ಪ್ರಮುಖ ಸುದ್ದಿ
Dina Bhavishya : ಈ ರಾಶಿಯವರು ಇಂದು ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ!
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲದ ತದಿಗೆ/ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಲಕ್ಷ್ಮಿ ದೇವಿಯ ವಾರ ಎಂದೇ ಕರೆಯಲ್ಪಡುವ ಶುಕ್ರವಾರದಂದು ಸಹ ಚಂದ್ರನು ಕನ್ಯಾರಾಶಿಯಲ್ಲೇ ನೆಲೆಸಿದ್ದು, ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭಾ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಇಂದು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಮೀನ ರಾಶಿಯವರಿಗೆ ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (21-07-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ
ತಿಥಿ: ತದಿಗೆ 06:57 ವಾರ: ಶುಕ್ರವಾರ
ನಕ್ಷತ್ರ: ಮಘಾ 13:56 ಯೋಗ: ವ್ಯತಿಪಾತ 12:22
ಕರಣ: ಗರಜ 06:57 ದಿನ ವಿಶೇಷ: ಆಡಿ ಶುಕ್ರವಾರ
ಅಮೃತ ಕಾಲ: ಬೆಳಗ್ಗೆ 11:16ರಿಂದ ಮಧ್ಯಾಹ್ನ 01:04ರ ವರೆಗೆ
ಸೂರ್ಯೋದಯ : 06:03 ಸೂರ್ಯಾಸ್ತ : 06:49
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಮಾನ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು. ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೊಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!
ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಕರ್ನಾಟಕ
Bangalore Bandh : ಶುಕ್ರವಾರ ಇಡೀ ಕರ್ನಾಟಕ ಬಂದ್; ಸೆಕ್ಷನ್ 144 ಹಾಕಿದ್ರೆ ಹುಷಾರ್ ಎಂದು ಗುಡುಗಿದ ವಾಟಾಳ್
Bangalore News : ಸೆ. 29ರಂದು ನಡೆಯಲಿರುವ ಕರ್ನಾಟಕ ಬಂದ್ ವೇಳೆ ನಿಷೇಧಾಜ್ಞೆ ಹಾಕುವಂತಿಲ್ಲ ಎಂದು ವಾಟಾಳ್ ನಾಗರಾಜ್ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.
ಬೆಂಗಳೂರು: ಮಂಗಳವಾರ ನಡೆದ ಬೆಂಗಳೂರು ಬಂದ್‌ನ್ನು (Bangalore Bandh) ಸರ್ಕಾರ ಪೊಲೀಸ್ ಬಲ ಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಆದರೆ ಸೆಪ್ಟೆಂಬರ್ 29ರಂದು ನಡೆಯಲಿರುವ ಕನ್ನಡದ ಒಕ್ಕೂಟ ಕರೆ ನೀಡಿರುವ ಅಖಿಲ ಕರ್ನಾಟಕ ಬಂದ್‌ನ್ನು (Karnataka Bandh) ತಡೆಯಲು ಯತ್ನಿಸಿದರೆ ಹುಷಾರ್ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಸರ್ಕಾರವನ್ನು ಎಚ್ಚರಿಸಿದ್ದಾರೆ.
ಅವರು ಮಂಗಳವಾರ ನಡೆದ ಬೆಂಗಳೂರು ಬಂದ್ ನಡುವೆಯೇ ತಮ್ಮ ತಂಡವನ್ನು ಕೂಡಿಕೊಂಡು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದರು. ಇದೂ ಸೇರಿದಂತೆ ಹೋರಾಟಗಾರರ ಹಕ್ಕನ್ನು ಕಸಿಯಲಾಗಿದೆ ಎಂದು ಅವರು ಸಂಜೆ ಆಪಾದಿಸಿದರು.
