Dina Bhavishya : ಈ ರಾಶಿಯವರು ಆತುರದಲ್ಲಿ ಈ ನಿರ್ಧಾರ ತೆಗೆದುಕೊಳ್ಳುವುದು ಬೇಡ್ವೇ ಬೇಡ! Vistara News
Connect with us

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಆತುರದಲ್ಲಿ ಈ ನಿರ್ಧಾರ ತೆಗೆದುಕೊಳ್ಳುವುದು ಬೇಡ್ವೇ ಬೇಡ!

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina bhavishya
Koo

ಚಂದ್ರನು ಶುಕ್ರವಾರವೂ ಧನಸ್ಸು ರಾಶಿಯಲ್ಲೆ ಇರಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ವೃಶ್ಚಿಕ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಅನಿರೀಕ್ಷಿತ ಖರ್ಚು ಬರಲಿದ್ದು, ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ ಇದೆ. ಕಟಕ ರಾಶಿಯವರು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಅದಷ್ಟು ತಾಳ್ಮೆಯಿಂದ ಇರಿ. ವೃಶ್ಚಿಕ ರಾಶಿಯವರಿಗೆ ಚಂದ್ರನ ಬಲವಿದ್ದರೂ ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗಲಿದೆ. ಮೀನ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ತುಲಾ ರಾಶಿಯವರು ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಕುಂಭ ರಾಶಿಯವರು ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡವೇ ಬೇಡ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-07-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ
ತಿಥಿ: ದಶಮಿ 14:50 ವಾರ: ಶುಕ್ರವಾರ
ನಕ್ಷತ್ರ: ಅನುರಾಧ 24:54 ಯೋಗ: ಶುಕ್ಲ 11:55
ಕರಣ: ಗರಜ 14:50 ಅಮೃತ ಕಾಲ: ಮಧ್ಯಾಹ್ನ 02:45 ರಿಂದ ಸಂಜೆ 04:19ರ ವರೆಗೆ
ದಿನದ ವಿಶೇಷ: ಆಡಿ ಶುಕ್ರವಾರ, ವಿಶ್ವ ಹೆಪಟೈಟಿಸ್‌ ದಿನ

ಸೂರ್ಯೋದಯ : 05:55 ಸೂರ್ಯಾಸ್ತ : 07:10

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನಿರೀಕ್ಷಿತ ಖರ್ಚು ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುವ ಸಾಧ್ಯತೆ. ಹಾಸಿಗೆ ಇದ್ದಷ್ಟು ಕಾಲು ಚಾಚಿ. ಸ್ನೇಹಿತರು, ಮಿತ್ರರ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವಿರಿ. ಸಹದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕೊಂಚ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ದಾಂಪತ್ಯದಲ್ಲಿ ಮಧುರ ಭಾವ ಮೂಡಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ವೃಷಭ: ದಿನದ ಆರಂಭದಲ್ಲಿ ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡುವ ಸಾಧ್ಯತೆ ಎಚ್ಚರಿಕೆ ಇರಲಿ. ಆದಷ್ಟು ದೈಹಿಕ ಹಾಗೂ ಮಾನಸಿಕ ದೃಢತೆಗಾಗಿ ಯೋಗ ಹಾಗೂ ಧ್ಯಾನ ಮಾಡುವುದು ಉತ್ತಮ.
ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಮನೆಯಲ್ಲಿ ಅಪಸ್ವರಗಳು ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆ ವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಸಭಲತೆ . ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ, ಅನಗತ್ಯ ಖರ್ಚುಗಳ ಬಗೆಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ.
ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

ಈ ದೇವರ ಸ್ಮರಣೆಯನ್ನು ಮಾಡಲೇಬೇಕು? ಈ ಕುರಿತು ತಿಳಿಯಲು ಲಿಂಕ್‌ ಕ್ಲಿಕ್‌ ಮಾಡಿ

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೇ ದೀರ್ಘವಧಿ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ.
ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ. ಅಗತ್ಯವಿದ್ದರೆ ಸ್ನೇಹಿತರು ನಿಮ್ಮ ನೆರವಿಗೆ ಬರುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಇದನ್ನೂ ಓದಿ : Prerane : ಕಮಲವು ಏಕೆ ಭಗವಂತನಿಗೆ ವಿಶೇಷ?

Horoscope Today

ಮೀನ: ಹೂಡಿಕೆಯ ಲಾಭಾಂಶ ಸಿಗಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಅದೃಷ್ಟದ ದಿನಗಳು ಇಂದು ಫಲ ನೀಡಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | [email protected]

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Protest : ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ, ಸ್ತಬ್ಧವಾಗಲಿದೆ ರಾಜಧಾನಿ

Cauvery Protest : ಸೆ. 26ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಅಂದು ಯಾವುದೇ ರೀತಿಯ ವ್ಯಾಪಾರ, ವಹಿವಾಟು, ಸಂಚಾರ, ಸಾರಿಗೆ, ಶಾಲೆ, ಕಾಲೇಜು ಇರುವುದಿಲ್ಲ ಎಂದು ಸಂಯೋಜಕರು ಹೇಳಿದ್ದಾರೆ.

