Site icon Vistara News

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

Dina Bhavishya

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 14:19 16:26 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 08:48 ಯೋಗ: ಶೋಭನ 18:52
ಕರಣ: ಕೌಲವ 14:19 ಅಮೃತಕಾಲ: ಬೆಳಗ್ಗೆ 05:17 ರಿಂದ 06:48

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ವೃಶ್ಚಿಕ : ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version