ರಾಜ್ಯ ಸರ್ಕಾರ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ವಿಧಿಸಿ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಮಾರ್ಗ ಕಂಡುಕೊಂಡಿದೆ. ಆದರೆ, ಶುಕ್ರವಾರ ಈ ತಂತ್ರವನ್ನು ಪ್ರಯೋಗಿಸಿದರೆ ಎಚ್ಚರಿಕೆ ಎಂದು ಹೇಳಿದರು ವಾಟಾಳ್ ನಾಗರಾಜ್
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿರುದ್ಧ ಸೆ. 27ರ ಬುಧವಾರ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ ಅವರ ಮುಂದೆ ಪ್ರತಿಭಟನೆ ನಡೆಸಲಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ ಎಂದು ಅವರು ಹೇಳಿದರು. ವಾಟಾಳ್ ನಾಗರಾಜ್, ಕನ್ನಡ ಹೋರಾಟಗಾರರ ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್ ಸೇರಿದಂತೆ 50ಕ್ಕೂ ಅಧಿಕ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ: Bangalore Bandh : ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಶುಕ್ರವಾರ ಏನಿರುತ್ತೆ ಏನಿರಲ್ಲ: ವಾಟಾಳ್ ಕೊಟ್ಟ ಲಿಸ್ಟ್
-ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್, ಖಾಸಗಿ ಬಸ್, ಓಲಾ, ಉಬರ್, ಟ್ಯಾಕ್ಸಿ, ಆಟೋ ಗೂಡ್ಸ್ ವಾಹನ ಸೇವೆ ಇರುವುದಿಲ್ಲ
-ಶುಕ್ರವಾರ ಮಾಲ್, ಹೋಟೆಲ್, ರೆಸ್ಟೊರೆಂಟ್, ಮಾಲ್, ಮಲ್ಟಿಪ್ಲೆಕ್ಸ್
-ಯಶವಂತಪುರ, ದಾಸನಪುರ ಎಪಿಎಂಸಿ ಮಾರುಕಟ್ಟೆ, ಕೆ.ಆರ್ ಮಾರ್ಕೆಟ್ ಬಂದ್
– ಅಂಗಡಿ ಮಳಿಗೆಗಳು, ಕೈಗಾರಿಕೆಗಳು ಬಂದ್.
ವಾಟಾಳ್ ನಾಗರಾಜ್ ನೇತೃತ್ವದ ಬಂದ್‌ಗೆ ಮಂಗಳವಾರದ ಬಂದ್‌ಗೆ ಕರೆ ಕೊಟ್ಟ ಸಂಘಟನೆಗಳಲ್ಲದೆ ಹೋಟೆಲ್ ಅಸೋಸಿಯೇಷನ್, ಓಲಾ ಊಬರ್ ಚಾಲಕರ ಸಂಘಟನೆ, ಆದರ್ಶ ಆಟೋ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬಂದ್ ಇನ್ನಷ್ಟು ಪ್ರಖವಾಗುವ ನಿರೀಕ್ಷೆ ಇದೆ. ಆದರೆ, ರಾಜ್ಯದ ಎಲ್ಲ ಭಾಗಗಳಲ್ಲಿ ಯಶಸ್ವಿಯಾಗುವುದು ಡೌಟ್. ಕರಾವಳಿ, ಉತ್ತರ ಕರ್ನಾಟಕದಲ್ಲಿ ಕಾವೇರಿ ಹೋರಾಟದ ಕಾವು ಅಷ್ಟಾಗಿ ತಟ್ಟುವುದಿಲ್ಲ. ಆದರೆ, ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಭಾಗದಲ್ಲಿ ಹೆಚ್ಚು ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಆಗ್ರಹ
ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯದ ಸಂಸದರು ಸಂಪೂರ್ಣ ನಾಯಪತ್ತೆಯಾಗಿದ್ದಾರೆ. ಅವರಿಗೆ ಕಾವೇರಿ ನೀರು ಬೇಡ್ವಾ ಎಂದು ಕೇಳಿದರು. ಶುಕ್ರವಾರ ಸಂಪೂರ್ಣ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕ್ರಿಕೆಟ್
World Cup 2023 : ವಿಶ್ವ ಕಪ್ಗೆ 15 ಸದಸ್ಯರ ಬಾಂಗ್ಲಾದೇಶ ತಂಡ ಪ್ರಕಟ, ಸ್ಟಾರ್ ಆಟಗಾರನೇ ಇಲ್ಲ
ವಿಶ್ವ ಕಪ್ಗೆ (World Cup 2023) ಆಯ್ಕೆಯಾಗಿರುವ ಬಾಂಗ್ಲಾದೇಶ ತಂಡದನ್ನು ಆಲ್ರೌಂಡರ್ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.
