Dina Bhavishya read your daily horoscope predictions for july 07 2023Dina Bhavishya : ಸಿಂಹ ರಾಶಿಗೆ ಶುಕ್ರನ ಸಂಚಾರ; ಹೀಗಿದೆ ದ್ವಾದಶ ರಾಶಿಗಳ ಇಂದಿನ ಫಲ! Vistara News
Connect with us

ಪ್ರಮುಖ ಸುದ್ದಿ

Dina Bhavishya : ಸಿಂಹ ರಾಶಿಗೆ ಶುಕ್ರನ ಸಂಚಾರ; ಹೀಗಿದೆ ದ್ವಾದಶ ರಾಶಿಗಳ ಇಂದಿನ ಫಲ!

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

shukra gochar horoscope today
Koo

ಇಂದು ಆಷಾಢ ಶುಕ್ರವಾರ. ಲಕ್ಷ್ಮೀ ಪೂಜೆಗೆ ಅತ್ಯಂತ ಶ್ರೇಷ್ಠವಾದ ದಿನ. ಇಂದು ಶುಕ್ರನು ಸೂರ್ಯನ ಆಧಿಪತ್ಯ ಹೊಂದಿರುವ ಸಿಂಹ ರಾಶಿಯನ್ನು ಬೆಳಗ್ಗೆ 04:28 ಕ್ಕೆ (Shukra Gochar 2023) ಪ್ರವೇಶಿಸುತ್ತಾನೆ. ಈ ಸಂಚಾರದಿಂದ ಮೇಷ, ಸಿಂಹ, ಧನು ರಾಶಿಯವರು ಉತ್ತಮ ಫಲ ಪಡೆಯಲಿದ್ದಾರೆ. ಗುರುವಾರ ಮೀನ ರಾಶಿ ಪ್ರವೇಶಿಸಿರುವ ಚಂದ್ರನು ಇಂದೂ ಕೂಡ ಅಲ್ಲಿಯೇ ಇರಲಿದ್ದಾರೆ. ಹೀಗಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನು ಮತ್ತು ಕುಂಭ ರಾಶಿಯವರು ಚಂದ್ರನ ಬಲವನ್ನು ಪಡೆಯಲಿದ್ದಾರೆ. ವೃಷಭ ರಾಶಿಯವರು ಕೌಟುಂಬಿಕವಾಗಿ ಶುಭ ಫಲವನ್ನು ಇಂದು ಪಡೆದರೆ, ಕನ್ಯಾ ರಾಶಿಯವರು ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯಲಿದ್ದಾರೆ. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (07-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ಪಂಚಮಿ 24:16 ವಾರ: ಶುಕ್ರವಾರ
ನಕ್ಷತ್ರ: ಶತತಾರ 22:14 ಯೋಗ: ಆಯುಷ್ಮಾನ್ 20:28
ಕರಣ: ಕೌಲವ 13:41 ಇಂದಿನ ವಿಶೇಷ: ಆಷಾಢ ಶುಕ್ರವಾರ, ಶ್ರೀ ಟೀಕಾಚಾರ್ಯರ ಆರಾಧನೆ.
ಅಮೃತಕಾಲ: ಮಧ್ಯಾಹ್ನ 03 ಗಂಟೆ 43 ನಿಮಿಷದಿಂದ 05 ಗಂಟೆ 10 ನಿಮಿಷದವರೆಗೆ.

