Site icon Vistara News

Dina Bhavishya : ಈ ರಾಶಿಯವರು ಇಂದು ಸಿಟ್ಟು ಮಾಡಿಕೊಂಡರೆ ನಷ್ಟ ಗ್ಯಾರಂಟಿ!

horoscope today

ಚಂದ್ರನು ಶನಿವಾರ ಮಧ್ಯಾಹ್ನ 01:13 ಕ್ಕೆ ಕರ್ಕ ರಾಶಿಯನ್ನು ಪ್ರವೇಶಿಸಿದ್ದಾನೆ. ಭಾನುವಾರ ಕೂಡ ಈ ರಾಶಿಯಲ್ಲಿಯೇ ಇರಲಿದ್ದಾನೆ. ಹೀಗಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನು ಮತ್ತು ಮಕರ ರಾಶಿಯವರು ಚಂದ್ರನ ಬೆಂಬಲ ಪಡೆಯಲಿದ್ದಾರೆ. ಮೇಷ ರಾಶಿಯವರ ಇಂದಿನ ಹಣಕಾಸು ವ್ಯವಹಾರ ಪ್ರಗತಿ ಕಾಣಲಿದೆ. ಸಿಂಹ ರಾಶಿಯವರಿಗೆ ಇಂದು ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ಚತುರ್ದಶಿ 22:07 ವಾರ: ಭಾನುವಾರ
ನಕ್ಷತ್ರ: ಆರಿದ್ರಾ 26:37 ಯೋಗ: ಧ್ರುವ 08:30
ಕರಣ: ವಿಷ್ಟಿ (ಭದ್ರ) 09:17 ಇಂದಿನ ವಿಶೇಷ: ಮಾಸ ಶಿವರಾತ್ರಿ, ಅನಧ್ಯಯನತ್ರಯ.
ಅಮೃತಕಾಲ: ಮಧ್ಯಾಹ್ನ 03 ಗಂಟೆ 42 ನಿಮಿಷದಿಂದ ಸಂಜೆ 05 ಗಂಟೆ 27 ನಿಮಿಷದವರೆಗೆ.

ಸೂರ್ಯೋದಯ : 06:01 ಸೂರ್ಯಾಸ್ತ : 06:50

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ನಿಮ್ಮ ವರ್ತನೆ ಇತರರ ಮೇಲೆ ಒತ್ತಡ ಉಂಟುಮಾಡಬಹುದು. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

ವೃಷಭ: ನಿಮ್ಮಲ್ಲಿರುವ ದ್ವೇಷದ ಭಾವನೆ ತೊಂದರೆಯುಂಟುಮಾಡಲಿದೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಇಂದು ನೀವು ಮೌನದಿಂದ ಇರುವುದು ಒಳಿತು. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ. ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ತಮ್ಮ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಸಾಮಾಜಿಕವಾಗಿ ನಿಮಗೆ ಇಂದು ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಇಂದು ನೀವು ಸಂತೋಷದಿಂದ ಇದ್ದು, ಇತರರಿಗೂ ಸಂತಸವನ್ನು ಹಂಚುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದಲ್ಲಿ ಹಿಂದೆ-ಮುಂದೆ ಯೋಚಿಸದೇ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ. ಮಾತನಾಡುವಾಗ ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಇತರರ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಶ್ರೀ ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಯ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ದೀರ್ಘಸಮಯದ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಂಜೆಯ ಸಮಯದಲ್ಲಿ ದೀಪ ಹಚ್ಚಿದರೆ ಒಳ್ಳೆಯದೇ? ಈ ವಿಡಿಯೋ ನೋಡಿ.

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸುವುದು ಒಳಿತು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಉದ್ಯೋಗದಲ್ಲಿ ಇಂದು ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ : Prerane : ಭಗವದ್ಗೀತೆಯಲ್ಲಿ ಸಮದರ್ಶಿತ್ವ; ಇದರ ನಿಜ ಅರ್ಥವೇನು?

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version