Site icon Vistara News

Dina Bhavishya : ಈ ರಾಶಿಯವರಿಗೆ ಸ್ನೇಹಿತರಿಂದಲೇ ಖುಲಾಯಿಸಲಿದೆ ಅದೃಷ್ಟ!

read your daily horoscope predictions for march 13 2024

ಚಂದ್ರನು ಬುಧವಾರವೂ ವೃಷಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ವೃಷಭ ರಾಶಿಯವರಿಗೆ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ವೃಶ್ಚಿಕ ರಾಶಿಯವರು ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಚೌತಿ 25:25 ವಾರ: ಬುಧವಾರ
ನಕ್ಷತ್ರ: ಅಶ್ವಿನಿ 18:23 ಯೋಗ: ಇಂದ್ರ 24:47
ಕರಣ: ವಣಿಜ 14:39 ಅಮೃತ ಕಾಲ: ಬೆಳಗ್ಗೆ 11:50 ರಿಂದ 01:18ರವರೆಗೆ
ದಿನದ ವಿಶೇಷ: ಹೊರನಾಡು ಅನ್ನಪೂಣೇಶ್ವರಿ ರಥ

ಸೂರ್ಯೋದಯ : 6:28   ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ಇಂದು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಅದರ ಬಗ್ಗೆ ಅನುಭವಿ ಜನರೊಂದಿಗೆ ಮಾತನಾಡಬೇಕು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ನಿಮ್ಮ ಸಭ್ಯ ನಡವಳಿಕೆಯು ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶಕ್ಕೆ ಹೋಗಿ ಅಧ್ಯಯನ ಮಾಡಲು ಬಯಸುತ್ತಿದ್ದರೆ ಆರ್ಥಿಕ ಬಿಕ್ಕಟ್ಟು ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು ತೊಂದರೆಗೆ ಕಾರಣವಾಗುತ್ತದೆ. ಆರೋಗ್ಯ ಪರಿಪೂರ್ಣವಾಗಿ ಇದ್ದರು, ದೈಹಿಕ ಶ್ರಮ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದುವ ಸಾಧ್ಯತೆ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭವಾಗಲಿ.
ಅದೃಷ್ಟ ಸಂಖ್ಯೆ: 1

ಕನ್ಯಾ: ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನವಾಗಲಿದೆ. ಸಕರಾತ್ಮಕ ಆಲೋಚನೆಗಳು ನಿಮ್ಮ ಉತ್ಸಾಹ ಇಮ್ಮಡಿಗೊಳಿಸಿಲಿದೆ. ಆರೋಗ್ಯ ಪರಿಪೂರ್ಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಕಾರಾತ್ಮಕ ಆಲೋಚನೆಗಳು ತಲೆದೊರಲಿವೆ. ಆದಷ್ಟು ಯೋಗ ಧ್ಯಾನದ ಮೂಲಕ ನೆಮ್ಮದಿ ತಂದುಕೊಳ್ಳುವುದು ಉತ್ತಮ. ಸ್ನೇಹಿತರೊಂದಿಗೆ ಕಾಲಕಳೆಯುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಇಂದು ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಭವಿಷ್ಯವನ್ನು ಯೋಜಿಸಲು ಸೂಕ್ತ ದಿನವಿದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ನಿಮ್ಮ ಆರೋಗ್ಯ ಇಂದು ಕೈಕೊಡಲಿದೆ. ನೀವು ನಿಮ್ಮ ಕೆಲಸದ ಮೇಲೆ ಗಮನ ಕೊಡುವುದು ಕಷ್ಟವಾಗಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಸ್ನೇಹಿತರೊಂದಿಗೆ ವಿರಾಮ ಭೋಜನವಿದು. ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಆರ್ಥಿಕವಾಗಿ ಇಂದು ನಿಮಗೆ ಖರ್ಚಿನ ದಿನ.
ಅದೃಷ್ಟ ಸಂಖ್ಯೆ: 1

ಕುಂಭ: ಆಭರಣದ ಹೂಡಿಕೆ ವ್ಯವಹಾರಗಳಲ್ಲಿ ಲಾಭ ಇರಲಿದೆ. ಸಮೃದ್ಧಿ ತುಂಬಿದ ದಿನವಿರಲಿದೆ. ನಿಮ್ಮ ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮೀನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಅನಿರಿಕ್ಷಿತ ಲಾಭ ಸಿಗಲಿದೆ. ಸಮಸ್ಯೆಗಳ ಕುರಿತು ಚಿಂತೆ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣ ಇರಲಿದೆ. ಆರ್ಥಿಕವಾಗಿ ಸದೃಢ ವಾತಾವರಣ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version