ಪ್ರಮುಖ ಸುದ್ದಿ
Dina Bhavishya : ಬಣ್ಣದ ಮಾತು ನಂಬಿ ಈ ರಾಶಿಯವರು ಹೂಡಿಕೆಗೆ ಕೈ ಹಾಕ್ಬೇಡಿ!
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಭಾನುವಾರವೂ ಮಕರ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕುಂಭ ರಾಶಿಯವರಿಗೆ ಚಂದ್ರನ ಬಲ ಇದ್ದರೂ ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಮಕರ ರಾಶಿಯವರು ಕುಟುಂಬ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ, ಮಾತಿಗೆ ವಿರಾಮ ನೀಡಿ. ಧನಸ್ಸು ರಾಶಿಯವರಿಗೆ ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ತುಲಾ ರಾಶಿಯವರಿಗೆ ಈ ದಿನ ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (30-07-2023)
ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 10:33 ವಾರ: ಭಾನುವಾರ
ನಕ್ಷತ್ರ: ಮೂಲಾ 21:31 ಯೋಗ: ಇಂದ್ರ 06:32
ಕರಣ: ಬಾಲವ 10:33 ಅಮೃತ ಕಾಲ: ಮಧ್ಯಾಹ್ನ 03:41 ರಿಂದ ಸಂಜೆ 05:09ರ ವರೆಗೆ
ದಿನದ ವಿಶೇಷ: ಪದ್ಮಿನಿ ಏಕಾದಶಿ
ವಿಶೇಷ ದಿನ : ಅಂತರಾಷ್ಟ್ರೀಯ ಸ್ನೇಹ ದಿನ
ಸೂರ್ಯೋದಯ : 05:55 ಸೂರ್ಯಾಸ್ತ : 07:10
ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಸಾಯಂಕಾಲ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ಮೇಷ: ನಿಮಗೆ ಈ ದಿನ ಒತ್ತಡದಿಂದ ಕೂಡಿರಲಿದೆ. ಇದರ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ಧಿಡೀರ್ ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ, ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ. ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತತರನ್ನು ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ.
ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ ಇರಲಿದೆ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಗೌಪ್ಯ ವಿಷಯಗಳನ್ನು ಇತತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ.
ಆತ್ಮವಿಶ್ವಾಸತೆದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ. ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ. ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರೋಗ್ಯದ ಕುರಿತು ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಓದುವ ಸಮಯದಲ್ಲಿ ಈ ಕೆಲಸ ಮಾಡ್ಬೇಡಿ ಇಲ್ಲಿದೆ ವಿಡಿಯೊ!
ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು.
ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!
ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
ಕರ್ನಾಟಕ
Bangalore Bandh : ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್ ಪೊಲೀಸ್ ವಶಕ್ಕೆ