ಸೂರ್ಯೋದಯ : 05:59 ಸೂರ್ಯಾಸ್ತ : 06:50

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ನಿಮ್ಮ ಆರೋಗ್ಯ ಮಧ್ಯಮ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವವು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ನೀವಿಂದು ಬಳಲುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರಮಾಡುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ, ನಿಮ್ಮ ಭಾವನೆಗಳನ್ನು ನಿಯಂತ್ರಿಸಿಕೊಳ್ಳಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ. ಇಂದು ನಿಮ್ಮ ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ. ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಈ ನಾಲ್ಕು ರಾಶಿಯವರಿಗೆ ಹೆಚ್ಚಿನ ಹಾನಿ ಇದೆ. ಏಕೆ, ಯಾವ ರಾಶಿಯವರಿಗೆ ಎಂಬುದನ್ನು ತಿಳಿಯಲು ವಿಡಿಯೋ ನೋಡಿ.
Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಡೀರ್ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

ಇದನ್ನೂ ಓದಿ : Shukra Gochar 2023 : ಜು.7 ರಂದು ಸಿಂಹ ರಾಶಿಗೆ ಶುಕ್ರನ ಸಂಚಾರ; ಈ ಮೂರು ರಾಶಿಯವರಿಗೆ ಶುಭ ಫಲ

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Rowdism in Ramanagara : ರಾಮನಗರದ ಒಂದು ಹಾಲು ಉತ್ಪಾದಕರ ಸಂಘಕ್ಕೆ ಚುನಾವಣೆ ನಡೆಸಬಾರದು ಎಂದು ಆಗ್ರಹಿಸಿದ ರೌಡಿಗಳ ಗ್ಯಾಂಗ್‌ ಚುನಾವಣಾ ಅಧಿಕಾರಿಗಳ ಮೇಲೆಯೇ ದಾಳಿ ನಡೆಸಿ ಬ್ಯಾಲೆಟ್‌ ಪೇಪರ್‌ ಎತ್ತಿಕೊಂಡು ಹೋಗಿದೆ. ಆರೋಪಿಗಳನ್ನು ಗುರುತಿಸಲಾಗಿದೆ.

VISTARANEWS.COM


on

Edited by

Election officers attacked in Ramanagara
ದಾಳಿಗೆ ಒಳಗಾದ ಚುನಾವಣಾಧಿಕಾರಿ ಉಮೇಶ್‌ ಮತ್ತು ಉಷಾ
Koo

ಬೆಂಗಳೂರು: ಹಾಲು ಉತ್ಪಾದಕರ ಸಂಘದ (Milk Producers Union) ನಿರ್ದೇಶಕರ ಆಯ್ಕೆಗಾಗಿ (Election of directors) ಬಂದ ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ (Attack on Election officers) ಅವರ ಕೈಯಲ್ಲಿದ್ದ ಬ್ಯಾಲೆಟ್ ಪ್ಯಾಪರ್ (Ballet Paper), ಲ್ಯಾಪ್‌ಟಾಪ್, ಮೊಬೈಲ್ ಮತ್ತು ಇತರ ಸಾಮಗ್ರಿ ದರೋಡೆ ಮಾಡಿದ ಭಯಾನಕ ಘಟನೆಯೊಂದು ರಾಮನಗರ ಜಿಲ್ಲೆಯ (Ramanagara News) ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಇಲ್ಲಿನ ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ನಿರ್ದೇಶಕ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯುವುದಿತ್ತು. ಚುನಾವಣಾಧಿಕಾರಿ ಉಮೇಶ್ ಮತ್ತು ಉಷಾ ಅವರು ಹಾಲು ಉತ್ಪಾದಕರ ಸಂಘದತ್ತ ಹೋಗುವಾಗ ಅವರ ಮೇಲೆ ದಾಳಿ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಮಾಡಿದ್ದು ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಾಗಡಿ-ಕುಣಿಗಲ್‌ ರಸ್ತೆಯಲ್ಲಿ ಈ ದಾಳಿ ನಡೆದಿದೆ.

ಹಾಡುಹಗಲೇ ಭಯಾನಕ ಕೃತ್ಯ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ಎಲ್ಲವೂ ಸಿದ್ಧತೆ ನಡೆದಿತ್ತು. ಆದರೆ, ಪಂಚಾಯಿತಿ ಅಧ್ಯಕ್ಷ ಬಲರಾಮ್‌ ಮತ್ತು ಇತರ ಚುನಾವಣೆ ನಡೆಸಬಾರದು ಎಂದು ಪಟ್ಟು ಹಿಡಿದಿದ್ದರು. ಆದರೆ, ದಿನಾಂಕ ನಿಗದಿಯಾಗಿ ಎಲ್ಲ ವ್ಯವಸ್ಥೆಗಳೂ ನಡೆದಿದ್ದವು.