ನವದೆಹಲಿ: ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಗಾಗಿ ಬಾಂಗ್ಲಾದೇಶ ಮಂಗಳವಾರ (ಸೆಪ್ಟೆಂಬರ್ 26) ತನ್ನ 15 ಸದಸ್ಯರ ತಂಡವನ್ನು ಅನಾವರಣಗೊಳಿಸಿದೆ. ಆಲ್ರೌಂಡರ್ ಶಕೀಬ್ ಅಲ್ ಹಸನ್ ತಂಡವನ್ನು ಮುನ್ನಡೆಸಲಿದ್ದು, ಲಿಟನ್ ದಾಸ್ ಉಪನಾಯಕನ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಜುಲೈನಲ್ಲಿ ನಿವೃತ್ತಿ ನಿರ್ಧಾರವನ್ನು ಬದಲಾಯಿಸುವ ಮೂಲಕ ಕ್ರಿಕೆಟ್ ಕ್ಷೇತ್ರಕ್ಕೆ ಆಘಾತ ನೀಡಿದ್ದ ಅನುಭವಿ ತಮೀಮ್ ಇಕ್ಬಾಲ್ ಅವರನ್ನು ವಿಶ್ವಕಪ್ ತಂಡದಲ್ಲಿ ಸೇರಿಸಿಕೊಳ್ಳಲಾಗಿಲ್ಲ. ಬೆನ್ನುನೋವಿನಿಂದಾಗಿ ಏಷ್ಯಾ ಕಪ್ 2023 ರಲ್ಲಿ ಕಾಣಿಸಿಕೊಳ್ಳದಿದ್ದರೂ, ಅವರು ಫಿಟ್ನೆಸ್ ಅನ್ನು ಮರಳಿ ಪಡೆದುಕೊಂಡಿದ್ದರು. ಅವರು ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಆದ್ದರಿಂದ, ವಿಶ್ವ ಕಪ್ ತಂಡದಿಂದ ಅವರ ಅನುಪಸ್ಥಿತಿಯು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : World Cup 2023 : ಮುಂಬರುವ ವಿಶ್ವ ಕಪ್ ಮಿಸ್ ಮಾಡಿಕೊಳ್ಳಲಿರುವ ಸ್ಟಾರ್ ಪ್ಲೇಯರ್ಗಳ ಲಿಸ್ಟ್ ಇಲ್ಲಿದೆ
ಜುಲೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಬಲಗೈ ವೇಗಿ ಎಬಾದತ್ ಹುಸೇನ್ ಮೊಣಕಾಲು ಗಾಯದಿಂದ ಅವಕಾಶ ಪಡೆಯಲು ವಿಫಲರಾಗಿದ್ದರು. ಅವರೂ ವಿಶ್ವ ಕಪ್ ತಂಡದಲ್ಲಿ ಸ್ಥಾನ ಪಡೆದಿಲ್ಲ.
Introducing the men in Green and Red for the World Cup. 🇧🇩🏏#BCB | #Cricket | #CWC23 pic.twitter.com/dVy9s4FijA
— Bangladesh Cricket (@BCBtigers) September 26, 2023
ಅನುಭವಿಗಳ ಸೇರ್ಪಡೆ
ತಮೀಮ್ ಅನುಪಸ್ಥಿತಿಯ ಹೊರತಾಗಿಯೂ, ಬಾಂಗ್ಲಾದೇಶದ ಬ್ಯಾಟಿಂಗ್ ಸಾಲಿನಲ್ಲಿ ಮುಷ್ಫಿಕರ್ ರಹೀಮ್, ನಜ್ಮುಲ್ ಹುಸೇನ್ ಶಾಂಟೊ, ಲಿಟನ್ ದಾಸ್ ಮತ್ತು ಶಕೀಬ್ ಅವರಂತಹ ಅನುಭವಿ ಪ್ರಚಾರಕರು ಇದ್ದಾರೆ. ಶಕೀಬ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್ ಮತ್ತು ಮಹೆದಿ ಹಸನ್ ಅವರ ಉಪಸ್ಥಿತಿಯೊಂದಿಗೆ ಬಾಂಗ್ಲಾದೇಶದ ಸ್ಪಿನ್ ವಿಭಾಗವು ಸಾಕಷ್ಟು ಪ್ರಬಲವಾಗಿದೆ.
