಜ್ಜೆ ಹಾಕಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿರೀಕ್ಷಿತ ಲಾಭ ದೊರೆಯಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version