ಉಮೇಶ್‌ ಮತ್ತು ಉಷಾ ಎಂಬ ಇಬ್ಬರು ಚುನಾವಣಾ ಅಧಿಕಾರಿಗಳಾಗಿ ನಿಯುಕ್ತರಾಗಿದ್ದರು. ಬುಧವಾರ ಅವರು ಕಾರಿನಲ್ಲಿ ಹಾಲು ಉತ್ಪಾದಕರ ಸಂಘದತ್ತ ಸಾಗುತ್ತಿದ್ದಂತೆಯೇ ಪುಂಡರ ತಂಡವೊಂದು ಅವರ ಕಾರನ್ನು ಅಡ್ಡಗಟ್ಟಿತ್ತು. ಮಾರಕಾಸ್ತ್ರಗಳನ್ನು ತೋರಿಸಿ ಕಾರಿನಿಂದ ಇಳಿಸಿತು.

Attack on Election officers in Magadi
ಚುನಾವಣಾಧಿಕಾರಿ ಮೇಲೆ ಕಾರು ಹಾಯಿಸಿದ ದೃಶ್ಯ ಮೊಬೈಲ್‌ನಲ್ಲಿ ದಾಖಲಾಗಿದೆ

ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರನ್ನು ಕೆಳಗೆ ಇಳಿಸಿದ ದುಷ್ಟರು ಕಾರಿನಲ್ಲಿದ್ದ ಬ್ಯಾಲೆಟ್‌ ಪೇಪರ್‌ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಿತ್ತುಕೊಂಡಿತು. ಉಮೇಶ್‌ ಅವರು ತಮ್ಮ ಕೈಯಿಂದ ಕಿತ್ತುಕೊಂಡ ಪೇಪರ್‌ಗಳನ್ನು ಕಸಿದುಕೊಳ್ಳಲು ಅವರನ್ನು ಬೆನ್ನಟ್ಟಿದರು. ಆದರೆ ದುಷ್ಕರ್ಮಿಗಳು ತಾವು ಬಂದಿದ್ದ ಸ್ಯಾಂಟ್ರೋ ಕಾರಿನಲ್ಲಿ ಕುಳಿತು ಪರಾರಿಯಾದರು. ಈ ಹಂತದಲ್ಲಿ ಕೆಲವರು ಕಾರನ್ನು ನಿಲ್ಲಿಸಲು ಯತ್ನಿಸಿದರು. ಆದರೆ, ದುಷ್ಕರ್ಮಿಗಳು ಅವರನ್ನು ತಳ್ಳಿ ಮುಂದಕ್ಕೆ ಸಾಗಿದರು. ಈ ಹಂತದಲ್ಲಿ ಕಾರಿನ ಮುಂಭಾಗದಲ್ಲಿದ್ದ ಉಷಾ ಅವರ ಮೇಲೆಯೇ ಕಾರು ನುಗ್ಗಿತ್ತು. ಕಾರು ಡಿಕ್ಕಿಯಾಗಿ ಮುಗ್ಗರಿಸಿ ಬಿದ್ದ ಅವರು ರಸ್ತೆಗೆ ಉರುಳಿದರು.

ಮಾಜಿ ಅಧ್ಯಕ್ಷ ಬಲರಾಮ್‌ ಮತ್ತು ಟೀಮ್‌, ಕಾರಿಗಾಗಿ ಶೋಧ

ಇದು ಮಾಜಿ ಅಧ್ಯಕ್ಷ ಬಲರಾಂ ಮತ್ತು ಅವನ ಸಹಚರರ ಕೃತ್ಯ ಎಂದು ಪೊಲೀಸರಿಗೆ ತಿಳಿದುಬಂದಿದೆ. ಸ್ಥಳೀಯರು ಕೂಡಾ ಇದನ್ನು ದೃಢೀಕರಿಸಿದ್ದಾರೆ.