Bangalore Bandh : ಬೆಂಗಳೂರಿನಲ್ಲಿ ಬಂದ್ ಆರಂಭವಾಗಿದ್ದು ಉತ್ತಮ ಪ್ರತಿಕ್ರಿಯೆ ದೊರಕಿದೆ. ಈ ನಡುವೆ, ಬಂದ್‌ಗೆ ಕರೆ ನೀಡಿದ್ದ ಕುರುಬೂರು ಶಾಂತ ಕುಮಾರ್ ಅವರನ್ನು ಬೆಳಗ್ಗೆಯೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಕಾವೇರಿ ನೀರು ಬಿಡುಗಡೆಯನ್ನು ನಿಲ್ಲಿಸಬೇಕು (Cauvery water Dispute) ಎಂದು ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವ ಜಲ ಸಂರಕ್ಷಣಾ ಸಮಿತಿಯ ಮುಖ್ಯಸ್ಥರಲ್ಲಿ ಒಬ್ಬರಾದ ರೈತ ಮುಖಂಡ ಕುರುಬೂರು ಶಾಂತ ಕುಮಾರ್ (Kuruburu Shantha kumar) ಅವರನ್ನು ಪೊಲೀಸರು ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ (Kuruburu Shantha kumar Detained)
ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ (Mysore Bank Circle) ಜಮಾವಣೆಗೊಂದು ಪ್ರತಿಭಟನೆ ನಡೆಸಿ ಅಲ್ಲಿಂದ ಟೌನ್ ಹಾಲ್ ಕಡೆಗೆ ಹೋಗುವ ಪ್ಲ್ಯಾನ್ ಹೊಂದಿದ್ದ ಕುರುಬೂರು ಶಾಂತ ಕುಮಾರ್ ಅವರನ್ನು ಸರ್ಕಲ್‌ನಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 144 ಅಡಿ ಜಾರಿ ಮಾಡಿರುವ ನಿಷೇಧಾಜ್ಞೆ ನಿಯಮದಡಿ ಅವರನ್ನು ಬಂಧಿಸಿದ್ದಾರೆ. ಆದರೆ, ಇದೊಂದು ಗೂಂಡಾಗಿರಿ ಎಂದು ಶಾಂತ ಕುಮಾರ್ ಮತ್ತು ಅವರ ಬೆಂಬಲಿಗರು ಆಕ್ಷೇಪಿಸಿದ್ದಾರೆ. ಶಾಂತಕುಮಾರ್ ಅವರ ಜತೆ ಇನ್ನೂ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಸೆಕ್ಷನ್ ಹಾಕಿದ್ದಕ್ಕೆ ಕುರುಬೂರು ಆಕ್ಷೇಪ
ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತ ಕುಮಾರ್, ತಮಿಳುನಾಡಿನಲ್ಲಿ ಜಲ್ಲಿಕಟ್ಟು ಮೊದಲಾದ ರಾಜ್ಯದ ಅಸ್ಮಿತೆಯ ವಿಚಾರ ಬಂದಾಗ ಪೊಲೀಸರು ಪ್ರತಿಭಟನಾಕಾರರಿಗೆ ಬೆಂಬಲ ಕೊಡುತ್ತಾರೆ. ಆದರೆ, ಇಲ್ಲಿ ದಮನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಪೊಲೀಸರು ಪ್ರತಿಭಟನಾಕಾರರಿಗೆ ತೊಂದರೆ ಕೊಡುತ್ತಿದ್ದಾರೆ. ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ ಎಂದು ಹೇಳಿದ ಅವರು, ಕುಡಿಯುವ ನೀರಿಲ್ಲ ಅಂದ್ರೆ ಮನೆಗೆ ಹೋದಾಗ ಏನು ಹೇಳ್ತೀರಾ ಎಂದು ಪೊಲೀಸರನ್ನೇ ಪ್ರಶ್ನಿಸಿದರು.
ʻʻಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. ನಮ್ಮ ಹೋರಾಟ, ಚಳುವಳಿ ಮುಂದುವರಿಯಲಿದೆʼʼ ಎಂದು ಕುರುಬೂರು ಇದೇ ಸಂದರ್ಭದಲ್ಲಿ ಹೇಳಿದರು.
ʻʻರಾಜ್ಯದ ರೈತರು ಗಮನಿಸುತ್ತಿದ್ದಾರೆ. ಇಲ್ಲಿ ಏನೇ ನಡೆದರೂ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಹೀಗಾಗಿ ಪೋಲಿಸರು ಎಚ್ಚರಿಕೆಯಿಂದ ಇರಬೇಕುʼʼ ಎಂದು ಕುರುಬೂರು ಎಚ್ಚರಿಸಿದರು.
ಪೊಲೀಸರು-ಪ್ರತಿಭಟನಾಕಾರರ ನಡುವೆ ವಾಗ್ವಾದ
ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಸೇರಿದ್ದ ರೈತರನ್ನೂ ಪೊಲೀಸರು ಚದುರಿಸಿದರು. ಈ ವೇಳೆ ಪ್ರತಿಭನಾಕಾರರು ಪೋಲೀಸರ ಗೂಂಡಾಗಿರಿಗೆ ಧಿಕ್ಕಾರ ಎಂದು ಕೂಗಿದರು.
ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ಪ್ರತಿಭಟನಾಕಾರರನ್ನು ಟೌನ್ ಗೆ ಹೋಗದಂತೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಭಾರಿ ವಾಗ್ವಾದ ನಡೆಯಿತು. ಸರ್ಕಾರ 144ನೇ ಸೆಕ್ಷನ್ ಹಾಕಿ ದಬ್ಬಾಳಿಕೆ ಮಾಡ್ತಿದೆ. ಕಾನೂನಿಗೆ ನಾವು ಗೌರವ ಕೊಡ್ತಿವಿ ಎಂದು ಹೇಳಿದರು.
ʻʻನೀವೂ ಹೋರಾಟ ಮಾಡಬೇಕಿತ್ತು. ಕಾವೇರಿ ನದಿ ನೀರು ನಿಮಗೆ ಬೇಡ್ವಾ..? ಪೊಲೀಸನವರು ರಜಾ ಹಾಕಿ ಭಾಗವಹಿಸಬೇಕು. ನಾವು ಯಾವುದೇ ತೊಂದರೆ ಮಾಡಲ್ಲʼʼ ಎಂದು ಪೊಲೀಸರಿಗೇ ಪ್ರತಿಭಟನಾಕಾರರು ಬುದ್ಧಿ ಹೇಳಿದರು.
