Site icon Vistara News

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Dina Bhavishya

ಚಂದ್ರನು ಶನಿವಾರವೂ ಮಿಥುನ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಮೇಷ ರಾಶಿಯವರಿಗೆ ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಮಿಥುನ ರಾಶಿಯವರು ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಎದುರಾಗಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಸಿಂಹ ರಾಶಿಯವರು ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-03-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ.
ತಿಥಿ: ಸಪ್ತಮಿ 21:37 ವಾರ: ಶನಿವಾರ
ನಕ್ಷತ್ರ: ರೋಹಿಣಿ 16:04 ಯೋಗ: ಪ್ರೀತಿ 18:06
ಕರಣ: ಗರಜ 09:47 ಅಮೃತ ಕಾಲ: ಮಧ್ಯಾಹ್ನ 12:54 ರಿಂದ 02:30ರ ವರೆಗೆ
ದಿನದ ವಿಶೇಷ: ರಾಷ್ಟ್ರೀಯ ಲಸಿಕಾ ದಿನ, ದ್ರೌಪದಾಂಬ ಕರಗ ಮಹೋತ್ಸವ

ಸೂರ್ಯೋದಯ : 6:26   ಸೂರ್ಯಾಸ್ತ : 06:30

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ
ಅದೃಷ್ಟ ಸಂಖ್ಯೆ: 7

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಎದುರಾಗಬಹುದು. ಅನವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಿಂದ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋವುಗಾವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ದೀರ್ಘಕಾಲದ ಪ್ರಯಾಣ ಇರಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ.ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು.ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version