Attack on Election officers
ಬಲರಾಮ ಮತ್ತು ಅವನ ಗ್ಯಾಂಗ್‌

ಹುಲ್ಲೇನಹಳ್ಳಿ ನಾಲ್ಕು ವ್ಯಕ್ತಿಗಳಿಂದ ಕೃತ್ಯ ನಡೆಸಿದೆ. ಗ್ರಾಪಂ ಮಾಜಿ ಅಧ್ಯಕ್ಷ ಬಲರಾಮ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೇಮಂತ್, ಸೀನು,‌ ದಾಸೇಗೌಡ, ಮತ್ತೊಬ್ಬನಿಂದ ಈ ಕೃತ್ಯ ನಡೆದಿದೆ ಎಂದು ಎಸ್‌ಪಿ ಕಾರ್ತಿಕ್‌ ರೆಡ್ಡಿ ತಿಳಿಸಿದ್ದಾರೆ. ಆರೋಪಿಗಳು ಮತ್ತು ಸ್ಯಾಂಟ್ರೋ ಕಾರು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಮಾಜಿ ಶಾಸಕ ಮಂಜು ಕುಮ್ಮಕ್ಕು ಆರೋಪ

ಈ ನಡುವೆ, ದರೋಡೆಗೆ ಜೆಡಿಎಸ್ ಮಾಜಿ ಶಾಸಕ ಎ ಮಂಜು ಕುಮ್ಮಕ್ಕು ನೀಡಿದ್ದಾರೆ. ಮಾಜಿ ಅಧ್ಯಕ್ಷ ಬಲರಾಮ್ ತನ್ನ ಸಹಚರರ ಮೂಲಕ ಈ ಕೃತ್ಯ ನಡೆಸಿದ್ದಾನೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

23 ವರ್ಷದ ಬಳಿಕ ಚುನಾವಣೆ ನಡೆಯುತ್ತಿತ್ತು!

ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಾಕಾರ ಸಂಘದ ನಿರ್ದೇಶಕರ ಚುನಾವಣೆ 23 ವರ್ಷಗಳ ಬಳಿಕ ನಡೆಯುತ್ತಿದೆ. ಇಲ್ಲಿ ಚುನಾವಣೆ ನಡೆಯಬೇಕು ಎನ್ನುವುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹುಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಬೆಂಬಲಿಗರ ತಂಡವು ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಈ ಕೃತ್ಯವನ್ನು ಎಸಗಿದೆ ಎಂದು ಹೇಳಲಾಗುತ್ತಿದೆ.

Continue Reading

ಕರ್ನಾಟಕ

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

VISTARANEWS.COM


on

Edited by

Kolara MP Muniswamy complaint to governor of Karnataka
Koo

ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್‌ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.

ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ

ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ

ಎಸ್‌ಎನ್‌ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.

ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ

ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.

Continue Reading

South Cinema

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Oscars 2024: ನಿರ್ದೇಶಕ ಗಿರೀಶ್‌ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿತ್ತು.

VISTARANEWS.COM


on

Edited by

Malayalam Film 2018
Koo

ಬೆಂಗಳೂರು: ಟೊವಿನೋ ಥಾಮಸ್ ನಟಿಸಿರುವ 2018 ಮಲಯಾಳಂ ಸಿನಿಮಾ (Malayalam Film 2018) 2024ರ 96ನೇ ಆಸ್ಕರ್‌ ಅವಾರ್ಡ್ಸ್‌ಗೆ (Oscars 2024:) ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ. ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ ತೀರ್ಪುಗಾರರು ಸೆ.27ರಂದು ಅನೌನ್ಸ್‌ ಮಾಡಿದ್ದಾರೆ. ನಿರ್ದೇಶಕ ಗಿರೀಶ್‌ ಕಾಸರವಳ್ಳಿ ನೇತೃತ್ವದ 17 ಸದಸ್ಯರ ತೀರ್ಪುಗಾರರನ್ನು ಒಳಗೊಂಡಿರುವ ಆಯ್ಕೆ ಸಮಿತಿಗೆ ಭಾರತದಾದ್ಯಂತ ತೆರೆಕಂಡ 22 ಸಿನಿಮಾಗಳು ಅಧಿಕೃತ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದವು.