ಹೇಗಿದೆ ಬೆಂಗಳೂರು ಬಂದ್?
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಬೆಂಗಳೂರಿನ ಪ್ರಮುಖ ಭಾಗಗಳಾದ ಮೆಜೆಸ್ಟಿಕ್‌ನಲ್ಲಿ ಜನ ಸಂಚಾರ ಕಡಿಮೆ ಇತ್ತು. ಬಿಎಂಟಿಸಿ ಬಸ್‌ಗಳು ಹೊರಟಿವೆಯಾದರೂ ಜನ ಸಂಚಾರ ಕಡಿಮೆ ಇತ್ತು. ಮೆಟ್ರೋ ಸಂಚಾರ ಎಂದಿನಂತೆ ಇದ್ದು, ಜನರೂ ದೊಡ್ಡ ಸಂಖ್ಯೆಯಲ್ಲಿ ಓಡಾಡುತ್ತಿದ್ದಾರೆ. ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಬಿಕೋ ಎನ್ನುತ್ತಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಬಂದ್ ಹೆಚ್ಚು ಪರಿಣಾಮ ಬೀರಿಲ್ಲ. ಜನ ಜೀವನ ಎಂದಿನಂತೆಯೇ ಇದೆ. ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ಮಕ್ಕಳಿಗೆ ಏನೂ ಸಮಸ್ಯೆ ಆಗಿಲ್ಲ.
ಅಂಕಣ
Raja Marga Column : ನಿಮ್ಮ ಮಕ್ಕಳನ್ನು ಸೂಪರ್ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!
Raja Marga Column : ಟಿವಿ ವಾಹಿನಿಗಳ ಮಕ್ಕಳ ರಿಯಾಲಿಟಿ ಶೋಗಳಿಗೆ ಸ್ವಲ್ಪ ಬ್ರೇಕ್ ಬೇಕಿದೆ! ಯಾಕೆಂದರೆ ಅವು ಮಕ್ಕಳ ಬಾಲ್ಯವನ್ನು ಕಸಿಯುತ್ತಿವೆ. ದುಡ್ಡಿನ ದಂಧೆಯಾಗುತ್ತಿವೆ. ಈ ಬಗ್ಗೆ ಎಚ್ಚರವಿರಲಿ.
ಪ್ರಣವ್ ಧನವಾಡೇ : ಈ ಹೆಸರನ್ನು ಎಲ್ಲೋ ಕೇಳಿದ ನೆನಪು ನಿಮಗಿದೆಯಾ?
ಹೌದು! 2016ರಲ್ಲಿ ಮುಂಬೈಯ ಈ 16 ವರ್ಷದ ಹುಡುಗ (Pranav Dhanawade) ಒಂದು ಕ್ಲಾಸ್ ಒನ್ ಕ್ರಿಕೆಟ್ ಪಂದ್ಯದಲ್ಲಿ ಬರೋಬ್ಬರಿ 1000+ ರನ್ ಬಾರಿಸಿ ಮಿಂಚಿದ್ದ! ಅವನಿಗೆ ಆ ದಿನಗಳಲ್ಲಿ ಜಾಗತಿಕ ಮಟ್ಟದ ಪ್ರಚಾರ ಸಿಕ್ಕಿತ್ತು. ಸಚಿನ್ ತೆಂಡುಲ್ಕರ್ (Sachin Tendulkar) ಜೊತೆಗೆ ಆತನ ಭರ್ಜರಿ ಹೋಲಿಕೆಯು ಕೂಡ ನಡೆಯಿತು.ನೂರಾರು ಸನ್ಮಾನಗಳು ಮತ್ತು ನಗದು ಬಹುಮಾನಗಳು ಆತನಿಗೆ ದೊರೆತವು!
ಆದರೆ ಅವನು ಅದೇ ವೇಗದಲ್ಲಿ ಮುಂದೆ ಹೋಗಿರುತ್ತಿದ್ದರೆ ಅವನಿಗೆ ಈಗ 23 ವರ್ಷ ಆಗಿರಬೇಕಿತ್ತು! ಅವನು ಕನಿಷ್ಠ ಪಕ್ಷ ರಣಜಿ ಪಂದ್ಯ ಆದರೂ ಆಡಬೇಕಿತ್ತು! ಆದರೆ ಅವನು ಈಗ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎನ್ನುವುದು ನಮಗೆ ಯಾರಿಗೂ ಗೊತ್ತಿಲ್ಲ! (Raja Marga Column)
ನಮ್ಮ ಹೆಚ್ಚಿನ ಟಿವಿ ರಿಯಾಲಿಟಿ ಶೋ (Reality Show) ಹೀರೋಗಳ ಕಥೆ ಕೂಡ ಹೀಗೆಯೇ ಇದೆ!
