Dina Bhavishya read your daily horoscope predictions for july 20, 2023Dina Bhavishya : ಈ ರಾಶಿಯವರಿಗೆ ಇಂದು ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಎಚ್ಚರ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಇಂದು ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು ಎಚ್ಚರ!

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುರು ರಾಯರನ್ನು ನೆನೆಯುವ ಪುಣ್ಯದ ದಿನ ಗುರವಾರವಾದ ಇಂದು ಚಂದ್ರನು ಮಧ್ಯಾಹ್ನ 01:12 ಕ್ಕೆ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ

ತಿಥಿ: ತದಿಗೆ ಅಹೋರಾತ್ರಿ ವಾರ: ಗುರುವಾರ
ನಕ್ಷತ್ರ: ಆಶ್ಲೇಷ 10:53 ಯೋಗ: ಸಿದ್ಧಿ 11:20
ಕರಣ: ತೈತುಲ 17:43 ಇಂದಿನ ವಿಶೇಷ: ಮೊಹರಂ ತಿಂಗಳ ಆರಂಭ
ಅಮೃತಕಾಲ: ಬೆಳಗ್ಗೆ 09 ಗಂಟೆ 07 ನಿಮಿಷದಿಂದ 10 ಗಂಟೆ 55 ನಿಮಿಷದವರೆಗೆ.

ಸೂರ್ಯೋದಯ : 06:02 ಸೂರ್ಯಾಸ್ತ : 06:50

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯ ಕಡೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡಿಕೊಳ್ಳುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳನ್ನೂ ತೆಗೆದುಕೊಳ್ಳಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಚಿಸುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜೊತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದ್ದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ದೇವರನ್ನು ಯಾವ ಹೂವಿನಿಂದ ಪೂಜಿಸಬೇಕು? ಈ ವಿಡಿಯೋ ನೋಡಿ.
Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆಗೆ ಪಾತ್ರವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

KKR vs SRH IPL Final: ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು.

VISTARANEWS.COM


on

KKR vs SRH IPL Final
Koo

ಚೆನ್ನೈ: ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ವಿದುದ್ಧದ ಐಪಿಎಲ್​-2024ರ(IPL 2024) ಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಉಭಯ ತಂಡಗಳ ಪ್ರಶಸ್ತಿ ಕಾಳಗಕ್ಕೆ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಮುಖಾಮುಖಿ


ಕೆಕೆಆರ್​ ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ 27 ಪಂದ್ಯಗಳನ್ನು ಆಡಿದೆ. ಈ ಪೈಕಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ. ಫೈನಲ್​ನಲ್ಲಿ ಇತ್ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

Continue Reading

ಕ್ರೀಡೆ

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

KKR vs SRH IPL Final: ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ರೀಮಲ್‌ ಚಂಡಮಾರುತ ಎದ್ದಿರುವ ಕಾರಣ. ಚೆನ್ನೈನಲ್ಲಿಯೂ ಮಳೆಯಾಗುವ ಸಾಧ್ಯೆ ಅಧಿಕವಾಗಿದೆ. ಐಎಂಡಿ ವರದಿ ಪ್ರಕಾರ ಭಾನುವಾರ ಪಶ್ಚಿಮ ಬಂಗಾಳಕ್ಕೆ ರೀಮಲ್‌ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

