Site icon Vistara News

Dina Bhavishya : ಈ ರಾಶಿಯವರ ಜೀವನದಲ್ಲಿ ಇಂದು ಅನಿರೀಕ್ಷಿತ ತಿರುವು!

horoscope today

ಭರಣಿ ನಕ್ಷತ್ರದ ಈ ದಿನ ಚಂದ್ರನು ವೃಷಭ ರಾಶಿಯಲ್ಲಿದ್ದಾನೆ. ಇಂದು ಮಧ್ಯರಾತ್ರಿಯವರೆಗೂ (01:58) ಚಂದ್ರನು ಇದೇ ರಾಶಿಯಲ್ಲಿರಲಿದ್ದು, ಹೀಗಾಗಿ ಇಂದು ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲವಿರಲಿದೆ. ಮೇಷ ರಾಶಿಯವರಿಗೆ ಇಂದು ಜೀವನ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ಮಕರ ರಾಶಿಯವರು ಅನಿರೀಕ್ಷಿತವಾಗಿ ಹಣ ಖರ್ಚು ಮಾಡಬೇಕಾಗಿ ಬಂದೀತು. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (12-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ದಶಮಿ 17:58 ವಾರ: ಬುಧವಾರ
ನಕ್ಷತ್ರ: ಭರಣಿ 19:42 ಯೋಗ: ಧೃತಿ 09:38
ಕರಣ: ವಣಿಜ 05:57
ಅಮೃತಕಾಲ: ಮಧ್ಯಾಹ್ನ 02 ಗಂಟೆ 48 ನಿಮಿಷದಿಂದ ಸಂಜೆ 04 ಗಂಟೆ 26 ನಿಮಿಷದವರೆಗೆ.

ಸೂರ್ಯೋದಯ : 06:00 ಸೂರ್ಯಾಸ್ತ : 06:50

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮಗಿಂದು ಉತ್ಸಾಹದ ದಿನ. ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಇಂದು ನಿಮ್ಮ ಜೀವನ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ನಿಮ್ಮ ಆಕರ್ಷಕ ವ್ಯಕ್ತಿತ್ವ, ವರ್ತನೆ ಎಲ್ಲರ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಇಂದು ನಿಮ್ಮೆಲ್ಲ ಕೆಲಸ ಕಾರ್ಯಗಳಿಗೆ ಜನರ ಸಹಕಾರ ಸಿಗಲಿದೆ. ನೀವು ಕೋಪಿಸಿಕೊಂಡು ಇತರರ ಮೇಲೆ ಒತ್ತಡ ಹೇರುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಇಂದು ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ ದೊರೆಯಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಹೆಚ್ಚು ಕಾಳಜಿ ವಹಿಸಿ. ನಿಮ್ಮ ಕೆಲಸ-ಕಾರ್ಯಗಳಿಗೆ ಕುಟುಂಬದ ಬೆಂಬಲ ಸಿಗಲಿದೆ. ಆತುರದ ತಿರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ನಕಾರಾತ್ಮಕ ಆಲೋಚನೆಗಳಿಂದ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಚಿಂತೆಯಿಂದ ಆದಷ್ಟು ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು : ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಹಿಂದೆ-ಮುಂದೆ ಯೋಚಿಸದೇ ಮಾತುಗಳನ್ನಾಡುವುದು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಜಾಸ್ತಿ ವರ್ಷ ಬದುಕಿರಲು ಯಾವ ಆರಾಧನೆ ಮಾಡಬೇಕು ಈ ವಿಡಿಯೋ ನೋಡಿ.

ಮಕರ: ಜೀವನದಲ್ಲಿ ಹೊಸ ಭರವಸೆ ಮೂಡಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭಫಲ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ. ಟೀಕಿಸುವವರ ಮಾತುಗಳಿಗೆ ಕಿವಿ ಗೊಡದೇ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಇದನ್ನೂ ಓದಿ : Vastu Tips : ಮನೆ ಮಂದಿಯ ಆರೋಗ್ಯ ಮತ್ತು ಸಂಪತ್ತು ವೃದ್ಧಿಗೆ ಕನ್ನಡಿ ಕಾರಣ!

ಮೀನ: ಅನುಮಾನದಿಂದ ಯಾವುದೇ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವುದಕ್ಕೂ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version