ಚಂದ್ರನು ವೃಶ್ಚಿಕ ರಾಶಿಯಿಂದ ಬುಧವಾರ ಧನಸ್ಸು ರಾಶಿಯನ್ನು ಮಧ್ಯಾಹ್ನ 12:31ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ,ಕನ್ಯಾ, ವೃಶ್ಚಿಕ,ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಕಟಕ ರಾಶಿಯವರು ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (19-06-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 07:27 ವಾರ: ಬುಧವಾರ
ನಕ್ಷತ್ರ: ವಿಶಾಖಾ 17:22 ಯೋಗ: ಸಿದ್ಧಿ 21:10
ಕರಣ: ಬಾಲವ 07:27 ಅಮೃತಕಾಲ: ಬೆಳಗ್ಗೆ 08:03 ರಿಂದ 09:45 ರವರೆಗೆ
ದಿನದ ವಿಶೇಷ: ಬೆಂಗಳೂರು ಹೊಸಕೆರೆಹಳ್ಳಿ ಉತ್ಸವ
ಸೂರ್ಯೋದಯ : 05:54 ಸೂರ್ಯಾಸ್ತ : 06:48
ಮೇಷ: ಶ್ರಮದ ಜೀವಕೆ ವಿಶ್ರಾಂತಿಯು ಸಿಗುವುದು. ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6
ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5
ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3
ಕಟಕ:ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ. ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕ ಶುಭ ಫಲ. ಅದೃಷ್ಟ ಸಂಖ್ಯೆ: 6
ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗಲಿದ್ದಾರೆ. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5
ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರ ಸಾಮರಸ್ಯ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5
ವೃಶ್ಚಿಕ :ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹ ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7
ಧನಸ್ಸು:ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4
ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳು ಮಾಡುವ ಸಾಧ್ಯತೆ ಇದೆ. ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4
ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com