VISTARANEWS.COM


on

KKR vs SRH IPL Final
Koo

ಚೆನ್ನೈ: ಕಳೆದ ಮೂರು ತಿಂಗಳು ಕ್ರಿಕೆಟ್​ ಅಭಿಮಾನಿಗಳಿಗೆ ಸಂಪೂರ್ಣ ಮನರಂಜನೆ ನೀಡಿದ ಐಪಿಎಲ್‌ನ 17ನೇ(IPL 2024) ಆವೃತ್ತಿ ಕೊನೇ ಘಟ್ಟಕ್ಕೆ ತಲುಪಿದೆ. ಇಂದು (ಭಾನುವಾರ) ನಡೆಯಲಿರುವ ಫೈನಲ್‌(KKR vs SRH IPL Final) ಸಮರದಲ್ಲಿ ಕೋಲ್ಕತಾ ನೈಟ್‌ರೈಡರ್ಸ್‌(Kolkata Knight Riders) ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌(Sunrisers Hyderabad) ತಂಡಗಳು ಮುಖಾಮುಖಿ ಆಗುತ್ತಿವೆ. ಇತ್ತಂಡಗಳದ್ದು ಇದು ಮೊದಲ ಫೈನಲ್​ ಮುಖಾಮುಖಿ. ಇಲ್ಲೇ ನಡೆದಿದ್ದ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇರಲಿಲ್ಲ. ಆದರೆ ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ರೀಮಲ್‌ ಚಂಡಮಾರುತ ಎದ್ದಿರುವ ಕಾರಣ. ಚೆನ್ನೈನಲ್ಲಿಯೂ ಮಳೆಯಾಗುವ ಸಾಧ್ಯೆ ಅಧಿಕವಾಗಿದೆ. ಐಎಂಡಿ ವರದಿ ಪ್ರಕಾರ ಭಾನುವಾರ ಪಶ್ಚಿಮ ಬಂಗಾಳಕ್ಕೆ ರೀಮಲ್‌ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಲೀಗ್​ ಹಂತದ ಯಾವುದೇ ಪಂದ್ಯಕ್ಕೂ ಮೀಸಲು ದಿನ ಇರಲಿಲ್ಲ. ಆದರೆ ನಾಕೌಟ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು(Reserve day) ದಿನ ಇದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಹೀಗಾದರೆ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​ ಅಚ್ಚರಿ ಎಂದರೆ ಲೀಗ್​ ಹಂತದಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​ ತಂಡಗಳ ಒಂದೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಇದನ್ನೂ ಓದಿ KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಅಂಕಣ

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

ತಾಯಿ ಹೃದಯದ ಅಳಲು (Mother Sentiment) ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು…..ಇತ್ತೀಚೆಗೆ ಬಾಲಕಿಯರ ಮೇಲೆ ನಡೆಯುತ್ತಿರುವ ಅಮಾನುಷ ಕೃತ್ಯಗಳ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮಗಳಿಗೆ ಬರೆದ ಸುದೀರ್ಘ ಪತ್ರದ ಸಾರ ಇಲ್ಲಿದೆ.

VISTARANEWS.COM


on

Mother Sentiment
Koo

| ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ, ಗದಗ

ಪ್ರೀತಿಯ ಮಗಳೇ,
ಅರೆ! ನಿನ್ನೆ ತಾನೆ ನನ್ನನ್ನು ಕಳಿಸಲು ಬಂದ ಅಮ್ಮ (Mother Sentiment) ಇಷ್ಟು ಬೇಗ ಪತ್ರ ಬರೆಯಲು ಕಾರಣವೇನು ಎಂದು ಗಾಬರಿಯಾಗಬೇಡ. ತಾಯಿ ಹೃದಯದ ಅಳಲು ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು.
ನಮ್ಮ ಮನೆಯಂಗಳದಲ್ಲಿ ಚಂದದ ಪ್ರಾಕು ಧರಿಸಿ, ಎರಡು ಪುಟ್ಟ ಜುಟ್ಟು ಹಾಕಿಕೊಂಡು, ಮುಖಕ್ಕೆ ಪೌಡರ್ ಸವರಿ, ಹಣೆಗೆ ಕಾಡಿಗೆಯ ಬೊಟ್ಟುಇಟ್ಟು ಕಾಲಿನ ಗೆಜ್ಜೆಯ ಸದ್ದು ಮಾಡುತ್ತಾ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯೆಲ್ಲ ನಡೆಯುತ್ತಿದ್ದ, ಅರಳು ಹುರಿದಂತೆ ಮುದ್ದಾಗಿ ಬಾಯಿ ತುಂಬಾ ಮಾತನಾಡುತ್ತಿದ್ದ ಪುಟ್ಟ ಕಂದ ನೀನು, ಇಂದು ಕಾಲೇಜಿಗೆ ಹೋಗುವಷ್ಟು ದೊಡ್ಡವಳಾಗಿರುವೆ. ಅತ್ಯುತ್ತಮ ಅಂಕ ಗಳಿಸಿ ಒಳ್ಳೆಯ ಕಾಲೇಜಿನಲ್ಲಿ ಸೀಟು ಗಿಟ್ಟಿಸಿ ಉನ್ನತ ಶಿಕ್ಷಣ (Higher Education) ಪಡೆಯುವ ಆಸೆಯಲ್ಲಿ ನಾವು ಮನೆಯವರನ್ನೆಲ್ಲಾ ತೊರೆದು ಹಾಸ್ಟೆಲಿನಲ್ಲಿ ವಾಸವಾಗಲು ಹೋಗುತ್ತಿರುವೆ.

