Site icon Vistara News

Dina Bhavishya : ಈ ರಾಶಿಯವರಿಗೆ ಹೊಸ ಹೊಸ ಅವಕಾಶಗಳು ತೆರೆಯಲಿವೆ!

dina bhavishya read your daily horoscope predictions for March 14 2024

ಚಂದ್ರನು ಬುಧವಾರವೂ ವೃಷಭ ರಾಶಿಯಲ್ಲೇ ನೆಲಸಲಿದ್ದು, ಗುರುವಾರ ರಾತ್ರಿ ಮಿಥುನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಧನಸ್ಸು ರಾಶಿಯವರಿಗೆ ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 23:25 ವಾರ: ಗುರುವಾರ
ನಕ್ಷತ್ರ: ಭರಣಿ 16:54 ಯೋಗ: ವೈಧೃತಿ 21:58
ಕರಣ: ಭವ 12:20 ಅಮೃತ ಕಾಲ: ಮಧ್ಯಾಹ್ನ 12:25 ರಿಂದ 01:55ರ ವರೆಗೆ
ದಿನದ ವಿಶೇಷ: ಮೀನ ಸಂಕ್ರಮಣ

ಸೂರ್ಯೋದಯ : 6:28   ಸೂರ್ಯಾಸ್ತ : 06:30

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕವಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಮಿಶ್ರ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 7

ವೃಷಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ಕೆಲವು ದಿನಗಳ ಹಿಂದೆ ಹಣವನ್ನು ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಇಂದು ನೀವು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ನಡವಳಿಕೆಯಿಂದ ಕಿರಿಕಿರಿಗೊಳ್ಳಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ ಇದೆ.
ಅದೃಷ್ಟ ಸಂಖ್ಯೆ: 5

ಕಟಕ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗಲಿದೆ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಧನಸ್ಸು: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ ಇದೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಮಕರ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕವಾಗಿದೆ. ಹಣಕಾಸು ವಿಷಯದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಕುಂಭ: ನೀವು ಸಂತೋಷವನ್ನು ಪಡೆಯಲಿದ್ದೀರಿ. ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮೀನ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ ನಿಮ್ಮದಾಗಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version