ಖಾಸಗಿ ಟಿವಿಯ ವಾಹಿನಿಗಳಲ್ಲಿ (Private TV Channels) ಇಂದು ಪ್ರಸಾರ ಆಗುತ್ತಿರುವ ನೂರಾರು ರಿಯಾಲಿಟಿ ಶೋಗಳು ಮತ್ತು ಸ್ಪರ್ಧೆಗಳು ಹೆಚ್ಚು ಪ್ರಚಾರದಲ್ಲಿವೆ. ಅಂತ ಹಲವು ಟಿವಿ ಶೋಗಳು ಹಿಂದೆ ಕೂಡ ನಡೆದಿವೆ. ಅದರ ಎಲ್ಲ ವಿಜೇತರ ಪ್ರತಿಭೆಯ ಮೇಲೆ ಗೌರವ ಇರಿಸಿಕೊಂಡು ನಾನು ಕೇಳುವ ಒಂದೇ ಪ್ರಶ್ನೆ — ಅದರ ಸಾವಿರಾರು ವಿಜೇತರು ಮುಂದೆ ಎಲ್ಲಿಗೆ ಹೋಗುತ್ತಾರೆ? ಅವರ ಅನನ್ಯ ಪ್ರತಿಭೆಗಳನ್ನು ಅವರು ಎಷ್ಟು ಬೆಳೆಸಿದ್ದಾರೆ? ಅದರಿಂದ ನಾಡಿನ ಸಂಸ್ಕೃತಿಗೆ ಎಷ್ಟು ಲಾಭ ಆಗಿದೆ?
ಶಾಲಾ ಮಟ್ಟದಲ್ಲಿ ನೂರಾರು ಸಾಂಸ್ಕೃತಿಕ ಸ್ಪರ್ಧೆಗಳು, ಪ್ರತಿಭಾ ಸ್ಪರ್ಧೆಗಳು ನಿರಂತರವಾಗಿ ನಡೆಯುತ್ತಿವೆ. ಅಲ್ಲಿ ವಿಜೇತರ ಘೋಷಣೆ ಆಗುತ್ತದೆ. ಅದರಲ್ಲಿ ಎಷ್ಟು ಜನರು ಮುಂದೆ ಅವರ ಪ್ರತಿಭೆಯನ್ನು ತಮ್ಮ ಹೊಟ್ಟೆಪಾಡಾಗಿ ಮಾಡಿಕೊಳ್ಳುತ್ತಾರೆ? ಎಷ್ಟು ಮಂದಿ ತಮ್ಮ ಕಲೆಯನ್ನು ಪ್ರೀತಿಸುತ್ತಾರೆ? ತಮ್ಮ ಕಲೆಯಿಂದ ಸಮಾಜವನ್ನು ಬೆಳಗುತ್ತಾರೆ? ಕನಿಷ್ಠ ಪಕ್ಷ ಆತ್ಮ ಸಂತೋಷಕ್ಕಾಗಿ ಆದರೂ ಆ ಕಲೆಯನ್ನು ಮುಂದೆ ಕಲಿಯುತ್ತಾರಾ?
ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತ ಹೋದಾಗ ನಮಗೆ ಹಲವು ಕಡೆ ನಿರಾಸೆಯೇ ಆಗುತ್ತದೆ ಮತ್ತು ಕಹಿ ಸತ್ಯಗಳು ಗೋಚರ ಆಗುತ್ತವೆ.
ಹಾಗಾದರೆ ಟಿವಿ ವಾಹಿನಿಗಳಿಂದ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಂದ ಪ್ರತಿಭಾ ಶೋಧ ಆಗ್ತಾ ಇಲ್ಲವೇ ಎನ್ನುವ ಪ್ರಶ್ನೆ ನೀವು ಕೇಳಬಹುದು. ಖಂಡಿತ ಆಗುತ್ತಿದೆ! ಆದರೆ ಅದರ ಅಡ್ಡ ಪರಿಣಾಮಗಳ ಬಗ್ಗೆ ಇದುವರೆಗೆ ಯಾರೂ ಯೋಚನೆ ಮಾಡಿದ ಹಾಗಿಲ್ಲ.