96ನೇ ಆಸ್ಕರ್‌ ಅವಾರ್ಡ್‌ ಎಬಿಸಿಯಲ್ಲಿ 2024ರ ಮಾರ್ಚ್ 10ರ ಭಾನುವಾರ ಓವೇಶನ್ ಹಾಲಿವುಡ್‌ನಲ್ಲಿರುವ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಿಂದ ವಿಶ್ವಾದ್ಯಂತ 200 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪ್ರಸಾರವಾಗಲಿದೆ ಎಂದು ವರದಿಯಾಗಿದೆ.

ಇದರಲ್ಲಿ “ಬಾಲಗಮ್‌”, “ದಿ ಕೇರಳ ಸ್ಟೋರಿ”, “ಜ್ವಿಗಾಟೊ” “ರಾಖಿ ಔರ್‌ ರಾಣಿ ಕಿ ಪ್ರೇಮ್‌ ಕಹಾನಿ”ಅನಂತ್‌ ಮಹದೇವನ್‌ ಅವರ ಸ್ಟೋರಿ ಟೇಲರ್‌ (ಹಿಂದಿ), ಮ್ಯೂಸಿಕ್‌ ಸ್ಕೂಲ್‌ (ಹಿಂದಿ), ಮಿಸಸ್‌ ಚಟರ್ಜಿ ವರ್ಸಸ್‌ ನಾರ್ವೆ (ಹಿಂದಿ), 12th ಫೇಲ್‌ (ಹಿಂದಿ) ವಿದುತಲೈ ಭಾಗ 1 (ತಮಿಳು), ಘೂಮರ್‌ (ಹಿಂದಿ), ಮತ್ತು ದಸರಾ (ತೆಲುಗು) ಸಿನಿಮಾಗಳು ಆಸ್ಕರ್‌ನ ಅಧಿಕೃತ ಪ್ರವೇಶ ಪಡೆಯವ ಸ್ಥಾನದಲ್ಲಿದ್ದವು. ಅಂತಿಮವಾಗಿ ಜೂಡ್​ ಆಂಥೊನಿ ಜೋಸೆಫ್​ ನಿರ್ದೇಶನದ ಈ ಸಿನಿಮಾ ಆಸ್ಕರ್‌ ಸ್ಪರ್ಧೆಗೆ ಅಧಿಕೃತವಾಗಿ ಆಯ್ಕೆಯಾಗಿದೆ.

ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್‌ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?

ಜೂಡ್​ ಆಂಥೊನಿ ಜೋಸೆಫ್​ ನಿರ್ದೇಶನದ ನೈಜ ಘಟನೆ ಆಧಾರಿತ ಮಲಯಾಳಂ `2018′ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಕೇರಳ ಚಲನಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾ ಆಗಿ ಹೊರಹೊಮ್ಮಿತ್ತು.

ಟೊವಿನೋ ಥಾಮಸ್​ ಜತೆ ಆಸಿಫ್​ ಅಲಿ, ಅಪರ್ಣಾ ಬಾಲಮುರಳಿ, ವಿನೀತ್​ ಶ್ರೀನಿವಾಸನ್​, ಕಲೈಯರಸನ್​, ಸುದೇಶ್​, ಅಜು ವರ್ಗೀಸ್​, ತನ್ವಿ ರಾಮ್​, ಗೌತಮಿ ನಾಯರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

2018 ಸಿನಿಮಾ ಕಥೆ ಏನು?