ತುಸುವೇ ಸಂಭ್ರಮ ನಮ್ಮೆಲ್ಲರಲ್ಲಿ ಮನೆ ಮಾಡಿದ್ದರೂ ಹೆಚ್ಚು ಆತಂಕ ಮನದಲ್ಲಿ ಇದೆ. ಕಾಣದ ಊರು, ಅರಿಯದ ಜನ, ಬದಲಾದ ವಾತಾವರಣ ಇದೆಲ್ಲಕ್ಕೂ ನೀನು ಅದು ಹೇಗೋ ಹೊಂದಿಕೊಂಡು ಬಿಡುವೆ ಎಂಬ ಭರವಸೆ ನನಗಿದೆ… ಆದರೆ ನನ್ನ ಭಯ ಅದಲ್ಲ, ಅದರ ಅರಿವಾಗಲು ನೀನು ನಾನಲ್ಲ.
‘ಅಯ್ಯೋ ಅಮ್ಮ! ಮತ್ತದೇ ರಾಗ ಆಡಬೇಡ ನೀನು’ ಎಂಬ ನಿನ್ನ ಗದರಿಕೆಯ ನಡುವೆಯೂ ಮನ ಆತಂಕದ ಗೂಡಾಗಿದೆ. ನಿನ್ನನ್ನು ಕಳಿಸಲು ಬಂದಾಗ ಹೇಳದ ಮಾತುಗಳನು ಬರೆಯಲೇಬೇಕಾದ, ಬರೆದು ತಿಳಿಸಲೇಬೇಕಾದ ಅನಿವಾರ್ಯತೆ ನನ್ನದು.

ಪ್ರೀತಿಯ ಕೂಸು ನೀನು

ನಮ್ಮ ಮನೆಯ ಪ್ರೀತಿಯ ಕೂಸು ನೀನು. ಅಜ್ಜ ಅಜ್ಜಿಯ ಚಿನ್ನುವಾಗಿ, ಅಪ್ಪನ ಮುದ್ದಿನ ಮಗಳಾಗಿ, ಅಕ್ಕ-ಅಣ್ಣಂದಿರ ನೆಚ್ಚಿನ ತಂಗಿಯಾಗಿ ನನ್ನ ಕಣ್ಮಣಿಯಾಗಿ ಸುರಕ್ಷಿತವಾದ ಗುಬ್ಬಚ್ಚಿ ಗೂಡಿನಂತಹ ಸಂಸಾರದಲ್ಲಿ ಬೆಳೆದಿರುವ ನಿನಗೆ ಹೊರಗಿನ ನಿಷ್ಕುರ ಪ್ರಪಂಚದ ಅರಿವಿಲ್ಲ. ಹಾಗೆಂದು ಇಡೀ ಜಗತ್ತೇ ಕೆಟ್ಟದು ಎಂದಲ್ಲ. ನನಗೆ ಎಲ್ಲವೂ ಗೊತ್ತಿದೆ ಎಂಬ ಹದಿಹರೆಯದ ಹುಮ್ಮಸ್ಸು, ಸುಣ್ಣದ ತಿಳಿ ನೀರನ್ನು ಕೂಡ ಹಾಲೆಂದು ನಂಬುವ ನಿನ್ನ ಬೋಳೆ ಸ್ವಭಾವ, ಸ್ನೇಹಕ್ಕಿಂತ ಮಿಗಿಲಾದದ್ದು ಬೇರೆ ಯಾವುದೂ ಇಲ್ಲ ಎಂಬ ಸ್ಲೋಗನ್‌ಗಳು, ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು ಎಂಬ ಧ್ಯೇಯ ವಾಕ್ಯಗಳು, ಜೀವನ ಇರೋದೇ ಎಂಜಾಯ್ ಮಾಡೋಕೆ, ಈ ಹದಿಹರೆಯದ ವಯಸ್ಸು ಮತ್ತೆ ಬರುತ್ತಾ ಎಂಬ ಮಾತುಗಳು ಹೆಚ್ಚು ರುಚಿಸುವ ಸಮಯ ಇದು.