ಉದಾಹರಣೆಗೆ ಇಂದು ಬಾಲಿವುಡನ ಹಿನ್ನೆಲೆ ಗಾಯನ ಲೋಕದ ಸೂಪರ್ ಸ್ಟಾರ್‌ಗಳಾದ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಇವರೆಲ್ಲರೂ ಬೇರೆ ಬೇರೆ ರಿಯಾಲಿಟಿ ಶೋಗಳ ಮೂಲಕ ಬೆಳಕಿಗೆ ಬಂದವರು. ಕನ್ನಡದಲ್ಲಿಯೂ ಅಂತವರು ತುಂಬಾ ಮಂದಿ ಇದ್ದಾರೆ. ಆದರೆ ಅವರಲ್ಲಿ ಹೆಚ್ಚಿನ ಸ್ಟಾರ್‌ಗಳು ಒಳ್ಳೆಯ ನಿರ್ಣಾಯಕರ ಮೂಲಕ ಆಯ್ಕೆ ಆದವರು. ಇನ್ನೂ ವಿವರವಾಗಿ ಹೇಳಬೇಕೆಂದರೆ ಸುನಿಧಿ ಚೌಹಾಣ್, ಶ್ರೇಯಾ ಘೋಷಾಲ್, ಸೋನು ನಿಗಮ್ ಆಯ್ಕೆ ಆಗುವಾಗ ಲತಾ ಮಂಗೇಶ್ಕರ್ ಅಂತವರು ನಿರ್ಣಾಯಕರಾಗಿದ್ದರು!
ಪ್ರತಿಭೆಗಳಿಗೆ ಆಗ ಒಂದಿಷ್ಟೂ ಅನ್ಯಾಯ ಆಗುತ್ತಾ ಇರಲಿಲ್ಲ.
ಅಪಾಯಕಾರಿ ಆದ ಇಂಟರ್ನೆಟ್ ವೋಟಿಂಗ್!
ಆದರೆ ಮುಂದೆ ಯಾವಾಗ ಇಂಟರ್ನೆಟ್ ಮೆಸೇಜ್‌ಗಳ ಮೂಲಕ ವೋಟಿಂಗ್ ಆರಂಭ ಆಯಿತೋ ಅಲ್ಲಿಗೆ ದುಡ್ಡು, ಪ್ರಭಾವ ಇದ್ದವರು ವೋಟುಗಳನ್ನು ಖರೀದಿ ಮಾಡುವುದು ಆರಂಭ ಆಯಿತು. ನಮಗೆ ವೋಟ್ ಮಾಡಿ ಎಂದು ಕೈ ಮುಗಿದು ಭಿಕ್ಷೆ ಬೇಡುವ ದೈನ್ಯತೆಯು ಆ ಪ್ರತಿಭೆಗಳಿಗೆ ಬರಬಾರದಿತ್ತು.
ಕನ್ನಡದಲ್ಲಿ ಕೂಡ ಆರಂಭದ ಎದೆ ತುಂಬಿ ಹಾಡುವೆನು, ಕಾಮಿಡಿ ಕಿಲಾಡಿ, ಮಜಾ ಟಾಕೀಸ್, ಡ್ರಾಮಾ ಜೂನಿಯರ್ ರಿಯಾಲಿಟಿ ಶೋನಲ್ಲಿ ಗೆದ್ದವರು ಮುಂದೆ ನೂರಾರು ಅವಕಾಶಗಳನ್ನು ಪಡೆದರು. ಅವರ ಪ್ರತಿಭೆಯನ್ನು ನಾಡು ಗುರುತಿಸಿ ಬೆಳೆಸಿತು.
ಆದರೆ ಇಲ್ಲಿ ಕೂಡ ಇತ್ತೀಚಿನ ವರ್ಷಗಳಲ್ಲಿ ಯಾವಾಗ ಇಂಟರ್ನೆಟ್ ವೋಟಿಂಗ್ ಆರಂಭ ಆಯಿತೋ ಅಲ್ಲಿಂದ ವೋಟ್ ಖರೀದಿಗಳು, ಪ್ರಭಾವಗಳು ಆರಂಭ ಆದವು. ಆ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತು ಕೊಡುವ ಹಲವು ಶಾಲೆಗಳು ಮಹಾನಗರಗಳಲ್ಲಿ ನಾಯಿಕೊಡೆಗಳ ಹಾಗೆ ಆರಂಭ ಆದವು. ಹೆತ್ತವರು ತಮ್ಮ ಮಕ್ಕಳನ್ನು ಸೂಪರ್ ಹೀರೋ ಮಾಡುವ ಜಿದ್ದಿಗೆ ಬಿದ್ದು ಅಂತಹ ಶಾಲೆಗಳಿಗೆ ದುಡ್ಡು ಸುರಿಯಲು ತೊಡಗಿದರು.