ಟಸ್ಕಿನ್ ಅಹ್ಮದ್ ಮತ್ತು ಮುಸ್ತಾಫಿಜುರ್ ರೆಹಮಾನ್ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್ ಮತ್ತು ತಂಝಿಮ್ ಹಸನ್ ಕೂಡ ಅವಕಾಶ ಪಡೆದಿದ್ದಾರೆ. ಬಾಂಗ್ಲಾದೇಶ ತನ್ನ ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 7 ರಂದು ಧರ್ಮಶಾಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ಪ್ರಾರಂಭಿಸಲಿದೆ.
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಮುಷ್ಫಿಕರ್ ರಹೀಮ್, ಲಿಟನ್ ದಾಸ್ (ಉಪನಾಯಕ), ನಜ್ಮುಲ್ ಹುಸೇನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ನಸೂಮ್ ಅಹ್ಮದ್, ಮಹೆದಿ ಹಸನ್, ತಂಝೀಮ್ ಹಸನ್ ಸಾಕಿಬ್, ತಂಜಿದ್ ಹಸನ್ ತಮೀಮ್, ಮಹಮುದುಲ್ಲಾ ರಿಯಾದ್.
ಶ್ರೀಲಂಕಾ ತಂಡವೂ ಪ್ರಕಟ
ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಗಾಯದ ಸಮಸ್ಯೆಯಿಂದಾಗಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವುದರಿಂದ ಮುಂಬರುವ ಏಕ ದಿನ ವಿಶ್ವಕಪ್ಗೆ (World Cup 2023) ಶ್ರೀಲಂಕಾ ಮಂಗಳವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೂರನೇ ಹಂತದ ಸ್ನಾಯು ಸೆಳೆತದಿಂದಾಗಿ ಹಸರಂಗ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಲಂಕಾ ತಂಡವು ಪ್ರಮುಖ ಬೌಲರ್ಗಳು ಇಲ್ಲದೇ ಆಡುವಂತಾಗಿದೆ. ತಮ್ಮ ಕೆಲವು ಪ್ರಮುಖ ಆಟಗಾರರನ್ನು ಕಾಡುತ್ತಿರುವ ಗಾಯವು ಅಲ್ಲಿನ ಆಯ್ಕೆದಾದರರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಇದೀಗ ಪ್ರಮುಖ ಸ್ಪಿನ್ನರ್ಗಳು ಇಲ್ಲದೇ ತಂಡವನ್ನು ಪ್ರಕಟಿಸಲಾಗಿದೆ.
ಊಹಾಪೋಹಗಳು ಮತ್ತು ಅನುಮಾನಗಳನ್ನು ನಿವಾರಿಸಿದ ದಸುನ್ ಶನಕಾ ಅವರು ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ವನಿಂದು ಹಸರಂಗ, ಮಹೇಶ್ ತೀಕ್ಷಣಾ ಮತ್ತು ದಿಲ್ಶಾನ್ ಮಧುಶಂಕಾ ಅವರ ಫಿಟ್ನೆಸ್ ಬಗ್ಗೆ ದೀರ್ಘಕಾಲದ ಕಳವಳ ವ್ಯಕ್ತತೊಂಡಿವೆ. ಶ್ರೀಲಂಕಾದ ಮ್ಯಾನೇಜ್ಮೆಂಟ್ ಈ ವಿಷಯದ ಮೇಲೆ ಬೆಳಕು ಚೆಲ್ಲಿದೆ, ಅವರ ಭಾಗವಹಿಸುವಿಕೆಯು ಅವರ ದೈಹಿಕ ಸ್ಥಿತಿಯ ಮೇಲೆ ಅವಲಂಬಿತವಾಗಿದೆ ಎಂದು ಒತ್ತಿಹೇಳಿದೆ.
ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಕುಸಾಲ್ ಪೆರೆರಾ, ಪಥುಮ್ ನಿಸ್ಸಾಂಕಾ, ದಿಮುತ್ ಕರುಣರತ್ನೆ, ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶಾನ್ ಹೇಮಂತ, ಮಹೇಶ್ ತೀಕ್ಷಾ, ದುನಿತ್ ವೆಲ್ಲಾಗೆ, ಕಸುನ್ ರಜಿತಾ, ಮಥೀಶಾ ಪತಿರಾನಾ, ಲಹಿರು ಕುಮಾರ, ದಿಲ್ಶಾನ್ ಮಧುಶಂಕಾ.
ಕರ್ನಾಟಕ
Bangalore Bandh : ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
Bangalore bandh : ಬೆಂಗಳೂರು ಬಂದ್ ಯಶಸ್ವಿಯಾಗಿ ಮುಕ್ತಾಯವಾಗಿದೆ. ಎಲ್ಲ ವ್ಯವಸ್ಥೆಗಳು ಇದ್ದರೂ ಜನರೇ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿದ್ದು ಕಂಡುಬಂತು.
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು.
ಈ ಬಂದ್ ನೂರಾರು ಸಾಮಾಜಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ವ್ಯಾಪಾರಿಗಳು, ವಾಹನ ಮಾಲೀಕರೇ ಆದರೂ ಅಂತಿಮವಾಗಿ ಇದನ್ನು ಯಶಸ್ವಿಗೊಳಿಸಿದ್ದು ಜನ ಬೆಂಬಲ. ಯಾಕೆಂದರೆ, ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಇರುವುದರಿಂದ ಬೆಂಬಲ ನೀಡುವ ಸಂಘಟನೆಗಳಲ್ಲಿ ವಿಭಜನೆಯಾಗಿತ್ತು. ಕೆಲವರು ತಾವು ಈ ಬಂದ್‌ಗೆ ಬೆಂಬಲ ಕೊಡುವುದಿಲ್ಲ, ಸೆ. 29ರ ಬಂದ್‌ಗೆ ಬೆಂಬ ಕೊಡುವುದಾಗಿ ಪ್ರಕಟಿಸಿದ್ದರು. ಆದರೂ ಒಟ್ಟಾರೆ ಪರಿಣಾಮದಲ್ಲಿ ವ್ಯತ್ಯಾಸವಾಗಲಿಲ್ಲ. ಯಾಕೆಂದರೆ ಸಂಘಟನೆಗಳ ಹಂಗನ್ನು ಮೀರಿ ಜನರು ಈ ಬಂದ್‌ಗೆ ಮೌನ ಬೆಂಬಲವನ್ನು ಸೂಚಿಸಿದ್ದರು.
ಮುಂಜಾನೆಯಿಂದಲೇ ರಾಜಧಾನಿಯಲ್ಲಿ ಬಂದ್‌ನ ವಾತಾವರಣ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅಲ್ಲಲ್ಲಿ ಪ್ರತಿಭಟನೆಗಳು ನಡೆದವು. ಪ್ರತಿಭಟನೆಗೆ ಕರೆ ನೀಡಿದ ಸಂಘಟನೆಯ ಮುಖ್ಯಸ್ಥರಲ್ಲಿ ಒಬ್ಬರಾದ ಕುರುಬೂರು ಶಾಂತ ಕುಮಾರ್ ಅವರನ್ನೂ ಪೊಲೀಸರು ವಶಕ್ಕೆ ಪಡೆದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಅಲ್ಲಿ ಸರ್ಕಾರದ ಮುಂದೆ ಬೇಡಿಕೆಗಳನ್ನು ಮಂಡಿಸಲಾಯಿತು. ಸರ್ಕಾರದ ಪರವಾಗಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮನವಿ ಸ್ವೀಕರಿಸಿದರು. ಈ ಭರವಸೆಗಳ ಈಡೇರಿಕೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿದೆ.