ಯಾವುದೂ ತಪ್ಪಲ್ಲ ನಿಜ

ಯಾವುದೂ ತಪ್ಪಲ್ಲ ನಿಜ. ಆದರೆ ಅದೆಲ್ಲವೂ ಒಂದು ಮಿತಿಯಲ್ಲಿದ್ದಾಗ ಮಾತ್ರ. ಜೀವನದಲ್ಲಿ ಎಂಜಾಯ್ಮೆಂಟ್ ಇರಬೇಕೆ ಹೊರತು ಎಂಜಾಯ್ಮೆಂಟ್ ಒಂದೇ ಜೀವನದ ಮುಖ್ಯ ಉದ್ದೇಶ ಅಲ್ಲ. ನಮ್ಮ ಬದುಕನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾಗುವ ವಿದ್ಯೆ, ಆರ್ಥಿಕ ಸ್ವಾವಲಂಬನೆಯನ್ನು ಕೊಡುವ ನೌಕರಿ, ಸಾಮಾಜಿಕ ವಲಯದಲ್ಲಿ ನಿನ್ನದೇ ಆದ ಒಂದು ಒಳ್ಳೆಯ ಗುರುತಿಸುವಿಕೆ ಇವು ಉನ್ನತ ಶಿಕ್ಷಣದ ಮುಖ್ಯ ಧ್ಯೇಯಗಳು.

ಈಗಾಗಲೇ ಬದುಕಿನಲ್ಲಿ ಒಂದು ಮಹತ್ತರ ಘಟ್ಟವನ್ನು ತಲುಪಿರುವ ಸೋದರ ಸಂಬಂಧಿಗಳು ನಾವಂತೂ ಎಂಜಾಯ್ ಮಾಡಲಿಲ್ಲ ನೀವಾದರೂ ಮಾಡಿ ಎಂದು ಲಘುವಾಗಿ ನಿಮಗೆ ಹೇಳಿರುವುದನ್ನು ನೀನು ಗಂಭೀರವಾಗಿ ತೆಗೆದುಕೊಳ್ಳಬೇಡ…. ಓಟದ ನಡುವೆ ಅಲ್ಲೊಂದು ಇಲ್ಲೊಂದು ಅಡೆತಡೆಗಳು ಇದ್ದರೆ ತೊಂದರೆ ಇಲ್ಲ, ಆದರೆ ಆಡೆ ತಡೆಗಳನ್ನೇ ದಾಟುತ್ತ ಮುಂದೆ ಸಾಗುವ ಹೊತ್ತಿಗೆ ನಿನ್ನ ಸಮಯ ವ್ಯರ್ಥವಾಗಬಹುದು, ನಿನ್ನ ಗುರಿ ನಿನ್ನ ಕೈತಪ್ಪಿ ಹೋಗಬಹುದು ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೋ.

ನಿನ್ನ ಕಾಲೇಜಿನಲ್ಲಿ, ಹಾಸ್ಟೆಲ್‌ನಲ್ಲಿ ಎಲ್ಲರೊಂದಿಗೆ ಒಳ್ಳೆಯ ಸ್ನೇಹವನ್ನು ಹೊಂದು ಆದರೆ ಅತಿಯಾದ ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ. ಸದಾ ಒಂದು ಅಂತರವನ್ನು ಕಾಯ್ದುಕೋ. ಕಹಿ ಎನಿಸಿದರೂ ಜೀವನದ ಸತ್ಯ ಇದುವೇ. ಕೆಲ ಸ್ನೇಹ ಸಂಬಂಧಗಳು ಜೊತೆಗಿರುವವರೆಗೆ ಮಾತ್ರ.. ಒಂದೇ ಊರಿನವರಾದರೆ ಆಗಾಗ ಪರಸ್ಪರ ಭೇಟಿಯಾಗಿ ಕಷ್ಟ ಸುಖವನ್ನಾದರೂ ಹಂಚಿಕೊಳ್ಳುತ್ತಾರೆ, ಆದರೆ ದೂರದಲ್ಲಿರುವ ಸ್ನೇಹಿತರು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಭೇಟಿಯಾಗುತ್ತಾರೆ ಎಂಬುದನ್ನು ನೀನೇ ನೋಡುತ್ತಿರುವೆಯಲ್ಲ. ಹಾಗೆಂದು ಆ ಸ್ನೇಹದ ಕುರಿತು ತಿರಸ್ಕಾರ ಬೇಡ, ಒಳ್ಳೆಯ ಸ್ನೇಹಗಳು ಒಂದು ಮಧುರ ಅನುಭೂತಿಯಂತೆ ನಿನ್ನೊಂದಿಗೆ ಉಳಿದು ಹೋಗಬೇಕು ನಿಜ. ದುಸ್ವಪ್ನಗಳಂತಲ್ಲ.