ಆದರೆ ಇಲ್ಲಿ ಕೂಡ ಬಡವರ ಮಕ್ಕಳು, ಗ್ರಾಮಾಂತರ ಭಾಗದ ಪ್ರತಿಭೆಗಳು ನಿಜವಾಗಿಯೂ ಅವಕಾಶಗಳಿಂದ ವಂಚಿತರಾದರು!
ಒಂದು ಸಮೀಕ್ಷೆ ಮಾಡಿ ನೋಡಿ. ಇತ್ತೀಚಿನ ರಿಯಾಲಿಟಿ ಶೋಗಳಲ್ಲಿ ಗೆದ್ದವರಲ್ಲಿ ಎಷ್ಟು ಮಂದಿ ಹಳ್ಳಿಯ ಮಕ್ಕಳು ಇದ್ದಾರೆ? ಎಷ್ಟು ಮಂದಿ ಬಡವರ ಮಕ್ಕಳಿದ್ದಾರೆ? ಎಷ್ಟು ಮಂದಿ ಕನ್ನಡ ಮಾಧ್ಯಮದ ಮಕ್ಕಳಿದ್ದಾರೆ?
ಖಂಡಿತ ಇದ್ದಾರೆ. ಆದರೆ ಅವರ ಪ್ರಮಾಣ ತುಂಬಾ ಕಡಿಮೆ ಇದೆ!
ಜಗತ್ತಿನ ಪ್ರತೀ ಮಗುವೂ ಪ್ರತಿಭಾವಂತ ಮಗುವೇ!
ಈ ಜಗತ್ತಿನ ಪ್ರತೀ ಮಕ್ಕಳೂ ಪ್ರತಿಭಾವಂತರೇ ಆಗಿದ್ದಾರೆ. ಅವರಲ್ಲಿ ಒಂದಲ್ಲ ಒಂದು ಪ್ರತಿಭೆಯನ್ನು ಲೋಡ್ ಮಾಡಿ ಭಗವಂತ ಈ ಜಗತ್ತಿಗೆ ಅವರನ್ನು ಕಳುಹಿಸಿರುತ್ತಾನೆ. ನೀವು ಯಾವ ಮಕ್ಕಳನ್ನು ವಿಶೇಷ ಚೇತನ ಮಕ್ಕಳು ಎಂದು ಕರೆಯುತ್ತೀರೋ ಅವರಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯ ಪೋಷಣೆಗೆ ವೇದಿಕೆ ಬೇಕು. ತರಬೇತು ಬೇಕು. ಹೆತ್ತವರ, ಶಿಕ್ಷಕರ, ಸಮಾಜದ ಪ್ರೋತ್ಸಾಹ ಬೇಕು.
ಅವರ ಶಾಪ ಆದರೆ ನಮ್ಮ ಮಕ್ಕಳು ಎಷ್ಟು ಪ್ರತಿಭೆ ಹೊಂದಿದ್ದಾರೆ ಎಂದರೆ ಅವರು ಸ್ಪರ್ಧೆಯ ಸೋಂಕಿಲ್ಲದೆ ಕೂಡ ತಮ್ಮ ಅಗಾಧವಾದ ಪ್ರತಿಭೆಯನ್ನು ಬೆಳೆಸುವ ಸಾಮರ್ಥ್ಯವನ್ನು ಖಂಡಿತವಾಗಿ ಹೊಂದಿರುತ್ತಾರೆ! ಅವರನ್ನು ರೇಸಿನ ಕುದುರೆ ಮಾಡಿ ರೇಸಿಗೆ ನಿಲ್ಲಿಸುವ ಅಗತ್ಯ ಖಂಡಿತ ಇಲ್ಲ!
ಸ್ಪರ್ಧೆಗಳ ಬಗ್ಗೆ ಸಾಹಿತಿ ಶಿವರಾಮ ಕಾರಂತರು ಹೇಳಿದ್ದೇನು?
ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞರಾದ ಕೋಟ ಶಿವರಾಮ ಕಾರಂತರು ಚಿಕ್ಕ ಮಕ್ಕಳನ್ನು ಸ್ಪರ್ಧೆಗೆ ನಿಲ್ಲಿಸಬೇಡಿ ಎಂದು ಹೇಳುತ್ತಿದ್ದರು. 12 ವರ್ಷಗಳವರೆಗೆ ಮಕ್ಕಳಿಗೆ ಯಾವ ಸ್ಪರ್ಧೆಯನ್ನು ಕೂಡ ಮಾಡಬಾರದು ಎನ್ನುವುದು ಅವರ ಖಚಿತ ಅಭಿಪ್ರಾಯ. ಸ್ಪರ್ಧೆ ಮಾಡಿದರೂ ಎಲ್ಲ ಮಕ್ಕಳಿಗೂ ಸಮಾನ ಬಹುಮಾನ ಕೊಡಿ ಎನ್ನುತ್ತಿದ್ದರು ಕಾರಂತರು.