ಎಲ್ಲ ವ್ಯವಸ್ಥೆಗಳಿದ್ದರೂ ಜನರೇ ರಸ್ತೆಗೆ ಬಂದಿಲ್ಲ
ನಿಜವೆಂದರೆ, ರಾಜಧಾನಿಯಲ್ಲಿ ಬಂದ್ ಘೋಷಣೆಯಾಗಿದ್ದರೂ ಬಸ್, ಮೆಟ್ರೋ ರೈಲು, ಆಟೊಗಳು, ಓಲಾ, ಊಬರ್ ಟ್ಯಾಕ್ಸಿಗಳು, ಹೋಟೆಲ್‌ಗಳು ತೆರೆದಿದ್ದವು. ಆದರೆ, ಅದನ್ನು ಬಳಸುವ ಜನರೇ ಇರಲಿಲ್ಲ.
ಬಿಎಂಟಿಸಿ ಬಸ್‌ಗಳು ಓಡಾಡಿದರೂ ಖಾಲಿಯಾಗಿದ್ದವು. ಮೆಟ್ರೋ ರೈಲು ಬಹುಭಾಗ ಖಾಲಿಯಾಗಿಯೇ ಓಡಾಡಿತು. ಆಟೊಗಳಲ್ಲಿ ಹೋಗುವವರು ಕಡಿಮೆ ಇದ್ದರು. ರೆಸ್ಟೋರೆಂಟ್‌ಗಳಲ್ಲಿ ಜನ ಸಂದಣಿ ಇರಲಿಲ್ಲ. ಅಂದರೆ ಇಷ್ಟೆಲ್ಲ ವ್ಯವಸ್ಥೆ ಇದ್ದರೂ ಜನರೇ ಮಂಗಳವಾರ ಕಾವೇರಿಗಾಗಿ ಒಂದು ದಿನ ಬಂದ್ ಎಂಬ ತೀರ್ಮಾನಕ್ಕೆ ಬಂದಿದ್ದರು. ಹೀಗಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಜನ ಇರಲಿಲ್ಲ.
ಇದನ್ನೂ ಓದಿ: Bangalore Bandh : 13 ವಿಮಾನ ಸಂಚಾರ ಕ್ಯಾನ್ಸಲ್, ಮೆಟ್ರೋ ಫುಲ್ ಖಾಲಿ, ಬಿಎಂಟಿಸಿ ಬಸ್‌ಗಳಿವೆ, ಜನರೇ ಇಲ್ಲ
ವಿಶೇಷವೆಂದರೆ ಬೆಂಗಳೂರಿನಲ್ಲಿ ಮಂಗಳವಾರ ಬಂದ್ ನಡೆದೇ ನಡೆಯುತ್ತದೆ. ಅಲ್ಲಿ ಹೋಗಿ ಕಷ್ಟಕ್ಕೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂದು ವಿಮಾನ ಪ್ರಯಾಣಿಕರು ನಿರ್ಧಾರ ಮಾಡಿದ ಪರಿಣಾಮವಾಗಿ ಬೆಂಗಳೂರಿಗೆ ಮಂಗಳವಾರ ಬರಬೇಕಾಗಿದ್ದ 13 ವಿಮಾನಗಳ ಸಂಚಾರವೇ ರದ್ದಾಗಿತ್ತು.
ಶಾಲೆ, ಕಾಲೇಜು ಬಂದ್; ಮಾಲ್, ಥಿಯೇಟರ್‌ಗಳ ಬೆಂಬಲ
ಈ ನಡುವೆ, ಬಂದ್ ನಿಮಿತ್ತ ಬೆಂಗಳೂರಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೀಗಾಗಿ ಮಕ್ಕಳು ಮತ್ತು ಮನೆಯವರು ನಿರಾಳರಾಗಿದ್ದರು. ಇತ್ತ ದೊಡ್ಡ ದೊಡ್ಡ ಮಾಲ್‌ಗಳು ಬಂದ್‌ಗೆ ಬೆಂಬಲ ನೀಡಿದ್ದರು. ಚಿತ್ರೋದ್ಯಮದ ಬೆಂಬಲ ಇದ್ದಿದ್ದರಿಂದ ಸಿನಿಮಾ ಥಿಯೇಟರ್‌ಗಳು ಸಂಜೆವರೆಗೆ ಓಪನ್ ಆಗಲಿಲ್ಲ.