ನಮ್ಮ ಜೊತೆಗೆ ಬರುವುದು ನಮ್ಮವರು ಮಾತ್ರ

ಜೀವಿತದ ಕೊನೆಯವರೆಗೂ ನಮ್ಮ ಜೊತೆಗೆ ಬರುವುದು ನಮ್ಮ ಅಪ್ಪ, ಅಮ್ಮ, ಅಣ್ಣ-ತಮ್ಮ, ಅಕ್ಕ- ತಂಗಿ ಮುಂತಾದ ರಕ್ತ ಸಂಬಂಧಗಳು ಮಾತ್ರ. ನಮ್ಮ ಕಷ್ಟ ಸುಖಕ್ಕೆ ನೋವು ನಲಿವಿಗೆ ಜೊತೆಯಾಗುವವರು ನಮ್ಮವರೇ. ಕೆಲ ಸ್ನೇಹಗಳು ಇದಕ್ಕೆ ಅಪವಾದ ಇರಬಹುದು. ನೀನು ಮನೆಯವರನ್ನೆಲ್ಲಾ ಬಿಟ್ಟು ಓದಲು ಹೋಗಿರುವ ಮುಖ್ಯ ಉದ್ದೇಶವನ್ನು ಸದಾ ನೆನಪಿನಲ್ಲಿಡು. ಓದು ಮತ್ತು ಅದಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ನಿನ್ನನ್ನು ನೀನು ತೊಡಗಿಸಿಕೋ. ಊಟದಲ್ಲಿ ಉಪ್ಪಿನಕಾಯಿ ಇರುವಂತೆ ತಮಾಷೆ, ಜೋಕುಗಳು, ಕಾಲೆಳೆಯುವುದು ಹಿತಮಿತವಾಗಿರಲಿ…. ಆದರೆ ಅದುವೇ ಮುಖ್ಯವಾಗದಿರಲಿ.

ಹಾಸ್ಟೆಲ್ ನಲ್ಲಿ ಕೊಡುವ ಆಹಾರಕ್ಕೆ ನಿನ್ನನ್ನು ನೀನು ಒಗ್ಗಿಸಿಕೊಳ್ಳುವುದನ್ನು ರೂಢಿ ಮಾಡಿಕೋ. ಬೇಕು ಬೇಕೆಂದಾಗ ಊಟ ಮಾಡಲು ಆಗುವುದಿಲ್ಲ. ಆದ್ದರಿಂದ ನಿಗದಿತ ಸಮಯದಲ್ಲಿ ಆಹಾರ ಸೇವಿಸು. ಅಲ್ಲಿ ಕೊಡುವ ಹಸಿ ತರಕಾರಿ ಸೊಪ್ಪುಗಳನ್ನು, ಹಣ್ಣುಗಳನ್ನು ಸೇವಿಸು. ಸಾಧ್ಯವಾದಷ್ಟು ಹೊರಗಿನ ಆಹಾರವನ್ನು ಅವಾಯ್ಡ್ ಮಾಡು. ಹಾಸ್ಟೆಲ್ನ ನಿಯಮಾವಳಿಗಳನ್ನು ಎಂದೂ ಮೀರದಿರು. ಅತಿಯಾಗಿ ರುಚಿಯ ಕಡೆ ಗಮನ ಕೊಡದೆ ಹಿತಮಿತವಾದ ಆಹಾರವನ್ನು ಸೇವಿಸು.