VISTARANEWS.COM


on

Edited by

September 26 Bangalore bandh
Koo

ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ) ಬೆಂಗಳೂರು ಬಂದ್‌ಗೆ (Bangalore bandh on September 26) ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park Bangalore) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ನೇತೃತ್ವದಲ್ಲಿ ಶನಿವಾರ ನಡೆದ ಬೃಹತ್‌ ಪ್ರತಿಭಟನಾ ಮತ್ತು ಸಮಾಲೋಚನಾ ಸಭೆಯಲ್ಲಿ (Cauvery Protest) ಸೆಪ್ಟೆಂಬರ್ 26ರಂದು ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಯಿತು. ಸುಮಾರು 150ಕ್ಕೂ ಅಧಿಕ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಲಿದೆ ಎಂದು ಪ್ರಕಟಿಸಲಾಗಿದೆ.

ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನ ಪ್ರಮುಖ ಅಪಾರ್ಟ್ ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಿದ್ದವು.

ಆಮ್‌ ಆದ್ಮಿ ಪಾರ್ಟಿಯ ಮುಖ್ಯಮಂತ್ರಿ ಚಂದ್ರು (Mukhyamantri Chandru), ರೈತ ಮುಖಂಡ ಕುರುಬೂರು ಶಾಂತಕುಮಾರ್ (Kuruburu Shantakumar), ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್, ಜಯ ಕರ್ನಾಟಕ ಸಂಘಟನೆ ಮುಖಂಡರು, ಶಾಶ್ವತ ನೀರಾವರಿ ಹೋರಾಟ ಸಮಿತಿ, ಜಲ ಸಂರಕ್ಷಣಾ ಸಮಿತಿ ಮುಖಂಡರಿಂದ ಅಭಿಪ್ರಾಯ ಮಂಡನೆಯಾದ ಬಳಿಕ ಸೆ. 26ರಂದು ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಯಿತು.

meeting at freedom Park Bangalore bandh

ರಾಜಸ್ತಾನಿ ಸಂಘಟನೆಗಳ ಒಕ್ಕೂಟದಿಂದಲೂ ಕಾವೇರಿ ಹೋರಾಟಕ್ಕೆ ಸಾಥ್

ʻʻಬಂದ್ ಮಾಡಿದ್ರೆ ನಾವು ಬೆಂಬಲ ಕೊಡ್ತೇವೆ. ಯಾಕೆಂದರೆ ಕಾವೇರಿ ಋಣ ನಮ್ಮ ಮೇಲೆಯೂ ಇದೆ. ಅದಕ್ಕಾಗಿ ನಾವು ಈ ಹೋರಾಟಕ್ಕೆ ಬೆಂಬಲ ಕೊಡ್ತೀವೆʼʼ ಎಂದ ರಾಜಸ್ತಾನಿ ಸಂಘಟನೆ ಮುಖ್ಯಸ್ಥರು ಹೇಳಿದರು.

ಮಂಗಳವಾರದ ಬಂದ್ ಹೇಗಿರಲಿದೆ?

ಸಂಘಟನೆಗಳ ನಾಯಕರು ಮಾಡಿರುವ ಪ್ಲ್ಯಾನ್‌ ಪ್ರಕಾರ ಮುಂದಿನ ಮಂಗಳವಾರ ಎಲ್ಲಾ ಸಾರ್ವಜನಿಕ ಸೇವೆಗಳು ಸ್ಥಗಿತವಾಗಲಿವೆ.
-ಅಂಗಡಿ ಮುಂಗಟ್ಟುಗಳು ಬಂದ್‌
– ಎಲ್ಲ ರೀತಿಯ ಸಂಚಾರ ವ್ಯವಸ್ಥೆ ಸ್ಥಗಿತ
-ಶಾಲಾ ಕಾಲೇಜ್‌, ಸರ್ಕಾರಿ ಕಚೇರಿ ಕಾರ್ಯ ಚಟುವಟಿಕೆ ಸ್ಥಗಿತ
– ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಂದ್

ಹೀಗೆ ಹಾಲು, ತರಕಾರಿ, ಪತ್ರಿಕೆ, ಆಸ್ಪತ್ರೆ, ಮೆಡಿಕಲ್‌ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಬೇಕು ಎನ್ನುವುದು ಸಂಘಟಕರ ನಿರೀಕ್ಷೆಯಾಗಿದೆ.

