Site icon Vistara News

Dina Bhavishya : ಕುಟುಂಬದ ಆಪ್ತರಿಂದ ಶುಭ ಸುದ್ದಿ; ಬಹು ದಿನಗಳ ಕನಸು ನನಸಾಗುವ ಕಾಲವಿದು

Dina Bhavihsya

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ವೃಷಭ ರಾಶಿಯವರು ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಕಟಕ ರಾಶಿಯವರು ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (25-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 23:10 ವಾರ: ಮಂಗಳವಾರ
ನಕ್ಷತ್ರ: ಶ್ರವಣಾ 14:31 ಯೋಗ: ವೈಧೃತಿ 09:04
ಕರಣ: ಭವ 12:17 ಅಮೃತಕಾಲ: ಬೆಳಗಿನ ಜಾವ 03:19 ರಿಂದ 04:49
ದಿನದ ವಿಶೇಷ: ಸಂಕಷ್ಟಹರ ಚತುರ್ಥಿ

ಸೂರ್ಯೋದಯ : 05:56   ಸೂರ್ಯಾಸ್ತ : 06:49

ರಾಹುಕಾಲ: ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 2

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸ್ನೇಹಿತರು,ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರಲಿದೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿದೆ. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮವಾಗಿರಲಿದೆ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಕನ್ಯಾ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ ಇದೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ವೃಶ್ಚಿಕ : ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ ಇದೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗೃತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದ ಕಾರಣಕ್ಕೆ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಮಕರ: ಹಾಸ್ಯ ಪ್ರವೃತ್ತಿಯಿಂದ,ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ‌ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ.ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯವು ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version