ಆರ್ಥಿಕ ಶಿಸ್ತು ಇರಲಿ

ಖರ್ಚಿನ ವಿಷಯದಲ್ಲಿ ಸ್ವಲ್ಪ ಹುಷಾರಾಗಿರು. ಯಾವುದೇ ಕಾರಣಕ್ಕೂ ಹಣದ ದುರ್ಬಳಕೆ ಬೇಡ. ಅದೆಷ್ಟೇ ಒಳ್ಳೆಯ ಸ್ನೇಹಿತರಾಗಿದ್ದರೂ ಕೂಡ ಯಾರೊಂದಿಗೂ ನಿನ್ನ ಖಾತೆಗೆ ಸಂಬಂಧಪಟ್ಟ ಮಾಹಿತಿಗಳನ್ನು ಮತ್ತು ಎಟಿಎಂನ ಪಾಸ್ವರ್ಡ್ ಅನ್ನು ಹಂಚಿಕೊಳ್ಳಬೇಡ. ನೀನು ಓದುತ್ತಿರುವೆಡೆಯಲ್ಲಾಗಲಿ, ವಾಸಿಸುತ್ತಿರುವ ಸ್ಥಳದಲ್ಲಾಗಲಿ ಪ್ರತಿ ಬಾರಿಯೂ ನಿನ್ನ ಮಾತೇ ನಡೆಯಬೇಕು ಎಂಬ ಹಟ ಬೇಡ. ಬೇರೆಯವರ ಮಾತಿಗೂ ಬೆಲೆ ಕೊಡು. ಬಹಳಷ್ಟು ಸಲ ನಿಮ್ಮ ಹಾಸ್ಟೆಲ್ ವಾರ್ಡನ್ ಗಳು ನಿಮಗೆ ಹೇಳುವ ಮಾತುಗಳು ಒರಟೆನಿಸಬಹುದು, ಬೇಧ ತೋರುತ್ತಾರೆ ಎಂದು ಕೂಡ ಅನಿಸಬಹುದು. ಆದರೆ ಅವರು ಕೂಡ ನಿಮ್ಮ ಒಳಿತಿಗಾಗಿ ಮತ್ತು ಸಂಸ್ಥೆಯ ಏಳಿಗೆಗಾಗಿ ದುಡಿಯುತ್ತಿರುವವರು. ನಿಮ್ಮ ಎಲ್ಲ ಆಗುಹೋಗುಗಳಿಗೆ ಜವಾಬ್ದಾರರು ಎಂಬುದು ಸದಾ ನೆನಪಿರಲಿ.

ಇನ್ನು ಮುಖ್ಯವಾಗಿ ನಮ್ಮ ಬದುಕಿನಲ್ಲಿ ಬಾಲ್ಯ, ಯೌವನ, ವೃದ್ಧಾಪ್ಯ ಹೇಗೆ ಒಂದರ ನಂತರ ಒಂದು ಕ್ರಮವಾಗಿ ಬರುತ್ತವೆಯೋ ಹಾಗೆಯೇ ವಿದ್ಯಾರ್ಥಿ ಜೀವನ, ಉದ್ಯೋಗ, ಸಂಗಾತಿ ಮತ್ತು ವಿವಾಹಗಳು ಕೂಡ ಅದೇ ಕ್ರಮದಲ್ಲಿ ಬರಬೇಕು. ಇದರಲ್ಲಿ ಮಧ್ಯದ ಎರಡು ವಿಷಯಗಳು ಹಿಂದು ಮುಂದಾದರೆ ಉಳಿದ ಎರಡು ವಿಷಯಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಾಧಿಸಲು ಆಗುವುದಿಲ್ಲ. ಆದ್ದರಿಂದ ಈಗ ಓದುವ ವಯಸ್ಸಿನಲ್ಲಿ ಕೇವಲ ನಿನ್ನ ಓದಿನೆಡೆ ಮಾತ್ರ ನಿನ್ನ ಗಮನವಿರಲಿ. ಹರೆಯದ ಆಕರ್ಷಣೆಗೆ ಒಳಗಾಗಿ ವಿರುದ್ಧ ಲಿಂಗಿಯ ಜೊತೆಗಿನ ಸ್ನೇಹಕ್ಕೆ ಪ್ರೀತಿ ಪ್ರೇಮದ ಬಣ್ಣ ಹಚ್ಚುವುದು ಬೇಡ. ನಿನ್ನ ತಂದೆ ತಾಯಿಯರಿಗೂ ನಿನ್ನ ಸ್ನೇಹಿತರನ್ನು ಪರಿಚಯಿಸಿ ಧೈರ್ಯವಾಗಿ ಮಾತನಾಡಬಲ್ಲಷ್ಟು ನಿಷ್ಕಲ್ಮಶ ಸ್ನೇಹವನ್ನು ಹೊಂದಿದ್ದರೆ ಸಾಕು. ನಮ್ಮ ಹಿರಿಯರು ಇದ್ದಂತೆ ನಾವಿಲ್ಲ ನಿಜ, ಆದರೆ ನಮ್ಮ ಹಿರಿಯರು ಹಾಕಿಕೊಟ್ಟ ದಾರಿ ನಮಗಿದ್ದೆ ಇದೆ.