ಅಂದು ಟೌನ್ ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆದು ನಂತರ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Cauvery Protest : ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ಏಜೆಂಟ್‌ ಎಂದ ಬಿಎಸ್‌ವೈ, ಬಿಜೆಪಿಯಿಂದ ಬೀದಿಗಿಳಿದು ಹೋರಾಟ

Jaya karnataka protest

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಜಯ ಕರ್ನಾಟಕ ಸಂಘಟನೆ

ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಸಮಾಲೋಚನೆಯಲ್ಲಿ ಪಾಲ್ಗೊಂಡ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬಳಿಕ ಪ್ರತ್ಯೇಕವಾಗಿ ವಿಧಾನಸೌಧ ಮುತ್ತಿಗೆಗೆ ತಯಾರಿ ನಡೆಸಿದರು. ಅವರನ್ನು ಬಳಿಕ ಬಂಧಿಸಲಾಯಿತು.

Continue Reading

ದೇಶ

Jairam Ramesh: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’‌ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ

Jairam Ramesh: ಕೆಲವು ದಿನಗಳ ಹಿಂದಷ್ಟೇ ಮೊದಲ ಅಧಿವೇಶನಕ್ಕೆ ಸಾಕ್ಷಿಯಾಗಿರುವ ನೂತನ ಸಂಸತ್‌ ಭವನವನ್ನು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ‘ಮೋದಿ ಮಲ್ಟಿಪ್ಲೆಕ್ಸ್’‌ ಎಂದು ಕರೆದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Edited by

Jairam Ramesh On Narendra Modi Over Parliament Building
Koo

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ನೂತನ ಸಂಸತ್‌ ಭವನದಲ್ಲಿ (New Parliament Building) ಮೊದಲ ಅಧಿವೇಶನ ನಡೆದಿದೆ. ನೂತನ ಸಂಸತ್‌ ಭವನವನ್ನು ಕೂಡ ಪ್ರಜಾಪ್ರಭುತ್ವದ ದೇಗುಲ ಎಂದೇ ಹೇಳಲಾಗುತ್ತಿದೆ. ಅತ್ಯಾಧುನಿಕವಾಗಿ ನಿರ್ಮಿಸಿರುವ ಸಂಸತ್‌ ಭವನವು ಸಕಲ ಸೌಲಭ್ಯಗಳನ್ನೂ ಹೊಂದಿರುವುದರಿಂದ ಗಮನ ಸೆಳೆದಿದೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ (Congress Leader) ಜೈರಾಮ್‌ ರಮೇಶ್‌ (Jairam Ramesh) ಅವರು ನೂತನ ಸಂಸತ್‌ ಭವನವನ್ನು “ಮೋದಿ ಮಲ್ಟಿಪ್ಲೆಕ್ಸ್”‌ (Modi Multiplex) ಎಂದು ಕರೆದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

“ನೂತನ ಸಂಸತ್‌ ಭವನಕ್ಕೆ ತುಂಬ ಜನಪ್ರಿಯತೆ ಕೊಟ್ಟು, ಹೊಗಳಿ, ವೈಭವೀಕರಿಸಿದ ಬಳಿಕ ಚಾಲನೆ ನೀಡಲಾಗಿದೆ. ಆದರೆ, ನಾಲ್ಕು ದಿನಗಳಿಂದ ನಾನು ಸಂಸತ್‌ ಕಲಾಪಗಳಲ್ಲಿ ಪಾಲ್ಗೊಂಡ ಬಳಿಕ ನನ್ನ ಅಭಿಪ್ರಾಯ ಬದಲಾಗಿದೆ. ಏಕೆಂದರೆ, ಹೊಸ ಸಂಸತ್‌ ಭವನವು ದೊಡ್ಡದಾಗಿದೆ. ಸಂಸತ್‌ ವೀಕ್ಷಣೆಗೆ ಭೂತಕನ್ನಡಿಯೇ ಬೇಕಾಗಿದೆ. ಸಂಸತ್‌ ಸದಸ್ಯರ ನಡುವೆ ಸರಿಯಾಗಿ ಸಂಭಾಷಣೆ, ಮಾತುಕತೆ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪ್ರಜಾಪ್ರಭುತ್ವದ ಆಶಯಗಳು ಈಡೇರುತ್ತಿಲ್ಲ. ನರೇಂದ್ರ ಮೋದಿ ಅವರ ಆಶಯದಂತೆಯೇ ಇದನ್ನು ನಿರ್ಮಿಸಿದ ಕಾರಣ ನೂತನ ಸಂಸತ್‌ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಎಂಬುದಾಗಿ ಕರೆಯುವುದೇ ಸೂಕ್ತ” ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

