Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ - Vistara News

ಭವಿಷ್ಯ

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕಟಕ ರಾಶಿಯಿಂದ ಶನಿವಾರ ರಾತ್ರಿ 11:55ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಪಾಡ್ಯ 28:25 ವಾರ: ಶನಿವಾರ
ನಕ್ಷತ್ರ: ಪುನರ್ವಸು 28:46 ಯೋಗ: ವ್ಯಾಘಾತ 26:45
ಕರಣ: ಕಿಂಸ್ತುಘ್ನ 16:21 ಅಮೃತಕಾಲ: ಮಧ್ಯರಾತ್ರಿ 02:20 ರಿಂದ 03:58 ರವರೆಗೆ
ದಿನದ ವಿಶೇಷ: ಆಷಾಢಮಾಸ ಆರಂಭ, ಪುರಿ ಜಗನ್ನಾಥರ ರಥಯಾತ್ರೆ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10:48ರಿಂದ 12:24
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಠಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾರು ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ, ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯದಲ್ಲಿ ನಿಧಾನಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಇರಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಈ ದಿನ ಅನೇಕ ಒತ್ತಡಗಳು ದೂರವಾಗಿ ಉತ್ಸಾಹದಿಂದ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಗುರುವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕರ್ಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಶುಕ್ಲ ಪಕ್ಷ.
ತಿಥಿ: ಪಾಡ್ಯ 26:57 ವಾರ: ಗುರುವಾರ
ನಕ್ಷತ್ರ: ಹಸ್ತಾ 15:31 ಯೋಗ: ಇಂದ್ರ 28:22
ಕರಣ: ಕಿಂಸ್ತುಘ್ನ 13:38 ಅಮೃತಕಾಲ: ಬೆಳಗ್ಗೆ 08:45 ರಿಂದ 10:33
ದಿನದ ವಿಶೇಷ: ಶರನ್ನವರಾತ್ರಿ ಪ್ರಾರಂಭ,ಘಟ ಸ್ಥಾಪನೆ. ಪ್ರಥಮ ದಿವಸ ಶೈಲಪುತ್ರಿ ಅವತಾರ.

ಸೂರ್ಯೋದಯ : 06:09   ಸೂರ್ಯಾಸ್ತ : 06:08

ರಾಹುಕಾಲ: ಮಧ್ಯಾಹ್ನ 01:38 ರಿಂದ 03:08
ಗುಳಿಕಕಾಲ: ಬೆಳಗ್ಗೆ 09:09 ರಿಂದ
10:39
ಯಮಗಂಡಕಾಲ: ಬೆಳಗ್ಗೆ
06:09 ರಿಂದ 07:39

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ‌ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಹಾಗೂ ಆರೋಗ್ಯ ಉತ್ತಮವಾಗಿರಲದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ:ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸುದ್ಧಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯದ ಬೇಡಿಕೆ.ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಇರಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಮಾಡಬೇಕಾಗಬಹುದು. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ ಇದೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ ಇದೆ. ತಾಳ್ಮೆ ಅವಶ್ಯಕ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ ಇರಲಿದೆ. ಆರ್ಥಿಕವಾಗಿ ಬಲಿಷ್ಠವಾಗಿರಲಿದೆ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಉತ್ತಮ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯವಾಗಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಅಮಾವಾಸ್ಯೆ ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಬುಧವಾರ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕರ್ಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (2-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಅಮಾವಾಸ್ಯೆ 24:18 ವಾರ: ಬುಧವಾರ
ನಕ್ಷತ್ರ: ಉತ್ತರ ಪಾಲ್ಗುಣಿ 12:21 ಯೋಗ: ಬ್ರಹ್ಮ 27:19
ಕರಣ: ಚತುಷ್ಪಾದ 10:57
ದಿನದ ವಿಶೇಷ: ಮಹಾಲಯ ಅಮಾವಾಸ್ಯೆ, ಗಾಂಧಿಜಯಂತಿ, ಮಹಾನವಮಿ ಅಮಾವಾಸ್ಯೆ
ಸೂಚನೆ: 2-10-2024 ರಂದು ಕಾಣುವ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಹೀಗಾಗಿ ಸೂತಕ ಆಚರಣೆ ಅವಶ್ಯಕತೆ ಇರುವುದಿಲ್ಲ. ಯಥಾ ಪ್ರಕಾರ ದಿನದಂತೆ ಊಟೋಪಚಾರ ಮಾಡಬಹುದು.

ಸೂರ್ಯೋದಯ : 06:09   ಸೂರ್ಯಾಸ್ತ : 06:09

ರಾಹುಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ:
ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ
7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯದ ಕೋರುವರು. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದ್ದು, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ, ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದ್ದು. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸುವಿರಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಪ್ರಮುಖ ಜನರೊಡನೆ ವ್ಯವಹರಿಸುವಾಗ ಈ ರಾಶಿಯವರು ಎಚ್ಚರಿಕೆಯಿಂದ ಮಾತನಾಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ಚತುರ್ದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಮಂಗಳವಾರ ಸಂಜೆ 06:19ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕರ್ಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (1-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ 21:38 ವಾರ: ಮಂಗಳವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 09:14 ಯೋಗ: ಶುಕ್ಲ 26:16
ಕರಣ: ವಿಷ್ಟಿ (ಭದ್ರ) 08:20 ಅಮೃತಕಾಲ: ಬೆಳಗಿನ ಜಾವ 04:15 ರಿಂದ 06:03