ಆದರೆ ಇಂದು ಆಗುತ್ತಿರುವುದೆನು?
ಆದರೆ ಸ್ಪರ್ಧೆಯ ಗೆಲುವನ್ನು ತಮ್ಮ ಪ್ರತಿಷ್ಠೆಯನ್ನಾಗಿ ಮಾಡಿಕೊಂಡ ಶಿಕ್ಷಕರು ಮತ್ತು ಹೆತ್ತವರು ಮಕ್ಕಳನ್ನು ರೇಸಿನ ಕುದುರೆ ಮಾಡಿ ಈಗಾಗಲೇ ನಿಲ್ಲಿಸಿ ಆಗಿದೆ! ಈ ಸ್ಪರ್ಧೆಯಲ್ಲಿ ಸೋತವರ ಕಣ್ಣೀರನ್ನು ಮತ್ತು ಗೆದ್ದು ಬೀಗಿದವರ ಆನಂದ ಬಾಷ್ಪವನ್ನು ತಮ್ಮ ಟಿ ಆರ್ ಪಿ ಸರಕನ್ನಾಗಿ ಮಾಡಿಕೊಂಡ ಟಿವಿ ವಾಹಿನಿಗಳಿಗೆ ಈ ಸ್ಪರ್ಧೆಗಳು ಬೇಕೇ ಬೇಕು! ಮಕ್ಕಳ ಗೆಲುವನ್ನು ತಮ್ಮ ಪ್ರತಿಷ್ಠೆ ಎಂದು ಭಾವಿಸುವ ಹೆತ್ತವರು ಇರುವವರೆಗೆ ಈ ಮಕ್ಕಳ ರಿಯಾಲಿಟಿ ಶೋಗಳು ಖಂಡಿತ ನಿಲ್ಲುವುದಿಲ್ಲ. ಈ ಸ್ಪರ್ಧೆಗಳು ಮೆಗಾ ಮನರಂಜನೆಯ ಭಾಗ ಎಂದು ಪರಿಗಣಿಸುವ ವೀಕ್ಷಕರು ಕೂಡ ರಿಯಾಲಿಟಿ ಶೋ ಬೇಕು ಅಂತಾರೆ!
ತಮ್ಮ ಮಕ್ಕಳನ್ನು ಸೂಪರ್ ಹೀರೋ ಅಥವ ಸೂಪರ್ ಹೀರೋಯಿನ್ ಮಾಡಲು ಹೊರಟ ಹೆತ್ತವರು ಮಕ್ಕಳ ಬಾಲ್ಯವನ್ನು ಬರಿದು ಮಾಡುತ್ತಿದ್ದಾರೆ. ತಮ್ಮ ಮಕ್ಕಳು ಒಮ್ಮೆ ಟಿವಿಯಲ್ಲಿ ಕಂಡರೆ ಸಾಕು ಎಂದು ತೆವಲಿಗೆ ಪೋಷಕರು ಬಿದ್ದಿರುವ ಈ ದಿನಗಳಲ್ಲಿ ಅವರು ಬುದ್ಧಿ ಕಲಿಯುವುದು ಯಾವಾಗ?
ಇಲ್ಲೊಬ್ಬರು ತಾಯಿ ತನ್ನ ಎರಡನೇ ಕ್ಲಾಸಿನ ಮುಗ್ಧವಾದ ಮಗಳನ್ನು ದಿನವೂ ಭರತನಾಟ್ಯ, ಶಾಸ್ತ್ರೀಯ ಸಂಗೀತ, ಲಘು ಸಂಗೀತ, ಕರಾಟೆ, ಚೆಸ್, ಕ್ರಿಕೆಟ್, ಯಕ್ಷಗಾನ, ಬ್ಯಾಡ್ಮಿಂಟನ್, ಸ್ವಿಮ್ಮಿಂಗ್ ಕೋಚಿಂಗ್ ಎಂದೆಲ್ಲ ಉಸಿರು ಬಿಗಿ ಹಿಡಿದು ಓಡುತ್ತಿರುವಾಗ ಆ ಮುಗ್ಧ ಮಗುವಿನ ಮೇಲಾಗುತ್ತಿರುವ ಒತ್ತಡವನ್ನು ನನಗೆ ಊಹೆ ಮಾಡಲು ಕಷ್ಟ ಆಗುತ್ತಾ ಇದೆ! ಯಾವುದೇ ಕಲಿಕೆಯು ಮಕ್ಕಳಿಗೆ ಹೊರೆ ಆಗಬಾರದು ಎಂಬ ಸಾಮಾನ್ಯ ಪ್ರಜ್ಞೆಯು ಅಂತಹ ಹೆತ್ತವರಿಗೆ ಬೇಡವಾ?