“ನಾನು ಸಂಸತ್ತಿನ ಎರಡೂ ಸದನಗಳಲ್ಲಿ ಓಡಾಡಿದ್ದೇನೆ. ಹಳೆಯ ಸಂಸತ್‌ ಭವನದಲ್ಲಿ ಕಲಾಪಗಳ ಮಧ್ಯೆ ತಿರುಗಾಡಬಹುದಿತ್ತು. ಒಬ್ಬರಿಗೊಬ್ಬರು ಚರ್ಚೆ, ಸಂವಾದದಲ್ಲಿ ನಿರತರಾಗಬಹುದಿತ್ತು. ಎರಡೂ ಕಲಾಪಗಳಿಗೆ ಓಡಾಡಲು, ಕಾರಿಡಾರ್‌ನಲ್ಲಿ ತಿರುಗಾಡುವುದು ಸುಲಭವಾಗಿತ್ತು. ಆದರೆ, ಹೊಸ ಸಂಸತ್‌ ಭವನದಲ್ಲಿ ಇದೆಲ್ಲದಕ್ಕೂ ಅವಕಾಶವಿಲ್ಲ. ಸಂಸತ್‌ ಭವನದ ವಿನ್ಯಾಸವು ಪ್ರಜಾಪ್ರಭುತ್ವವನ್ನೇ ಕೊಲ್ಲುವಂತಿದೆ. ನರೇಂದ್ರ ಮೋದಿ ಅವರು ಸಂವಿಧಾನವನ್ನು ಬದಲಾಯಿಸದೆಯೇ ಪ್ರಜಾಪ್ರಭುತ್ವವನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: New Parliament Building: ನೂತನ ಸಂಸತ್ ಭವನದ ರಚನೆ, ವಿನ್ಯಾಸ ಅದ್ಭುತ! ವಿಡಿಯೊ ನೋಡಿ

ಜೆ.ಪಿ.ನಡ್ಡಾ ತಿರುಗೇಟು

ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಟೀಕೆಗಳಿಗೆ ಬಿಜೆಪಿ ತಿರುಗೇಟು ನೀಡಿದೆ. “ಕಾಂಗ್ರೆಸ್‌ ಮಾತ್ರ ಇಂತಹ ಕನಿಷ್ಠ ಮನಸ್ಥಿತಿಯನ್ನು ಪ್ರದರ್ಶಿಸಲು ಸಾಧ್ಯ. ಹೀನ ಮನಸ್ಥಿತಿಯ ಭಾಗವಾಗಿಯೇ ಕಾಂಗ್ರೆಸ್‌ ಸಂಸತ್‌ ವಿರುದ್ಧ ಮಾತನಾಡುತ್ತಿದೆ. ಆ ಮೂಲಕ ದೇಶದ 140 ಕೋಟಿ ಜನರ ಆಶಯಗಳಿಗೆ ವಿರುದ್ಧವಾದ, ಅವರಿಗೆ ಅವಮಾನ ತೋರುವ ವರ್ತನೆ ಪ್ರದರ್ಶಿಸುತ್ತಿದೆ” ಎಂದಿದ್ದಾರೆ.

“ಸಂಸತ್‌ ವಿರೋಧಿ ಮನಸ್ಥಿತಿಯನ್ನು ಕಾಂಗ್ರೆಸ್‌ ಇದೇ ಮೊದಲ ಬಾರಿಗೆ ಪ್ರದರ್ಶಿಸುತ್ತಿಲ್ಲ. 1975ರಲ್ಲೂ ಇಂತಹ ಮನಸ್ಥಿತಿ ತೋರಿತು. ಆದರೆ, ಆ ಪ್ರಯತ್ನದಲ್ಲಿ ಕಾಂಗ್ರೆಸ್‌ ವಿಫಲವಾಯಿತು” ಎಂದು ಜೆ.ಪಿ.ನಡ್ಡಾ ಎಕ್ಸ್‌ ಸಾಮಾಜಿಕ ಜಾಲತಾಣ ಪೋಸ್ಟ್‌ ಮೂಲಕ ತಿರುಗೇಟು ನೀಡಿದ್ದಾರೆ.

Continue Reading

ಕರ್ನಾಟಕ

Cauvery Protest : ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ಏಜೆಂಟ್‌ ಎಂದ ಬಿಎಸ್‌ವೈ, ಬಿಜೆಪಿಯಿಂದ ಬೀದಿಗಿಳಿದು ಹೋರಾಟ

Cauvery protest : ಬೆಂಗಳೂರಿನ ಮೈಸೂರ್‌ ಬ್ಯಾಂಕ್‌ ಸರ್ಕಲ್‌ನಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್‌ವೈ ಅವರು ಕಾಂಗ್ರೆಸನ್ನು ತಮಿಳುನಾಡಿನ ಏಜೆಂಟ್‌ ಎಂದರು.