ಸೂರ್ಯೋದಯ : 06:09   ಸೂರ್ಯಾಸ್ತ : 06:09

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ
12 ರಿಂದ 1.30
ಯಮಗಂಡಕಾಲ: ಬೆಳಗ್ಗೆ
9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ತಿಂಗಳ ಆರಂಭದ ದಿನವೇ ಉದ್ಯೋಗದ ಸ್ಥಳದಲ್ಲಿ ನೀವು ಕಿರಿಕಿರಿ ಅನುಭವಿಸುವ ಸಾಧ್ಯತೆ ಇರುವುದರಿಂದ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ. ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ವಿಶೇಷ ಅನುಕೂಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು ಮತ್ತು ಈ ಯೋಜನೆ ಯಶಸ್ವಿಯಾಗಲಿದೆ. ಹತಾಶೆಯ ಭಾವನೆ ನಿಮ್ಮನ್ನು ಆವರಿಸಲು ಬಿಡಬೇಡಿ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ. ಪ್ರೇಮಿಗಳಿಗೆ ಶುಭ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಅನಿರೀಕ್ಷಿತ ಲಾಭದ ಮೂಲಕ ಆರ್ಥಿಕ ಬಲಗಳು ಸುಧಾರಿಸುತ್ತವೆ. ನಿಮ್ಮ ಸಹೋದ್ಯೋಗಿಗಳು ಎಂದಿಗಿಂತಲೂ ಉತ್ತಮವಾಗಿ ನಿಮ್ಮನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಧರ್ಮಕಾರ್ಯಗಳು, ಹವನಗಳು, ಮಂಗಳಕರ ಸಮಾರಂಭಗಳನ್ನು ಮನೆಯಲ್ಲಿ ಕೈಗೊಳ್ಳವ ಸಾಧ್ಯತೆ ಇದೆ. ಅತಿಯಾದ ದ್ವೇಷದ ಭಾವನೆಯಿಂದ ನಿಮ್ಮ ಮನಸ್ಸುನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದಲ್ಲಿ ಕೊಂಚ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳುವಳಿಕೆಗಳನ್ನೂ ಹೋಗಲಾಡಿಸುತ್ತದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ದಿನದ ಮಟ್ಟಿಗೆ ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸ್ನೇಹಿತರ ಜತೆಗಿನ ನಿಮ್ಮ ಅಪಾರ್ಥ ಕೆಲವು ಅಹಿತಕರ ಪ್ರತಿಕ್ರಿಯೆಗಳನ್ನು ಉಂಟು ಮಾಡಬಹುದು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಯಮದಿಂದ ವರ್ತಿಸಿ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರಲಿದೆ. ಆರ್ಥಿವಾಗಿ ಉತ್ತಮ ಫಲ ಇರಲಿದೆ. ಆರೋಗ್ಯದ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಪ್ರಮುಖ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಅನೇಕ ಒತ್ತಡದಿಂದ ಹೊರಬರುವಿರಿ. ಹಣಕಾಸಿನಲ್ಲಿ ಸುಧಾರಣೆ ಇರಲಿದೆ. ದೀರ್ಘಕಾಲದ ಬಾಕಿ ಮರುಪಾವತಿ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ದಿನದ ಕೊನೆಯಲ್ಲಿ ಮನಸ್ತಾಪ ಆದಷ್ಟು ಮಾತಿಗೆ ವಿರಾಮವಿರಲಿ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಚಿಕ್ಕ ಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವುದು ಬೇಡ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗಿಗಳಿಗೆ ಆಲಸ್ಯದಿಂದಾಗಿ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೆಲಸ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ವಿದೇಶ ಪ್ರವಾಸಕ್ಕೆ ಕಾಯುತ್ತಿರುವವರಿಗೆ ಶುಭ ಸೂಚನೆ ಸಿಗಲಿದೆ. ಸೃಜನಶೀಲ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ:ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು ಮತ್ತು ನೀವು ಹಣದ ಲಾಭವನ್ನು ಪಡೆಯಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಇಮ್ಮಡಿ ಆಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ಕೆಲವು ಊಹೆಗಳು ಲಾಭ ತರುತ್ತವೆ. ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಸೋಮವಾರವು ಕನ್ಯಾರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-09-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 19:05 ವಾರ: ಸೋಮವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 33:15 ಯೋಗ: ಶುಭ 25:16
ಕರಣ: ವಾಣಿಜ 19:05 ಅಮೃತಕಾಲ: ಮಧ್ಯರಾತ್ರಿ 02:05 ರಿಂದ 03:52
ದಿನದ ವಿಶೇಷ: ಸೋಮ ಪ್ರದೋಷ

ಸೂರ್ಯೋದಯ : 06:09   ಸೂರ್ಯಾಸ್ತ : 06:10

ರಾಹುಕಾಲ: ಬೆಳಗ್ಗೆ 07:39 ರಿಂದ 09:09
ಗುಳಿಕಕಾಲ: ಮಧ್ಯಾಹ್ನ 01:40ರಿಂದ
03:10
ಯಮಗಂಡಕಾಲ: ಬೆಳಗ್ಗೆ
10:39 ರಿಂದ 12:09

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತತರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸತೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ, ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು8 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು12 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು13 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