ಇದನ್ನೂ ಓದಿ: Raja Marga Column : ನೀವು ಜ್ಯೂಲಿ ನೋಡಿದ್ದೀರಾ? ಇದು KGFಗೂ ಮೊದಲು ಬಾಲಿವುಡ್‌ನ ಅಹಂ ಮುರಿದ ಸಿನಿಮಾ
ಡ್ಯಾಡಿ ನಂಬರ್ ಒನ್, ಮಮ್ಮಿ ನಂಬರ್ ಒನ್ ಮೊದಲಾದ ನಾನಸೆನ್ಸ್ ಸ್ಪರ್ಧೆಯ ಮೂಲಕ ಅಪ್ಪ, ಅಮ್ಮನ ಪ್ರೀತಿಯು ಅಳೆಯಲ್ಪಡಬೇಕಾ?
ನನ್ನ ಸಲಹೆ ಏನೆಂದರೆ ಮುಂದಿನ ಕೆಲವು ವರ್ಷಗಳ ಕಾಲ ಎಲ್ಲ ಟಿವಿ ವಾಹಿನಿಗಳ ಸ್ಪರ್ಧಾತ್ಮಕವಾದ ರಿಯಾಲಿಟಿ ಶೋಗಳನ್ನು ನಿಲ್ಲಿಸುವುದು ಒಳ್ಳೆಯದು! ಅಥವಾ ಅವುಗಳಿಗೆ ಒಂದು ಸಣ್ಣ ಬ್ರೇಕ್ ಆದರೂ ಬೇಕು. ವರ್ಷಾನುಗಟ್ಟಲೆ ಈ ಸ್ಪರ್ಧೆಗಳು ಮುಂದುವರಿದರೆ ಆ ಮಕ್ಕಳ ಶಿಕ್ಷಣದ ಮೇಲೆ ಆಗುವ ಕರಾಳತೆಯ ಬಗ್ಗೆ ಕೂಡ ನಾವು ಯೋಚನೆ ಮಾಡಬೇಕು ಅಲ್ಲವೇ?
ರಿಯಾಲಿಟಿ ಶೋಗಳ ಹಂಗಿಲ್ಲದೆ ಇಂದು ಸ್ಟಾರ್ ಆಗಿ ಮಿಂಚುತ್ತಿರುವ ನೂರಾರು ಪ್ರತಿಭೆಗಳು ನನ್ನ ಪಟ್ಟಿಯಲ್ಲಿ ಇವೆ. ಅವರೆಲ್ಲರಿಗೂ ನನ್ನ ಅಭಿನಂದನೆಗಳು.
ಕರ್ನಾಟಕ
ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ
Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.
ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.
ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್; ಭಾರತದಲ್ಲಿ ರೈಲು ಕ್ರಾಂತಿ
ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.
ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿ
Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ
Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಚಂದ್ರನು ಮಂಗಳವಾರ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ಹಾಗೂ ತುಲಾ, ವೃಶ್ಚಿಕ ರಾಶಿಯವರು ಹೂಡಿಕೆ ವ್ಯವಹಾರವನ್ನು ಮಾಡಬೇಡಿ. ಮೇಷ, ತುಲಾ, ಮೀನ ರಾಶಿಯವರು ಮಾತಿನಲ್ಲಿ ಹಿಡಿತವಿರಲಿ. ವೃಷಭ ರಾಶಿಯವರು ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ತೊಡಗಿದ್ದರೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (26-09-2023)
ಮೇಷ: ಆಪ್ತರ ವರ್ತನೆಯು ನಿಮ್ಮ ಮನಸ್ಸಿಗೆ ನೋವು ತರಬಹುದು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಇದರಿಂದ ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರಬಹುದು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಅಪರಿಚತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ ಇರಲಿದೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಮಾಡುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕವಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಜ್ಯೋತಿಷ್ಯಕ್ಕೆ ಶ್ರದ್ಧೆ, ಭಕ್ತಿ ಎಷ್ಟು ಮುಖ್ಯ
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ.ಆರೋಗ್ಯ, ಉದ್ಯೋಗದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಇದನ್ನೂ ಓದಿ : ತಾತಯ್ಯ ತತ್ವಾಮೃತಂ: ದೇಹದಲ್ಲಿ ಜೀವ ಇರುವಾಗ ಏನು ಮಾಡಬೇಕು?
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಉದ್ರೇಕವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | [email protected]
-
ವಿದೇಶ19 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ17 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ12 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ13 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema16 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ17 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