ಪೊಲೀಸ್ ಬಲ ಪ್ರಯೋಗದ ಆರೋಪ
ಇದರ ನಡುವೆ ಬಂದ್‌ನ್ನು ವಿಫಲಗೊಳಿಸಲು ಪೊಲೀಸ್ ಬಲ ಪ್ರಯೋಗ ಮಾಡಿದ ಆರೋಪ ಎದುರಾಗಿದೆ. ಬಲವಂತದ ಬಂದ್‌ಗೆ ಅವಕಾಶವಿಲ್ಲ, ಮೆರವಣಿಗೆ ನಡೆಸುವಂತಿಲ್ಲ, ಬಹಿರಂಗ ಪ್ರತಿಭಟನೆಗೆ ಅವಕಾಶವಿಲ್ಲ ಎಂಬ ನಿರ್ಬಂಧಗಳನ್ನು ಹಾಕಿದ ಪೊಲೀಸರು ಬಂದ್‌ನ ಮುನ್ನಾ ದಿನವೇ 1000ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದರು. ಇಷ್ಟೆಲ್ಲ ಮಾಡಿದರೂ ಬಂದ್ ಸಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ಗಳು ಸಂಘಟನೆಗಳನ್ನು ಅಭಿನಂದಿಸಿವೆ.
ಇನ್ನು ಸೆ. 29ರ ಬಂದ್. ಈಗ ಈ ಬಂದ್ ಮುಕ್ತಾಯವಾಗಿರುವಂತೆಯೇ ಸೆಪ್ಟೆಂಬರ್ 29ರ ಕರ್ನಾಟಕ ಬಂದ್‌ಗೆ ವೇದಿಕೆ ಸಿದ್ಧವಾಗಿದೆ. ಅಂದು ಪೂರ್ಣವಾಗಿ ಕರ್ನಾಟಕ ಬಂದ್ ಆಗಲಿದೆ ಎಂದಿದ್ದಾರೆ ವಾಟಾಳ್ ನಾಗರಾಜ್.
ಇದನ್ನೂ ಓದಿ: Bangalore Bandh: ಬೆಂಗಳೂರು ಬಂದ್ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ನಡೆಯಿತೇ? ಕಮಿಷನರ್ ಹೇಳಿದ್ದೇನು?
ಕೋರ್ಟ್
Supreme Court: ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ
Supreme Court: ಜಡ್ಜ್ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಶಿಫಾರಸು ಮಾಡಿರುವ ಹೆಸರಗಳನ್ನು ವಾಪಸ್ ಕೊಲಿಜಿಯಂಗೆ ಕಳುಹಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ.
ನವದೆಹಲಿ: ಜಡ್ಜ್‌ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ.
ಹೆಸರುಗಳನ್ನು ತೆರವುಗೊಳಿಸುವಲ್ಲಿ ಕೇಂದ್ರವು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರ ಪೀಠವು ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದರು. ಹೈಕೋರ್ಟ್‌ನಿಂದ ಶಿಫಾರಸು ಮಾಡಿದ 80 ಹೆಸರುಗಳು 10 ತಿಂಗಳ ಅವಧಿಗೆ ಬಾಕಿ ಉಳಿದಿವೆ ಎಂದು ನ್ಯಾಯಮೂರ್ತಿ ಕೌಲ್ ಕೇಂದ್ರ ಸರ್ಕಾರವನ್ನು ಉದ್ದೇಶಿಸಿ ಹೇಳಿದರು.