ಕ್ಷಣಿಕ ಆಸೆಗೆ ಬಲಿಯಾಗಬೇಡ

ಮತ್ತೊಂದು ವಿಷಯ ಹೇಳಿದರೆ ನಿನಗೆ ಬೇಸರವಾಗಬಹುದು. ಇತ್ತೀಚೆಗೆ ಕೇಳಿ ಬರುತ್ತಿರುವ ಹೆಣ್ಣು ಮಕ್ಕಳ ಮೇಲಿನ ಬರ್ಬರ ಕೃತ್ಯಗಳು ಹೆತ್ತವರನ್ನು ಆತಂಕಕ್ಕೆ ಈಡು ಮಾಡಿವೆ. ಕ್ಷಣಿಕ ಆಕರ್ಷಣೆ ಬದುಕನ್ನು ನಾಶ ಮಾಡಬಹುದು. ಒಂದು ತಪ್ಪು ಹೆಜ್ಜೆ ಜೀವನವಿಡೀ ಪಶ್ಚಾತಾಪಕ್ಕೆ ದಾರಿ ಮಾಡಿಕೊಡುವುದು ಬೇಡ ಎಂಬ ಎಚ್ಚರ ನಿನಗಿದ್ದರೆ ಸಾಕು.
ಬದುಕಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕಳೆದ ಒಂದುವರೆ ತಿಂಗಳಿನಲ್ಲಿ ನಡೆದ ಹೆಣ್ಣು ಮಕ್ಕಳ ಸಾಲು ಸಾಲು ಹತ್ಯೆಗಳನ್ನು ನೋಡಿ ಮನಸ್ಸಿಗೆ ಅನ್ನಿಸಿದ್ದು ಹೀಗೆ. ಅರಿಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮದ ಗುಂಗಿಗೆ ಬಿದ್ದು, ತಂದೆ ತಾಯಿ ಬುದ್ಧಿ ಹೇಳಿದಾಗ ವಿದ್ಯಾರ್ಥಿ ದೆಸೆಯಲ್ಲಿ ತಾನು ತಪ್ಪು ಮಾಡುತ್ತಿರುವೆ ಎಂಬ ಅರಿವು ಉಂಟಾಗಿ ಪ್ರೀತಿಯಿಂದ ಹಿಂದೆ ಸರಿದ ತಪ್ಪಿಗೆ ಒಂದೊಮ್ಮೆ ತನ್ನನ್ನು ಪ್ರೀತಿಸಿದ ಹುಡುಗನೇ ತನ್ನನ್ನು ಕೊಚ್ಚಿ ಕೊಂದರೆ ಆಕೆಯನ್ನು ಇಷ್ಟು ವರ್ಷಗಳ ಕಾಲ ಲಾಲಿಸಿ ಪಾಲಿಸಿದ ತಂದೆ ತಾಯಿಗಳ ಪಾಡೇನು ಎಂದು ನೆನೆದಾಗ ಮೈಯಲ್ಲಿ ನಡುಕ ಉಂಟಾಗುತ್ತದೆ. ನಿಮ್ಮ ಬದುಕು ಕೇವಲ ನಿಮ್ಮದಲ್ಲ. ನಿಮ್ಮ ಬದುಕಿನ ಆಗುಹೋಗುಗಳ ಸುತ್ತ ನಿಮ್ಮ ಕುಟುಂಬ ಮತ್ತು ಸಮಾಜ ನಿಮ್ಮೊಂದಿಗೆ ಜೋಡಿಸಲ್ಪಟ್ಟಿ ರುತ್ತದೆ. ಆದ್ದರಿಂದ ನಿನ್ನ ಹುಷಾರಿನಲ್ಲಿ ನೀನಿರು ಎಂದು ಮಾತ್ರ ಹೇಳುತ್ತೇನೆ. ಸಮಾಜಕ್ಕೆ ಒಳ್ಳೆಯ ಉದಾಹರಣೆಯಾಗದಿದ್ದರೂ ಪರವಾಗಿಲ್ಲ ಆದರೆ ಕೆಟ್ಟ ಉದಾಹರಣೆಯಾಗಬಾರದು ಎಂಬ ಅರಿವಿನ ಪ್ರಜ್ಞೆ ನಿನ್ನಲ್ಲಿ ಸದಾ ಜಾಗೃತವಾಗಿರಲಿ.

