Site icon Vistara News

Dina Bhavishya : ಸಂಕಷ್ಟ ಚುತುರ್ಥಿಯ ಈ ದಿನ ಈ ರಾಶಿಯವರನ್ನು ಸಾಂಕ್ರಮಿಕ ರೋಗ ಕಾಡಬಹುದು!

Dina Bhavishya in Kannada

ಸಂಕಷ್ಟ ಚತುರ್ಥಿಯ ಈ ದಿನ ಚಂದ್ರನು ಮಧ್ಯಾಹ್ನ 01:32 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಹೀಗಾಗಿ ಮಧ್ಯಾಹ್ನದ ನಂತರ ಮೇಷ, ವೃಷಭ, ಸಿಂಹ, ಕನ್ಯಾ, ಧನು ಮತ್ತು ಕುಂಭ ರಾಶಿಯವರು ಚಂದ್ರನ ಬಲವನ್ನು ಪಡೆಯಲಿದ್ದಾರೆ. ವೃಶ್ಚಿಕ ರಾಶಿಯವರಿಗೆ ಇಂದು ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಕನ್ಯಾ ರಾಶಿಯ ಉದ್ಯೋಗಿಗಳು ಯಶಸ್ಸನ್ನು ಪಡೆಯುತ್ತಾರೆ. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (06-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ತದಿಗೆ 06:29 ವಾರ: ಗುರುವಾರ
ನಕ್ಷತ್ರ: ಧನಿಷ್ಠ 24:24 ಯೋಗ: ಪ್ರೀತಿ 23:58
ಕರಣ: ವಿಷ್ಟಿ (ಭದ್ರ) 06:29 ಇಂದಿನ ವಿಶೇಷ: ಸಂಕಷ್ಟ ಚತುರ್ಥಿ (ಚಂದ್ರೋದಯ ರಾತ್ರಿ 9.53 ಗಂಟೆಗೆ).
ಅಮೃತಕಾಲ: ಮಧ್ಯಾಹ್ನ 03 ಗಂಟೆ 06 ನಿಮಿಷದಿಂದ 04 ಗಂಟೆ 32 ನಿಮಿಷದವರೆಗೆ.

ಸೂರ್ಯೋದಯ : 05:58 ಸೂರ್ಯಾಸ್ತ : 06:50

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ : ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ : ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತರಿಗೆ ನೀವಿಂದು ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಮಾಡಿಕೊಡಬೇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ನಿಮಗೆ ತಿಳಿಯದೇ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಉದ್ಯೋಗಿಗಳಿಗೆ ಶುಭ ಫಲ. ಕುಟಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮಿಥುನ: ಇಂದು ಆರೋಗ್ಯ ಪರಿಪೂರ್ಣ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಸಕರಾತ್ಮಕ ಆಲೋಚನೆಗಳು ಪುಷ್ಟಿ ನೀಡುತ್ತವೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮ ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡವನ್ನು ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ. ಕೆಲಸ ಕಾರ್ಯಗಳಲ್ಲಿ ಮಂದಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಗುರುವಾರದ ಮಹತ್ವವವನ್ನು ತಿಳಿಸುವ ಈ ವಿಡಿಯೋವನ್ನು ನೋಡಿ.

ಧನಸ್ಸು: ಚುರುಕು ತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಆರೋಗ್ಯ ಪರಿಪೂರ್ಣ.
ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮಕರ: ಇಂದು ನೀವು ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಈ ಬಗ್ಗೆ ಕಾಳಜಿ ಇರಲಿ. ಸಾಂಕ್ರಮಿಕ ರೋಗ ನಿಮ್ಮನ್ನು ತಲುಪಬಹುದು, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ : Shukra Gochar 2023 : ಜು.7 ರಂದು ಸಿಂಹ ರಾಶಿಗೆ ಶುಕ್ರನ ಸಂಚಾರ; ಈ ಮೂರು ರಾಶಿಯವರಿಗೆ ಶುಭ ಫಲ

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version