Site icon Vistara News

Dina Bhavishya : ಈ ರಾಶಿಯವರು ಇಂದು ಯಾರಿಗೂ ಸೀಕ್ರೆಟ್‌ ಹೇಳ್ಬೇಡಿ!

Dina Bhavishya

ಚಂದ್ರನು ತುಲಾ ರಾಶಿಯಿಂದ ಮಂಗಳವಾರ ಮಧ್ಯಾಹ್ನ 12:55ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ತುಲಾ ರಾಶಿಯವರು ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಕಟಕ ರಾಶಿಯವರಿಗೆ ಚಂದ್ರನ ಬಲದಿಂದಾಗಿ ನ್ಯಾಯಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ವಿಜಯವನ್ನು ತಂದು ಕೊಡಲಿದೆ. ವೃಶ್ಚಿಕ ರಾಶಿಯವರಿಗೆ ನಕಾರಾತ್ಮಕ ಆಲೋಚನೆಗಳು ಘಾಸಿ ಮಾಡುವ ಸಾಧ್ಯತೆ ಇದೆ. ಕುಂಭ ರಾಶಿಯವರು ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಇದು ಅಪಾಯ ತರಬಹುದು ಎಚ್ಚರಿಕೆಯಿಂದ ಇರಿ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-07-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 15:08 ವಾರ: ಮಂಗಳವಾರ
ನಕ್ಷತ್ರ: ಚಿತ್ತಾ 24:01 ಯೋಗ: ಸಿದ್ದಿ 14:59
ಕರಣ: ವಾಣಿಜ 15:08 ಅಮೃತ ಕಾಲ: ಸಂಜೆ 05:09 ರಿಂದ 06:53ರ ವರೆಗೆ  

ಸೂರ್ಯೋದಯ : 05:47 ಸೂರ್ಯಾಸ್ತ : 07:12

ರಾಹುಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣದ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ನ್ಯಾಯಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದು ಕೊಡಲಿದೆ. ಸಂಗಾತಿಯ
ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಬಂಧ ಪಡದ ವಿಷಯದ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸಲಿದ್ದಾರೆ. ಆರೋಗ್ಯ‌ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ದಿಡೀರ್‌ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ, ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version