Site icon Vistara News

Dina Bhavishya : ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ಈ ರಾಶಿಯವರು ವ್ಯರ್ಥ ಪ್ರಯತ್ನ ಮಾಡಬೇಡಿ

Dina Bhavishya

ಚಂದ್ರನು ಸೋಮವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕಟಕ ರಾಶಿಯವರು ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (24-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 25:22 ವಾರ: ಸೋಮವಾರ
ನಕ್ಷತ್ರ: ಉತ್ತರಾಷಾಡ 15:53 ಯೋಗ:ಇಂದ್ರ 11:50
ಕರಣ: ವಣಿಜ 14:25 ಅಮೃತಕಾಲ: ಬೆಳಗ್ಗೆ 09:48 ರಿಂದ 11:20
ದಿನದ ವಿಶೇಷ: ಮೇಲುಕೋಟೆ ಪಲ್ಲವೋತ್ಸವ, ಕೊಳ್ಳೇಗಾಲ ಸುಬ್ರಮಣ್ಯ ಸ್ವಾಮಿ ವರ್ಧಂತಿ

ಸೂರ್ಯೋದಯ : 05:55   ಸೂರ್ಯಾಸ್ತ : 06:49

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಆರ್ಥಿಕ ವ್ಯವಹಾರಗಳ ಕುರಿತಾಗಿ ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಅದರಲ್ಲಿಯೂ ಕಣ್ಣಿನ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸೂಕ್ತ. ಆರ್ಥಿಕವಾಗಿ ಪ್ರಗತಿ ಇರಲಿದೆ. ವ್ಯಾಪಾರ-ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ ಇದೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

ಕಟಕ:ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆ ಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ ಇದೆ. ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಕನ್ಯಾ:ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ ಇದೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವ್ಯರ್ಥ ಪ್ರಯತ್ನ ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ.ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ವೃಶ್ಚಿಕ : ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಧನಸ್ಸು: ಕುಟುಂಬ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ನೋವು ಆಗಲಿದೆ. ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲವಿದು. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಿಂದ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version