Site icon Vistara News

Dina Bhavishya : ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

read your daily horoscope predictions for march 10th 2024

ಚಂದ್ರನು ಮೀನ ರಾಶಿಯಿಂದ ಭಾನುವಾರ ಮೇಷ ರಾಶಿಗೆ ರಾತ್ರಿ 08:19ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ,ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ಹಾಗೂ ಧನಸ್ಸು ರಾಶಿಯ ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ವೃಷಭ ರಾಶಿಯವರು ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಕಟಕ ರಾಶಿಯವರು ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-03-2024)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ
ತಿಥಿ: ಅಮಾವಾಸ್ಯೆ 14:29 ವಾರ: ಭಾನುವಾರ
ನಕ್ಷತ್ರ: ಪೂರ್ವ ಭಾದ್ರಪದ 25:54 ಯೋಗ: ಸಾಧ್ಯ 16:12
ಕರಣ: ನಾಗವ 14:29 ಅಮೃತ ಕಾಲ: ಸಂಜೆ 06:55 ರಿಂದ 08:19ರ ವರೆಗೆ
ದಿನದ ವಿಶೇಷ: ಶಿವರಾತ್ರಿ ಅಮಾವಾಸ್ಯೆ, ಕೆಳದಿ ರಥ

ಸೂರ್ಯೋದಯ : 6:30   ಸೂರ್ಯಾಸ್ತ : 06:30

ರಾಹುಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣವಿದು, ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:6

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ಅತಿರೇಕದ ಮಾತುಗಳಿಂದ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯವು ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:5

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯ ಕುರಿತು ಕಾಳಜಿ ಇರಲಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಹೆಚ್ಚಾಗಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆದರೆ ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಬರಲಿದೆ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ ಇರಲಿದೆ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ .
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸ-ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ ಬರಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಉತ್ಸಾಹಭರಿತ ಜೀವನ ಇರಲಿದೆ. ಆರ್ಥಿಕವಾಗಿ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಕುಟುಂಬ ಸದಸ್ಯರಿಗೆ ಸಲಹೆ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಹೆಚ್ಚಾಗಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಧನಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version