VISTARANEWS.COM


on

Edited by

BJP Cauvery protest at Bangalore
ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ
Koo

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ (Cauvery protest) ರಾಜ್ಯದ ಹಿತಾಸಕ್ತಿ ಕಾಪಾಡಬೇಕಿದ್ದ ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ಏಜೆಂಟ್‌ (Congress acting like Tamilnadu Agent) ರೀತಿಯಲ್ಲಿ ವರ್ತಿಸುತ್ತಿದೆ. ಸಚಿವರು ಕೂಡಾ ತಮಿಳುನಾಡಿನ ಪರ ದಲ್ಲಾಳಿಗಳಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಯನ್ನು ನಿಲ್ಲಿಸಲು ಮತ್ತು ರಾಜ್ಯಕ್ಕೆ ನ್ಯಾಯ ಸಿಗುವಂತೆ ಕಾನೂನಾತ್ಮಕ ಹೋರಾಟ ಸಂಘಟಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಕ್ಕಾಗಿ ಬಿಜೆಪಿ ವತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಆಯೋಜಿಸಿದ್ದ ಬೃಹತ್‌ ಪ್ರತಿಭಟನೆಯಲ್ಲಿ (BJP Protest At Bangalore) ಅವರು ಮಾತನಾಡಿದರು.

BJP protest at Bangalore

ʻʻರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಹೇಳುವ ಮೊದಲೇ ನೀರು ಬಿಟ್ಟಿದೆ. ನಮ್ಮ‌ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆʼʼ ಎಂದು ಆಕ್ಷೇಪಿಸಿರುವ ಬಿ.ಎಸ್‌ ಯಡಿಯೂರಪ್ಪ ಅವರು, ʻʻತಮಿಳುನಾಡಿನಿಂದ ತಜ್ಞರ ತಂಡ ಕಳಿಸಿ ಕಾವೇರಿಯಲ್ಲಿ ಎಷ್ಟು ನೀರಿದೆ ನೋಡಲಿ. ನಾವು ಸಂಕಷ್ಟದಲ್ಲಿದ್ದೇವೆ ಅಂತ ಗೊತ್ತಾಗಲಿʼʼ ಎಂದು ಹೇಳಿದರು.

ಕಾವೇರಿಯಲ್ಲಿ ನೀರಿಲ್ಲ ಅಂತ ಗೊತ್ತಿದ್ದರೂ ಹಗಲು ರಾತ್ರಿ ನೀರು ಬಿಟ್ಟು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಹಕ್ಕಿಲ್ಲʼʼ ಎಂದು ಹೇಳಿದ ಯಡಿಯೂರಪ್ಪ, ಇದು ಬಿಜೆಪಿ ಬಿಜೆಪಿಯ ಸಾಂಕೇತಿಕ ಹೋರಾಟ. ಮುಂದೆ ಹಗಲು, ರಾತ್ರಿ ಹೋರಾಟ ಮುಂದುವರೆಸುತ್ತೇವೆ. ಎಲ್ಲಾ ಶಾಸಕ, ಸಂಸದರು ಸೇರಿ ಹೋರಾಟ ಮಾಡುತ್ತೇವೆ. ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ಅವರೂ ಇನ್ನು ಮುಂದೆ ಒಂದು ಹನಿ ನೀರು ಬಿಡೋದಕ್ಕೆ ಆಗಲ್ಲ, ಬಿಡುವುದು ಸರಿಯಲ್ಲ ಎಂದಿದ್ದಾರೆʼʼ ಎಂದರು.

ಕಾಂಗ್ರೆಸ್‌ ಸರ್ಕಾರ ತಮಿಳುನಾಡಿನ ಏಜಂಟರಂತೆ ವರ್ತಿಸುವುದನ್ನು ಬಿಟ್ಟು ಸುಪ್ರೀಂ ಕೋರ್ಟಿನಲ್ಲಿ ಮನವಿ ಮಾಡಬೇಕು, ಸರಿಯಾಗಿ ವಾಸ್ತವಿಕ ಸ್ಥಿತಿಯನ್ನು ತಿಳಿಸಬೇಕು ಎಂದರು.

BJP protest at Bangalore on cauvery

ಬಿಜೆಪಿ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿ

ಬೆಂಗಳೂರು ನಗರ ಬಿಜೆಪಿ ಘಟಕ ಆಯೋಜಿಸಿದ ಈ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ಸಂಸದರಾದ ಪಿ.ಸಿ. ಮೋಹನ್‌, ಶಾಸಕರಾದ ಗೋಪಾಲಯ್ಯ. ಶಾಸಕ ರವಿ ಸುಬ್ರಹ್ಮಣ್ಯ, ಸಿ.ಕೆ ರಾಮಮೂರ್ತಿ, ಉದಯ್ ಗರುಡಾಚಾರ್ ಭಾಗಿಯಾಗಿದ್ದಾರೆ.

ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಪ್ರತಾಪಸಿಂಹ ನಾಯಕ್, ಬಿಜೆಪಿ ಪ್ರಧಾನಕಾರ್ಯದರ್ಶಿಗಳಾದ ಅಶ್ವಥ್ ನಾರಾಯಣ್, ಸಿದ್ದರಾಜು ಸೇರಿದಂತೆ ಹಲವು ಭಾಗಿಯಾಗಿದ್ದಾರೆ. ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಪರಾಜಿತ ಅಭ್ಯರ್ಥಿಗಳು, ಮಾಜಿ ಕಾರ್ಪೊರೇಟರ್ಸ್, ಕಾರ್ಯಕರ್ತರು ಭಾಗಿಯಾಗಿದ್ದಾರೆ.

ತಮಿಳುನಾಡಿನ ಸಿಎಂ ಸಿದ್ದರಾಮಯ್ಯ, ತಮಿಳುನಾಡು ಡಿಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ನಾಯಕರು ಕಾವೇರಿ ನಮ್ಮದು, ತೊಲಗಲಿ, ತೊಲಗಲಿ ಕಾಂಗ್ರೆಸ್ ತೊಲಗಲಿ ಎಂದು ಘೋಷಣೆ ಕೂಗಿದರು. ಬಳಿಕ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

BJP protest at Bangalore on cauvery

ಪಾರ್ಟನರ್‌ ಕಾಪಾಡಲು ಮುಂದಾದ ಡಿ.ಕೆ. ಶಿವಕುಮಾರ್‌

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯ ಅಧಃಪತನವಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪಕ್ಷದ ಪಾರ್ಟ್‌ನರ್ ಡಿಎಂಕೆಯನ್ನು ಕಾಪಾಡಲು ಮುಂದಾಗಿದ್ದಾರೆ. ಇದೇ ಡಿಕೆ ಶಿವಕುಮಾರ್ ಕಾವೇರಿ ನಮ್ಮ ಹಕ್ಕು ಅಂತ ಪಾದಯಾತ್ರೆ ಮಾಡಿದರು. ಈಗ ಅದನ್ನು ಮರೆತಿದ್ದಾರೆ ಎಂದರು.

ಸೋನಿಯಾ ಗಾಂಧಿ ಮಧ್ಯಪ್ರವೇಶಿಸಲಿ ಎಂದ ಬೊಮ್ಮಾಯಿ

ಕಾವೇರಿ ವಿವಾದಕ್ಕೆ ಸಂಬಂಧಿಸಿ ಸುಲಭದ ದಾರಿ ಇದೆ. ನಿಮ್ಮ ಸ್ನೇಹಿತ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರಬರೆಯಿರಿ. ನಮ್ಮ ಬಳಿ ಕುಡಿಯುವ ನೀರಿಲ್ಲ ಅಂತ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ʻʻಕಾನೂನಿನ ಒಳಗೆ ರಾಜಕೀಯವಾಗಿ ನಿಲ್ಲಬೇಕಾದರೆ ಈ ವಿಷಯದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು. ನೀರು ಕೇಳಬೇಡಿ, ಕರ್ನಾಟಕದಲ್ಲಿ ಸಂಕಷ್ಟ ಇದೆ ಅಂತ ಸ್ಟಾಲಿನ್‌ಗೆ ಹೇಳಬೇಕು. ಇದನ್ನು ಹೇಳಿದ್ರೆ ಸೋನಿಯಾ ಗಾಂಧಿ ಅವರಿಗೆ ಏನು ಅಧಿಕಾರ ಇದೆ ಅಂತಾರೆ. ಸಿದ್ದರಾಮಯ್ಯ ಅವರೇ, ಸೋನಿಯಾ ಗಾಂಧಿ ಅವರು ಇಬ್ಬರೂ ಸಿಎಂಗಳನ್ನು ಕೂರಿಸಿಕೊಂಡು ಮಾತನಾಡಿದರೆ ಆಗುತ್ತದೆ ಎಂದು ಸಲಹೆ ನೀಡಿದರು.

Continue Reading

ಕ್ರಿಕೆಟ್

Varanasi Stadium: ವಾರಾಣಸಿ ಕ್ರಿಕೆಟ್‌ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ

Varanasi Stadium: ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ನಿರ್ಮಿಸಿರುವ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದನ್ನು ಶಿವನಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗುತ್ತಿದ್ದು, ಸ್ಟೇಡಿಯಂನ ವೈಶಿಷ್ಟ್ಯ ಇಲ್ಲಿದೆ.