ಅಷ್ಟಾಗಿಯೂ ನಿನಗೆ ಏನೇ ತೊಂದರೆಯಾದರೂ ಮುಕ್ತವಾಗಿ ಹೇಳಿಕೋ…. ಒಂದು ಸುಳ್ಳನ್ನು ಮುಚ್ಚಲು ನೂರಾರು ಸುಳ್ಳುಗಳನ್ನು ಹೇಳುವುದರ ಬದಲು ಒಂದು ಸತ್ಯವನ್ನು ಹೇಳಿ ಬೈಸಿಕೊಂಡರೂ ಪರವಾಗಿಲ್ಲ ಮನಸ್ಸು ನಿರಾಳವಾಗಿರುತ್ತದೆ ಎಂಬುದನ್ನು ಅರಿತುಕೋ.

ಬದುಕಿನ ಯಾವುದೇ ಹಂತದಲ್ಲಿಯಾದರೂ ನಮ್ಮ ತೋಳುಗಳ ಆಸರೆ ನಿನಗೆ ಇದ್ದೇ ಇರುತ್ತದೆ… ಆದರೆ ಆ ತೋಳುಗಳಲ್ಲಿ ಕಸುವು ತುಂಬುವ ಕೆಲಸ ಮಾತ್ರ ನಿನ್ನದು. ಅದು ನಿನ್ನ ನಡತೆಯಲ್ಲಿ, ವಿದ್ಯಾಭ್ಯಾಸದಲ್ಲಿ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸದಾ ಇರಲೇಬೇಕು. ನಿನ್ನ ಕುರಿತಾಗಿ ನನ್ನ ಆಸೆ ಆಕಾಂಕ್ಷೆಗಳಿಗೆ ಮಿತಿ ಇಲ್ಲ,ಭಯ ಆತಂಕಗಳು ನಿರಾಧಾರವಾದುದು ಎಂದು ನಿನಗೆ ಅನಿಸಿದರೆ ಅದು ನಿನ್ನ ತಪ್ಪಲ್ಲ. ನನ್ನಂತೆ ನೀನೂ ಕೂಡ ತಾಯಾಗಿ ನಿನ್ನ ಮಕ್ಕಳನ್ನು ಬೆಳೆಸುವಾಗ ನಿನಗೆ ಇದರ ಅನುಭವ ಖಂಡಿತವಾಗಿಯೂ ಆಗುತ್ತದೆ. ಪತ್ರ ತುಸು ದೊಡ್ಡದಾಯಿತು ಆದರೆ ಓದದೆ ಇರಬೇಡ. ನಿನ್ನ ಹಿತದಲ್ಲಿಯೇ ನಮ್ಮ ಕುಟುಂಬದ ಒಳಿತಿದೆ.

ಇದನ್ನೂ ಓದಿ: AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Continue Reading

ಭವಿಷ್ಯ

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶನಿವಾರ ಬೆಳಗ್ಗೆ 11:35ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮಿಥುನ ರಾಶಿಯವರು ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕಟಕ ರಾಶಿಯವರು ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (26-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 18:05 ವಾರ: ಭಾನುವಾರ
ನಕ್ಷತ್ರ: ಮೂಲಾ 10:34 ಯೋಗ: ಸಾಧ್ಯ 08:29
ಕರಣ: ವಣಿಜ 06:34 ಅಮೃತ ಕಾಲ: ಬೆಳಗಿನ ಜಾವ 05:30 ರಿಂದ 07:04
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 05:53   ಸೂರ್ಯಾಸ್ತ : 06:41

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ:
ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ:ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆಹಾರ ಕ್ರಮದಲ್ಲಿ ವ್ಯತ್ಯಾಸದಿಂದಾಗಿ ಸ್ವಲ್ಪ ಆರೋಗ್ಯದ ಕಡೆಗೆ ಗಮನ ಹರಿಸಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ:ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ, ಅವರ ಮಾತಿಗೆ ಗಮನಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ ಇರಲಿ. ಕೆಲವು ಆಘಾತಗಳನ್ನು ಎದುರಿಸುವುದರಿಂದ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದ್ದು, ದಿನದ ಮಟ್ಟಿಗೆ ಖರ್ಚು ಇರಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪರಿಸ್ಥಿತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Hardik Pandya
ಕ್ರೀಡೆ2 mins ago

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ32 mins ago

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Psycho Killer Girish throws a stone on the head of the sleeping person and kills
ಕ್ರೈಂ38 mins ago

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Malaysia Masters final
ಕ್ರೀಡೆ41 mins ago

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Accident
ದೇಶ58 mins ago

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 hour ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ1 hour ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ2 hours ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ2 hours ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ2 hours ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