‘2018’ ಸಿನಿಮಾ 2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ಮಾಡಿದ ಸಿನಿಮಾ ಇದಾಗಿದೆ. ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳು ಇವೆ. ಅತೀ ಕಷ್ಟದ ಸಮಯದಲ್ಲೂ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೊ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆದಿತ್ತು. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾಗಿದ್ದ ಅತಿ ಭೀಕರ ಪ್ರವಾಹ ಅದಾಗಿತ್ತು.

Continue Reading

ಕರ್ನಾಟಕ

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

BJP JDS alliance : ಕೋಮುವಾದಿ ಬಿಜೆಪಿ ಜತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಗಿಬಿದ್ದಿದ್ದಾರೆ. ಅಲ್ಲದೆ, ಜಾತ್ಯತೀತತೆಯನ್ನು ನಾಶ ಮಾಡಿದ್ದೇ ಕಾಂಗ್ರೆಸ್‌ ಎಂದು ಕಿಡಿಕಾರಿದ್ದಾರೆ.

VISTARANEWS.COM


on

Edited by

HD Kumaraswamy Press meet vs congress government
Koo

ಬೆಂಗಳೂರು: ಎಲ್ಲೆಲ್ಲಿ ಸೆಕ್ಯುಲರಿಸಂ ಇತ್ತೋ ಅದನ್ನು ಕಾಂಗ್ರೆಸ್‌ನವರೇ ನಾಶ ಮಾಡಿದರು. ಅಧಿಕಾರಕ್ಕಾಗಿ ಏನನ್ನೆಲ್ಲ ಮಾಡಿದರು? ಫಾರೂಕ್ ಅಬ್ದುಲ್ಲ (Farooq Abdullah) ಅವರನ್ನು ಯಾವ ಸಿದ್ಧಾಂತ ಉಳಿಸುವುದಕ್ಕೆ ಅವರು ಸೋಲಿಸಿದರು? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (Former Prime Minister HD DeveGowda) ಇದನ್ನೆಲ್ಲ ನೋಡಿ, ನೋವು ಅನುಭವಿಸಿದ್ದಾರೆ. ಒಂದು ಸಮಾಜಕ್ಕೆ ಸಹಾಯ ಮಾಡಬೇಕು ಅಂತ ದೇವೇಗೌಡರು ಮಾಡಿದ ಹಾಗೆ ಯಾರೂ ಮಾಡಿಲ್ಲ. ಈಗಾಗಲೇ ಇಬ್ರಾಹಿಂ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಮುಸ್ಲಿಮರಿಗೆ ನಾನು ಗೌರವ ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಈ ಮೂಲಕ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS alliance) ಬಗ್ಗೆ ಪ್ರಸ್ತಾಪ ಮಾಡಿರುವ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಢ್ಯವಾಗಿದ್ದರೆ, ನನಗೆ ವೋಟ್ ಹಾಕುತ್ತಿರಲಿಲ್ಲ. ನಾನು ಯಾರಿಗೂ ಅಗೌರವಯುತವಾಗಿ ನಡೆದುಕೊಂಡಿಲ್ಲ. ಇಬ್ರಾಹಿಂ ಜೊತೆ ಹಲವು ವಿಷಯ ಚರ್ಚೆ ಮಾಡಿದ್ದೇನೆ. ಇವತ್ತು ದೇಶಕ್ಕೆ ಅವಶ್ಯಕತೆ ಇರುವ ಬಗ್ಗೆ ಲೆಕ್ಕ ಹಾಕಿದ್ದೇವೆ. ಹಾಗಾಗಿ ಈ ಮೈತ್ರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಸಿಎಂ ಮಾಡಿ ಎಂದು ನಾವು ಕೇಳಿದ್ದೆವಾ?