VISTARANEWS.COM


on

Edited by

Varanasi Stadium
Koo

ವಾರಾಣಸಿ: ವಿಶ್ವನಾಥನ ಸನ್ನಿಧಿಯಾಗಿರುವ ವಾರಾಣಸಿಯಲ್ಲಿ ಭವ್ಯ ಹಾಗೂ ಅತ್ಯಾಧುನಿಕ ಸೌಲಭ್ಯಗಳುಳ್ಳ ಕ್ರಿಕೆಟ್‌ ಸ್ಟೇಡಿಯಂ (Varanasi Stadium) ನಿರ್ಮಿಸಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ದೇವರ ನಗರಿ ಎಂದೇ ಖ್ಯಾತಿಯಾಗಿರುವ ವಾರಾಣಸಿಯ ಕ್ರೀಡಾಂಗಣವೂ ಶಿವನಿಂದ ಸ್ಫೂರ್ತಿಗೊಂಡು ನಿರ್ಮಿಸಲಾಗುತ್ತಿದೆ. ಕ್ರೀಡಾಂಗಣದ ಪ್ರತಿಯೊಂದು ವಿಭಾಗದಲ್ಲೂ ಶಿವನ ಛಾಯೆ ಇದೆ. ಹಾಗಾಗಿ, ವಾರಾಣಸಿ ಕ್ರೀಡಾಂಗಣವು ವಿಶೇಷವಾಗಿದೆ. ಇದರ ಎಲ್ಲ ವೈಶಿಷ್ಟ್ಯಗಳು, ಶಿವನ ಛಾಯೆ ಸೇರಿ ಹಲವು ಮಾಹಿತಿ ಇಲ್ಲಿದೆ.

ತ್ರಿಶೂಲ, ಡಮರು, ಶಿವತಾಂಡವ

ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣದ ವಿನ್ಯಾಸವು ಶಿವನಿಂದ ಸ್ಫೂರ್ತಿಗೊಂಡಿದೆ. ಕ್ರೀಡಾಂಗಣದ ಮುಂಭಾಗದಲ್ಲಿ ನಿರ್ಮಿಸಲಿರುವ ಮಾಧ್ಯಮ ಕೇಂದ್ರ (Media Centre) ಶಿವನ ಕೈಯಲ್ಲಿರುವ ಡಮರುಗದಂತೆ ಇರಲಿದೆ.

ಡಮರುಗ ಆಕಾರದ ಮೀಡಿಯಾ ಸೆಂಟರ್‌ ಹಾಗೂ ತ್ರಿಶೂಲದಂತೆ ಕಾಣುವ ಲೈಟ್‌ಗಳು

ಅಷ್ಟೇ ಅಲ್ಲ, ಸ್ಟೇಡಿಯಂ ಚಾವಣಿಯು ಚಂದ್ರನ ಆಕಾರದಲ್ಲಿ, ಪ್ರವೇಶ ದ್ವಾರವು ಬಿಲ್ವಪತ್ರೆ ಹಾಗೂ ಹೊನಲು ಬೆಳಕಿನ ಪಂದ್ಯದ ವೇಳೆ ಝಳಪಿಸುವ ಫ್ಲಡ್‌ಲೈಟ್‌ ತ್ರಿಶೂಲದ ಆಕಾರದಲ್ಲಿ ಇರಲಿವೆ. ಹಾಗಾಗಿ, ಇಡೀ ಸ್ಟೇಡಿಯಂ ಶಿವನಿಂದ ಸ್ಫೂರ್ತಿಗೊಂಡಂತೆ ನಿರ್ಮಾಣವಾಗಲಿದೆ.

ಚಂದ್ರನ ಆಕಾರದಲ್ಲಿ ಇರಲಿರುವ ಚಾವಣಿ

ಸ್ಟೇಡಿಯಂನಲ್ಲಿ ಏನೆಲ್ಲ ಇರಲಿದೆ?

ವಾರಾಣಸಿಯಲ್ಲಿ ನಿರ್ಮಿಸಲಾಗುತ್ತಿರುವ ಕ್ರಿಕೆಟ್‌ ಸ್ಟೇಡಿಯಂ ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣವಾಗಿದೆ. ಇದರಲ್ಲಿ 30 ಸಾವಿರ ಪ್ರೇಕ್ಷಕರು ಕುಳಿತು ಪಂದ್ಯವನ್ನು ವೀಕ್ಷಿಸಬಹುದಾಗಿದೆ. ರಾಜಾತಲಾಬ್‌ ಪ್ರದೇಶದ ರಿಂಗ್‌ ರೋಡ್‌ ಬಳಿ ಇದನ್ನು ನಿರ್ಮಿಸಲಾಗಿದ್ದು, ಏಳು ಪಿಚ್‌ಗಳು ಇರಲಿವೆ.

