Site icon Vistara News

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರಿಗೆ ಸಿಗಲಿದೆ ಗುಡ್‌ ನ್ಯೂಸ್‌

Dina Bhavishya

ಚಂದ್ರನು ಭಾನುವಾರವೂ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (2-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 26:40 ವಾರ: ಭಾನುವಾರ
ನಕ್ಷತ್ರ: ರೇವತಿ 25:39 ಯೋಗ: ಆಯುಷ್ಮಾನ್ 12:09
ಕರಣ: ಭವ 15:52 ಅಮೃತ ಕಾಲ: ರಾತ್ರಿ 11:26 ರಿಂದ 12:55 ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:43

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯದ ಕೋರಿಕೆ ಬರಬಹುದು. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅದೃಷ್ಟ ಸಂಖ್ಯೆ: 9

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದೆ. ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮವಾಗಿರಲಿದೆ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದುವಿರಿ. ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ, ಆದಷ್ಟು ಆಹಾರ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version