ಈಗ ಬಿಜೆಪಿ ಬಿ ಟೀಂ ಅನ್ನೋದನ್ನು ದೇವೇಗೌಡರು ಪ್ರೂವ್ ಮಾಡಿದ್ದರು ಅಂತಿದ್ದಾರಲ್ಲ ಅವತ್ತು ದೇವೇಗೌಡರು ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡ ಅಂದಿದ್ದರು. ಆಗ ನಾವು ಅಧಿಕಾರಕ್ಕಾಗಿ ಕಾಂಗ್ರೆಸ್ ಜತೆ ಸೇರಿರಲಿಲ್ಲ. ಆದರೆ, ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಮುಂದೆ ಬಂದಿದ್ದು ಯಾರು? ಅಂದು ನನಗೆ ಬಿಜೆಪಿಯಿಂದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ, ನಡ್ಡಾ ಅವರಿಂದ ಫೋನ್ ಬಂದಿತ್ತು. ಆಗ ನಾನು ಬಿಜೆಪಿ ಜತೆ ಸೇರಿದ್ದರೆ 5 ವರ್ಷದ ಆಡಳಿತ ನಮ್ಮದಾಗಿರುತ್ತಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಹಾಸನದಲ್ಲಿ ರಾಹುಲ್ ಗಾಂಧಿ ಕರೆದುಕೊಂಡು ಬಂದು ಭಾಷಣ ಮಾಡಿಸಿದ್ದರು. ಸಿದ್ದರಾಮಯ್ಯ ಅವರು ಜಾತ್ಯತೀತತೆಯನ್ನು ಉಳಿಸುತ್ತೇನೆ ಎಂದು ಹೇಳುತ್ತಾರೆ. ಆದರೆ, ಅಂದು ನನ್ನ ಸರ್ಕಾರವನ್ನು ಬೀಳಿಸುವಾಗ 5 ಶಾಸಕರನ್ನು ಕರೆತಂದರೆ, ಅತ್ತ ಕಡೆಯಿಂದ ಮತ್ತೆ ಐವರನ್ನು ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದವರು ಯಾರು? ಜಾತ್ಯತೀತತೆ ಉಳಿಸುವ ಕಾಂಗ್ರೆಸ್ ಸರ್ಕಾರವನ್ನು ಇದೀಗ ನೋಡುತ್ತಿದ್ದೀರಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಕಾವೇರಿ ತಟದಲ್ಲಿ ರೈತರ ಉಳಿವಿಗೆ ದೇವೇಗೌಡರೇ ಕಾರಣ

ನೀರಾವರಿ ಸಮಸ್ಯೆ ಬಗೆಹರಿಸಲು ದೇವೇಗೌಡರು ಹಳ್ಳಿ ಹಳ್ಳಿ ಸುತ್ತಿದ್ದಾರೆ. ನೀರಾವರಿಗೆ ದೇವೇಗೌಡರು ಮಾಡಿರುವುದನ್ನು ಯಾರೊಬ್ಬರೂ ಮಾಡಿಲ್ಲ. ಚರ್ಚೆ ಮಾಡುವ ಸಂಘಟನೆಗಳಿಗೆ ಒಂದು ಮಾತು ಹೇಳುತ್ತೇನೆ. ಕಾವೇರಿ ತಟದಲ್ಲಿ ರೈತರು ಉಳಿದಿರುವುದಕ್ಕೆ ದೇವೇಗೌಡರೇ ಕಾರಣ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು

ನಮ್ಮ ಪಕ್ಷ ಉಳಿಸಿಕೊಳ್ಳಲು ಕಾಲು ಹಿಡಿದುಕೊಂಡರು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಜನತಾದಳಕ್ಕೆ ಇನ್ನು ಆ ದುರ್ಗತಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಕಾವೇರಿ ಬಗ್ಗೆ ಧ್ವನಿ ಎತ್ತಲಿಲ್ಲ? ಕಾವೇರಿ ವಿಚಾರವಾಗಿ ಯಾಕೆ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ? ಕೆಆರ್‌ಎಸ್‌ ನೀರಿನ ಬಗ್ಗೆ ನಾನು ಮಾಹಿತಿ ಪಡೆದಿದ್ದೇನೆ. ಈ ಸರ್ಕಾರ ಇಷ್ಟು ಕೇವಲವಾಗಿ ನಡೆದುಕೊಳ್ಳುತ್ತಿದೆ. ವಿಷಯವನ್ನು ಡೈವರ್ಟ್ ಮಾಡುತ್ತಿದೆ. ಪಕ್ಷದ ಬಗ್ಗೆ ಹೆಸರು ಕೆಡಿಸಲು ಹೊರಟಿದ್ದಾರೆ. ನನಗೇನೂ ಶಾಕ್ ಕೊಡುವ ವಿಷಯವಲ್ಲ ಇದು. ಈಗಾಗಲೇ ನನಗೆ ಸಾಕಷ್ಟು ಶಾಕ್ ಕೊಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮೈನಾರಿಟಿಗೆ ತೊಂದರೆ ಮಾಡಲ್ಲ: ಎಚ್.ಡಿ. ದೇವೇಗೌಡ

ನಾನು ಇವತ್ತು ನೀರಾವರಿ ಮಂತ್ರಿಗಳ ಯಾವ ಮಾತಿಗೂ ಗಮನ ಕೊಡಲ್ಲ. ಬಾಂಗ್ಲಾದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದೆ. ನಮ್ಮ ಮುಂದೆ ಇರೋದು ಮೈನಾರಿಟಿ ಮಾತು ಅಷ್ಟೇ. ನಾವು ಮೈನಾರಿಟಿ ಎಲ್ಲೇ ಇದ್ದರೂ ತೊಂದರೆ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು. ಆಗ ಮಧ್ಯ ಪ್ರವೇಶಿಸಿದ ಎಚ್.ಡಿ. ಕುಮಾರಸ್ವಾಮಿ, ಮೈನಾರಿಟಿ ಮಾತ್ರ ಅಲ್ಲ ಇಡೀ ಕರ್ನಾಟಕದ ರಕ್ಷಣೆ ನಮ್ಮ ಗುರಿಯಾಗಿದೆ. ನಾಟ್ ಓನ್ಲಿ ಮೈನಾರಿಟಿ ಬ್ರದರ್, ಎಂಟೈರ್ ಕರ್ನಾಟಕ ರಕ್ಷಣೆ ಮಾಡುತ್ತೇವೆ ಎಂದು ಗುಡುಗಿದರು.

ಇದನ್ನೂ ಓದಿ: BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

ಕಾವೇರಿ ನೀರಿನ ವಿಷಯದಲ್ಲಿ ಈಗ ಬಂದಿರುವ ಆದೇಶವು ನನ್ನ ರಾಜ್ಯದ ಜನತೆಯ ಮರಣ ಶಾಸನವಾಗಿದೆ ಎಂದು ಎಚ್.ಡಿ. ದೇವೇಗೌಡ ಬೇಸರವನ್ನು ಹೊರಹಾಕಿದರು.

Continue Reading
Advertisement
tamil nadu
ಕರ್ನಾಟಕ23 seconds ago

Cauvery Dispute:‌ ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು

Virat kohli
ಕ್ರಿಕೆಟ್9 mins ago

ind vs Aus : ಆಸೀಸ್​ ವಿರುದ್ಧ ಆರಂಭಿಕರಾಗಿ ಆಡಲಿದ್ದಾರೆ ರೋಹಿತ್​- ವಿರಾಟ್​ ಜೋಡಿ

Election officers attacked in Ramanagara
ಕರ್ನಾಟಕ29 mins ago

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Kolara MP Muniswamy complaint to governor of Karnataka
ಕರ್ನಾಟಕ43 mins ago

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

Nepal Team
ಕ್ರಿಕೆಟ್55 mins ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema59 mins ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ1 hour ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್1 hour ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್1 hour ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ1 hour ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ10 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