ಬಿಲ್ವಪತ್ರೆಯ ಕೋಟಿಂಗ್

ಪಂದ್ಯದ ವೇಳೆ ಮಳೆ ಬಂದರೆ ಕ್ಷಿಪ್ರವಾಗಿ ನೀರು ಹೀರಿಕೊಳ್ಳುವ, ಅತ್ಯಾಧುನಿಕ ಸೌಕರ್ಯಗಳುಳ್ಳ ಡ್ರೆಸ್ಸಿಂಗ್‌ ರೂಮ್‌ಗಳು, ಮೂರು ಪ್ರಾಕ್ಟೀಸ್‌ ಪಿಚ್‌ಗಳು ಸೇರಿ ಹಲವು ಸೌಲಭ್ಯಗಳಿವೆ. 2025ರ ಡಿಸೆಂಬರ್‌ನಲ್ಲಿ ಕ್ರೀಡಾಂಗಣಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ICC World Cup: ಶೀಘ್ರದಲ್ಲೇ ಚಿನ್ನಸ್ವಾಮಿ ಸ್ಟೇಡಿಯಂಗೆ ಹೈಟೆಕ್‌ ಸ್ಪರ್ಶ

ಕಾಶಿ ವಿಶ್ವನಾಥನ ಊರಿನಲ್ಲಿ ನಿರ್ಮಾಣವಾಗುತ್ತಿರುವ ಕ್ರಿಕೆಟ್‌ ಸ್ಟೇಡಿಯಂಗೆ ಸುಮಾರು 451 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಯೋಗಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರವು 121 ಕೋಟಿ ರೂ. ಹಾಗೂ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) 330 ಕೋಟಿ ರೂ. ವಿನಿಯೋಗಿಸಲಿದೆ.

Continue Reading
Advertisement
money guide
ಮನಿ ಗೈಡ್22 mins ago

Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!

September 26 Bangalore bandh
ಕರ್ನಾಟಕ42 mins ago

Cauvery Protest : ಸೆ. 26ರಂದು ಬೆಂಗಳೂರು ಬಂದ್‌; 150ಕ್ಕೂ ಅಧಿಕ ಸಂಘಟನೆಗಳ ಜಂಟಿ ಕರೆ, ಸ್ತಬ್ಧವಾಗಲಿದೆ ರಾಜಧಾನಿ

Jairam Ramesh On Narendra Modi Over Parliament Building
ದೇಶ47 mins ago

Jairam Ramesh: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’‌ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ

Prajwal and sathya
ಕರ್ನಾಟಕ53 mins ago

Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!

BJP Cauvery protest at Bangalore
ಕರ್ನಾಟಕ1 hour ago

Cauvery Protest : ಕಾಂಗ್ರೆಸ್‌ ಪಕ್ಷ ತಮಿಳುನಾಡಿನ ಏಜೆಂಟ್‌ ಎಂದ ಬಿಎಸ್‌ವೈ, ಬಿಜೆಪಿಯಿಂದ ಬೀದಿಗಿಳಿದು ಹೋರಾಟ

Rashmika Mandanna
ಬಾಲಿವುಡ್2 hours ago

Rashmika Mandanna: ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್‌ ಸೀರೆಯುಟ್ಟು ಫಸ್ಟ್‌ ಲುಕ್‌ನಲ್ಲೇ ನಾಚಿ ನೀರಾದ ರಶ್ಮಿಕಾ!

kanti parmar dalit FPS
ದೇಶ2 hours ago

Dalit vs Thakors: ದಲಿತರ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಖರೀದಿಸದವರ ಕಾರ್ಡ್‌ಗಳನ್ನು ಪಕ್ಕದ ಹಳ್ಳಿಗೆ ವರ್ಗಾಯಿಸಿದ ಡಿಸಿ!

Varanasi Stadium
ಕ್ರಿಕೆಟ್2 hours ago

Varanasi Stadium: ವಾರಾಣಸಿ ಕ್ರಿಕೆಟ್‌ ಸ್ಟೇಡಿಯಂ ಶಿವಮಯ; ಹೀಗಿರಲಿದೆ ಇದರ ವೈಭವ, ವೈಶಿಷ್ಟ್ಯ

Parineeti Chopra Wedding
South Cinema2 hours ago

Parineeti Chopra: ಮದುವೆಯಲ್ಲಿ ಫೋನ್‌, ಕ್ಯಾಮೆರಾಗಳಿಗೆ ಟೇಪ್‌, 100 ಭದ್ರತಾ ಸಿಬ್ಬಂದಿ!

Hit Run Case in bengaluru
ಕರ್ನಾಟಕ2 hours ago

Road Accident : ಹಿಟ್‌ ಆ್ಯಂಡ್‌ ರನ್‌; ಬೈಕ್‌ ಸವಾರ ಸತ್ತರೂ ನೋಡದೆ ಹೋದ ಕಾರು ಚಾಲಕ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ10 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