ಹೆಸರನ್ನು ತೆರವುಗೊಳಿಸುವುದರಲ್ಲಿ ಕೇಂದ್ರ ಸರ್ಕಾರದ ವಿಳಂಭವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು, 26 ನ್ಯಾಯಾಧೀಶರ ವರ್ಗಾವಣೆ ಮತ್ತು ‘ಸೂಕ್ಷ್ಮ ಹೈಕೋರ್ಟ್’ನಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ಬಾಕಿ ಇದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ಶಿಫಾರಸು ಮಾಡಿದ್ದರೂ ಕೊಲಿಜಿಯಂಗೆ ಕಳುಹಿಸಲಾಗದ ಎಷ್ಟು ಹೆಸರುಗಳು ಬಾಕಿ ಉಳಿದಿವೆ ಎಂಬ ಮಾಹಿತಿ ನನ್ನ ಬಳಿ ಇದೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.
ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗೆ ವಾರ ಕಾಲ ಸಮಯ ಕೇಳಿದರು. ಪೀಠವು ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಸಮಯವನ್ನು ನೀಡಿದೆ. ಅಲ್ಲದೇ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯೊಂದಿಗೆ ಮರಳಬೇಕು ಎಂದು ಅಟಾರ್ನಿ ಜನರಲ್‌ಗೆ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿತು.
ಈ ಸುದ್ದಿಯನ್ನೂ ಓದಿ: Supreme Court: ಮುಸ್ಲಿಂ ಬಾಲಕನಿಗೆ ಶಾಲೆಯಲ್ಲಿ ಕಪಾಳ ಮೋಕ್ಷ, ಇದು ದೇಶದ ಅಂತಃಸಾಕ್ಷಿ ಅಲುಗಾಡಿಸುವ ಕೇಸ್!
ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನಡೆದುಕೊಳ್ಳುತ್ತಿರುವ ರೀತಿಗೆ ನಾನು ಬಹಳಷ್ಟು ಹೇಳಬೇಕಿದೆ. ಆದರೆ, ನನ್ನಷ್ಟಕ್ಕೆ ತಡೆದುಕೊಳ್ಳುತ್ತಿದ್ದೇನೆ. ನಾನು ಶಾಂತವಾಗಿದ್ದೇನೆ. ಯಾಕೆಂದರೆ, ಅಟಾರ್ನಿ ಜನರಲ್ ಒಂದು ವಾರ ಸಮಯ ಕೇಳಿದ್ದಾರೆ. ಆದರೆ, ಮುಂದಿನ ದಿನಾಂಕದಲ್ಲಿ ನಾನು ಸುಮ್ಮನೆ ಇರಲಾರೆ ಎಂದು ಜಸ್ಟೀಸ್ ಕೌಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ನ್ಯಾಯಮೂರ್ತಿಗಳ ನೇಮಕಾತಿ ವಿಷಯವು ಯಾವಾಗಲೂ ಸುಪ್ರೀಂ ಕೋರ್ಟ್ ಹಾಗೂ ಕಾರ್ಯಾಂಗದ ನಡುವಿನ ಜಟಾಪಟಿ ವಿಷಯವಾಗಿ ಮಾರ್ಪಟ್ಟಿದೆ. ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಪಾತ್ರ ಇರಬೇಕು ಎಂದು ಕೆಲವು ಕೇಂದ್ರ ಸಚಿವರು ವಾದಿಸುತ್ತಾರೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಸರ್ಕಾರದ ದೊಡ್ಡ ಪಾತ್ರವನ್ನು ನೀಡುವ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 2015 ರಲ್ಲಿ ರದ್ದುಗೊಳಿಸಿತ್ತು.
-
Live News15 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ5 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ22 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
South Cinema8 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕ್ರಿಕೆಟ್21 hours ago
Babar Azam: ಆಡಿ ಕಾರ್ ಓವರ್ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
-
ದೇಶ22 hours ago
MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!
-
ದೇಶ24 hours ago
Sanatan Dharma row: ತಮಿಳುನಾಡು ಸಿಎಂ ಪುತ್ರ ಉದಯನಿಧಿ ವಿರುದ್ಧ ದಿಲ್ಲಿಯಲ್ಲಿ ಸಂತರ ಪ್ರತಿಭಟನೆ, ಕ್ರಮಕ್ಕೆ ಆಗ್ರಹ
-
ಕರ್ನಾಟಕ8 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!